ನವದೆಹಲಿ,ಮೇ,9,2025 (www.justkannada.in): ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಉಂಟಾಗಿರುವ ನಡೆವೆಯೇ ಜಮ್ಮು ಮತ್ತು ಕಾಶ್ಮೀರದ ಅಂತರರಾಷ್ಟ್ರೀಯ ಗಡಿ ಬಳಿ ಒಳನುಸುಳಲು ಯತ್ನಿಸಿದ್ದ ಏಳು ಉಗ್ರರನ್ನು ‘ಬಿಎಸ್ ಎಫ್’ ಹತ್ಯೆ ಮಾಡಿದೆ.
ಜಮ್ಮು ಕಾಶ್ಮೀರದ ಸಾಂಬಾದಲ್ಲಿ ಭಾರತದ ಗಡಿ ಪ್ರವೇಶಕ್ಕೆ ಯತ್ನಿಸಿದ. 7 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆಗೈದಿದ್ದಾರೆ. ಇದೀಗ ಈ ಒಂದು ವಿಡಿಯೋ ಭಾರತೀಯ ಸೇನೆ ರಿಲೀಸ್ ಮಾಡಿದೆ. ಗುರುವಾರ ತಡರಾತ್ರಿ ಸಾಂಬಾ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಉಗ್ರರ ಚಲನವಲನವನ್ನು ಗಮನಿಸಿ ಸೇನೆಯು ಕಾರ್ಯಾಚರಣೆ ಆರಂಭಿಸಿದೆ. ಈ ವೇಳೆ ಉಗ್ರರು ಹಾಗೂ ಸೇನಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ಬಿಎಸ್‌ಎಫ್ ವಕ್ತಾರರು ಹೇಳಿದ್ದಾರೆ.
ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಭಾರತದ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ’ದ ಮೂಲಕ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿತ್ತು. ಇದರ ಬೆನ್ನಲ್ಲೇ ಗಡಿಯಲ್ಲಿ ಎರಡೂ ದೇಶಗಳ ನಡುವೆ ಸಂಘರ್ಷ ತೀವ್ರಗೊಂಡಿದ್ದು ಭಾರತದ ದಾಳಿಗೆ ಪಾಕಿಸ್ತಾನ ಪತರುಗುಟ್ಟಿದೆ.
Key words: BSF, kills, 7 terrorists, trying , India
The post ಭಾರತದೊಳಗೆ ನುಸುಳಲು ಯತ್ನಿಸಿದ 7 ಉಗ್ರರನ್ನು ಹತ್ಯೆಗೈದ ‘ಬಿಎಸ್ ಎಫ್’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





