20
March, 2026

A News 365Times Venture

20
Friday
March, 2026

A News 365Times Venture

ತೆರಿಗೆ ಪ್ರಕ್ರಿಯೆಯಲ್ಲಿ ಸುಧಾರಣೆ ತರಲು ಸರ್ಕಾರ ಬದ್ಧ-ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಮೇ,17,2025 (www.justkannada.in): ತೆರಿಗೆ ಪ್ರಕ್ರಿಯೆಯಲ್ಲಿ ಸುಧಾರಣೆ ತರಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಇಂದು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.

ನಾನು ಹಣಕಾಸಿನ ಮಂತ್ರಿಯಾಗಿದ್ದರೂ ಸಹ ತೆರಿಗೆ ಅಧಿಕಾರಿಗಳ ಕಾರ್ಯನಿರ್ವಹಣೆಯಲ್ಲಿ ಅನಗತ್ಯ ಮದ್ಯಪ್ರವೇಶ ಮಾಡಲು ಬಯಸುವುದಿಲ್ಲ. ಆದರೆ  ಅಧಿಕಾರಿಗಳು ಇಲಾಖೆಗೆ ನೀಡಿರುವ ತೆರಿಗೆ ಸಂಗ್ರಹಣೆಯ ಗುರಿಯನ್ನು ಸಾಧಿಸಲು ಪ್ರಯತ್ನಿಸಬೇಕು. ಬೆಂಗಳೂರಿನಲ್ಲಿ ತೆರಿಗೆ ಸೋರಿಕೆ ಹೆಚ್ಚಿನ ಮಟ್ಟದಲ್ಲಿದೆ. ಕರ್ನಾಟಕ ತೆರಿಗೆ ಸಂಗ್ರಹಣೆಯಲ್ಲಿ ಮುಂಚೂಣಿಯಲ್ಲಿದೆ.  ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ಹೆಚ್ಚಿನ ಸುಧಾರಣೆಗಳನ್ನು ತರಲು ಸರ್ಕಾರ ಬದ್ಧವಾಗಿದೆ. ತೆರಿಗೆ ಅಧಿಕಾರಿಗಳ ಸಂಘದ ಬೇಡಿಕೆಗಳನ್ನು ಸರ್ಕಾರ ಪರಿಶೀಲಿಸಲಾಗುವುದು. ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರ ಎಂದಿಗೂ ಸ್ಪಂದಿಸುತ್ತದೆ. ಅಂತೆಯೇ ಕರ್ತವ್ಯಲೋಪ ಎಸಗುವ ಅಧಿಕಾರಿ ನೌಕರರ ಮೇಲೆ ಶಿಸ್ತಿನ ಕ್ರಮವನ್ನೂ ಸರ್ಕಾರ ತೆಗೆದುಕೊಳ್ಳುತ್ತದೆ ಎಂದರು.

ತೆರಿಗೆ ಸಂಗ್ರಹಣೆಯಲ್ಲಿ ಗುರಿ ಸಾಧನೆ ಆಗಬೇಕು

ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಪ್ರಮುಖ ಪಾತ್ರ ವಹಿಸುತ್ತಿದ್ದು, ಇದಕ್ಕಾಗಿ ಎಲ್ಲ ಅಧಿಕಾರಿಗಳಿಗೆ ಅಭಿನಂದನೆಗಳು. ಜವಾಬ್ದಾರಿಯುತ ಅಧಿಕಾರಿಗಳಿಂದ ಉತ್ತಮ ತೆರಿಗೆ ಸಂಗ್ರಹಣೆಯಾಗುತ್ತದೆ. ವಾಣಿಜ್ಯ ತೆರಿಗೆ ಇಲಾಖೆಯಿಂದ ಹೆಚ್ಚಿನ ಮೊತ್ತದ ತೆರಿಗೆ ಸಂಗ್ರಹಣೆ ಸಾಧ್ಯವಾಗುತ್ತದೆ. ಕಳೆದ ವರ್ಷ ತೆರಿಗೆ ಸಂಗ್ರಹಣೆಗೆ 1,03,000 ಕೋಟಿಗಳ ಗುರಿನಿಗದಿಪಡಿಸಲಾಗಿದ್ದು, ಹೆಚ್ಚುವರಿ 17000 ಕೋಟಿಗಳ ತೆರಿಗೆ ಸಂಗ್ರಹಣೆಯನ್ನು ಸಾಧಿಸಲಾಗಿತ್ತು. ಈ ವರ್ಷ ತೆರಿಗೆ ಸಂಗ್ರಹಣೆಗೆ 1,20,000 ಕೋಟಿಗಳ ಗುರಿಯನ್ನು ನೀಡಲಾಗಿದ್ದು, ಅಧಿಕಾರಿಗಳು ಗುರಿಮೀರಿ ಸಾಧನೆ ಮಾಡಬೇಕಿದೆ. ಈ ವರ್ಷ 409000 ಕೋಟಿ  ರೂ. ಗಳ ಬಜೆಟ್ ಮಂಡಿಸಲಾಗಿದ್ದು, ಇದರಲ್ಲಿ ಗ್ಯಾರಂಟಿ ಯೋಜನೆಗಳಿಗೆ 50,018 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಈವರೆಗೆ 90,000 ಕೋಟಿ ರೂ.ಗಳನ್ನು ಗ್ಯಾರಂಟಿಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ಗ್ಯಾರಂಟಿಗಳಿಗೆ ಹಣ ಪೂರೈಸಲಾಗದೇ ರಾಜ್ಯ ಆರ್ಥಿಕ ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷದವರು ಟೀಕಿಸಿದ್ದರು. ಸರ್ಕಾರದ ಈ ಯಶಸ್ಸಿಗೆ ಇಲಾಖೆಯ ಅಧಿಕಾರಿಗಳ ಶ್ರಮ ಅಡಗಿದೆ ಎಂದರು.

ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ

ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಸಹಕಾರದಿಂದ ನಾನು ಆರ್ಥಿಕ ಇಲಾಖೆಯ ಜವಾಬ್ದಾರಿಯನ್ನು ದೀರ್ಘ ಕಾಲದವರೆಗೆ ನಿಭಾಯಿಸಲು ಸಾಧ್ಯವಾಯಿತು. ನಾನು ಹಣಕಾಸು ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ಹಣಕಾಸು ಇಲಾಖೆಯ ಕಾರ್ಯಭಾರವನ್ನು ನಿರ್ವಹಿಸಿದ್ದೇನೆ. ಈಗ ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಪೂರೈಸಿದ್ದು, ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದರು.

ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮೊದಲ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ  ಕರೆ ನೀಡಿದರು.

Key words:  government, bringing, improvement, tax process, CM Siddaramaiah

The post ತೆರಿಗೆ ಪ್ರಕ್ರಿಯೆಯಲ್ಲಿ ಸುಧಾರಣೆ ತರಲು ಸರ್ಕಾರ ಬದ್ಧ-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Off The Record: గుంటూరు నియోజకవర్గంలో పెరిగిపోతున్న అసమ్మతి సెగలు

Off The Record: గుంటూరు తూర్పు నియోజకవర్గంలో మైనార్టీల ఓట్లు ఎక్కువ....

കോണ്‍ഗ്രസിന്റെ രണ്ടാംഘട്ട സ്ഥാനാര്‍ത്ഥി പട്ടിക പ്രഖ്യാപിച്ചു; കണ്ണൂരില്‍ ടി.ഒ മോഹനന്‍, അബിന്‍ വര്‍ക്കിയും സന്ദീപ് വാര്യരും പട്ടികയില്‍

തിരുവനന്തപുരം: ഏറെ അനിശ്ചിതത്വത്തിനും ചര്‍ച്ചകള്‍ക്കുമൊടുവില്‍ നിയമസഭാ തെരഞ്ഞെടുപ്പിനുള്ള കോണ്‍ഗ്രസിന്റെ രണ്ടാം ഘട്ട...

'சட்டமன்ற தேர்தலில் போட்டியிடச் சொன்னால் என்ன செய்வேன் தெரியுமா?'- சுரேஷ் கோபி சொல்வது என்ன?

கேரள மாநிலத்தில் சட்டசபை தேர்தல் ஏப்ரல் 9-ம் தேதி நடக்கிறது. அதற்கான...

Gaddar Film Awards 2026: సినీ అవార్డులు కొన్నాళ్లు నిర్లక్ష్యానికి గురయ్యాయి.. మెగాస్టార్ ఆవేదన..

Gaddar Film Awards 2026: హైదరాబాద్‌లో ‘తెలంగాణ గద్దర్ ఫిల్మ్ అవార్డ్స్...