ಹುಬ್ಬಳ್ಳಿ,ಮೇ,17,2025 (www.justkannada.in): ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಮಾಡುತ್ತಿರುವುದಕ್ಕೆ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಶಾಸಕರೇ ಅಭಿವೃದ್ದಿಗೆ ಹಣ ಇಲ್ಲ ಎಂದು ಹೇಳುತ್ತಿದ್ದಾರೆ ಇಂತಹ ಸಮಯದಲ್ಲಿ 2ವರ್ಷದ ಸಾಧನಾ ಸಮಾವೇಶ ಯಾಕೆ? ಯಾವ ಪುರುಷಾರ್ಥಕ್ಕೆ ಸಾಧನ ಸಮಾವೇಶ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
ಪ್ರಧಾನಿ ಮೋದಿ ಗಡಿಗೆ ಹೋಗಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಬಾರ್ಡರ್ ಗೆ ಹೋಗಿ ಬರಲಿ. ಕಾಂಗ್ರೆಸ್ ಶಾಸಕರು ಸಚಿವರು ಚಿಲ್ಲರೆ ಹೇಳಿಕೆ ನೀಡುತ್ತಿದ್ದಾರೆ. ಸಂತೋಷ್ ಲಾಡ್, ಕೊತ್ತೂರು ಮಂಜುನಾಥ್ ತಮ್ಮ ಕ್ಷೇತ್ರಕ್ಕೆ ಅಷ್ಟೆ ನಾಯಕರು. ಇವರು ರಾಷ್ಟ್ರೀಯ ನಾಯಕರಲ್ಲ ಕ್ಷೇತ್ರಕ್ಕೆ ಮಾತ್ರ ಸೀಮಿತರಾದವರು ಎಂದು ವಾಗ್ದಾಳಿ ನಡೆಸಿದರು.
Key words: congress, Sadhana Conference, MP, Jagadish Shettar
The post ‘ಕೈ’ ಶಾಸಕರೇ ಅಭಿವೃದ್ದಿಗೆ ಹಣವಿಲ್ಲ ಎನ್ನುತ್ತಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ- ಸಂಸದ ಜಗದೀಶ್ ಶೆಟ್ಟರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.