30
April, 2026

A News 365Times Venture

30
Thursday
April, 2026

A News 365Times Venture

ನಾಳೆ ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸರಳ ವಿವಾಹ

Date:

ಮೈಸೂರು,ಮೇ.21,2025 (www.justkannada.in): ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಮಾಂಗಲ್ಯ ಭಾಗ್ಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಮೇ 22 ರಂದು ಮಧ್ಯಾಹ್ನ 12:20 ರಿಂದ 12:50 ರೊಳಗೆ ಸಲ್ಲುವ ಅಭಿಜಿನ್ ಲಗ್ನದಲ್ಲಿ, ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.

ಮುಖ್ಯ ಮಂತ್ರಿ  ಸಿದ್ದರಾಮಯ್ಯ ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಹಾಗೂ ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ. ವೆಂಕಟೇಶ್, ಘನ ಉಪಸ್ಥಿಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ವಹಿಸುವರು.

ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ  ರಾಮಲಿಂಗರೆಡ್ಡಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್.ಸಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ  ಡಾ. ಮಾನಸ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ  ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಸಂಸದ ಸುನೀಲ್ ಬೋಸ್ ಅವರು ಆಗಮಿಸಲಿದ್ದಾರೆ.

ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ, ಕೃಷ್ಣರಾಜನಗರ ವಿಧಾನಸಭಾ ಶಾಸಕ ರವಿಶಂಕರ್ ಡಿ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕಟಿ.ಎಸ್.ಶ್ರೀವತ್ಸ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ ಗೌಡ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಹೆಚ್. ವಿಶ್ವನಾಥ್, ಡಾ. ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ. ಮಾದೇಗೌಡ,ಡಾ. ಯತಿಂದ್ರ ಎಸ್. ಮತ್ತು ವಿವೇಕಾನಂದ ಎಸ್. ಅವರು ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಹಾಗೂ ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷ ಮರಿಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಆಗಮಿಕರಾದ ವೇ.ಬ್ರ.ಶ್ರೀ ಜೆ. ನಾಗಚಂದ್ರ ದೀಕ್ಷಿತ್ ಕಾರ್ಯಕ್ರಮದ ಪೌರೋಹಿತ್ಯವನ್ನು ವಹಿಸುವರು.

Key words: Mass simple wedding, Nanjanagudu. Srikantheshwara Swamy Temple

The post ನಾಳೆ ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸರಳ ವಿವಾಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು...

മുസ്‌ലിങ്ങള്‍ മുഖ്യമന്ത്രിയാകരുതെന്ന് ഭരണഘടനയില്‍ എവിടെയെങ്കിലും പറഞ്ഞിട്ടുണ്ടോ? വെള്ളാപ്പള്ളിയോട് ടി.എസ്. ശ്യാംകുമാര്‍

  കോഴിക്കോട്: യു.ഡി.എഫ് അധികാരത്തിലെത്തിയാല്‍ മുസ്‌ലിം ലീഗില്‍ നിന്നും മുഖ്യമന്ത്രിയുണ്ടായേക്കാമെന്ന എസ്.എന്‍.ഡി.പി...

தமிழ்நாடு `டு' மேற்கு வங்கம்; எக்ஸிட் போல் குறித்து மல்லிகார்ஜுன கார்கே சொன்னது என்ன?

புதுச்சேரி, கேரளா, மற்றும் அஸ்ஸாம் ஆகிய மூன்று மாநில சட்டமன்றத் தேர்தல்கள்...

West Bengal Exit Poll 2026: బెంగాల్ లేటెస్ట్ ఎగ్జిట్ పోల్.. బీజేపీదే అధికారం..

West Bengal Exit Poll 2026: నాలుగు రాష్ట్రాలు, ఒక కేంద్రపాలిత...