19
March, 2026

A News 365Times Venture

19
Thursday
March, 2026

A News 365Times Venture

ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಹಿನಕಲ್ ಗ್ರಾಮ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ: ಸಿಎಂ ಸಿದ್ದರಾಮಯ್ಯ

Date:

ಮೈಸೂರು ಮೇ, 24,2025 (www.justkannada.in):   ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಹಂತ ಹಂತವಾಗಿ ಹಿನಕಲ್ ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಹಿನಕಲ್ ನಲ್ಲಿ 9 ಇಂದಿರಾ ಕ್ಯಾಂಟೀನ್ ಗಳನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿರಾ ಕ್ಯಾಂಟೀನ್ ಗಳನ್ನು ಬಡವರು, ಕೂಲಿ ಕಾರ್ಮಿಕರು, ಆಸ್ಪತ್ರೆಗಳಿಗೆ ಬರುವ ಜನರ ಹಸಿವನ್ನು ಕಡಿಮೆ ದರದಲ್ಲಿ ನೀಗಿಸುವ ಉದ್ದೇಶದಿಂದ ಆರಂಭಿಸಿದೆ.

2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ ನಂತರ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಕ್ಯಾಂಟೀನ್ ಗಳು ಸೊರಗಿದವು. ಈಗ ನಾವೇ ಮತ್ತೆ ಅಧಿಕಾರಕ್ಕೆ ಬಂದು ಹಿನಕಲ್ ನಲ್ಲೇ ಇಂದಿರಾ ಕ್ಯಾಂಟೀನ್ ಗಳನ್ನು ಉದ್ಘಾಟಿಸಿರುವುದು ಮಾತ್ರವಲ್ಲದೆ, ಹೊಸದಾಗಿ ಇನ್ನೂ 184 ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ ಎಂದರು.

ಹಿನಕಲ್ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ. ಈ ಗ್ರಾಮದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲವನ್ನೂ ಹಂತ ಹಂತವಾಗಿ ಮಾಡಲಾಗುವುದು, ಎಂಜಿನಿಯರ್ ಗಳ ನೇಮಕಾತಿ, ಪಿಯುಸಿ ಕಾಲೇಜು ಸೇರಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನೂ ನೆರವೇರಿಸಲಾಗುವುದು ಎಂದರು.

Key words: Indira Canteen, Hinkal, village, political strength, CM Siddaramaiah

The post ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಹಿನಕಲ್ ಗ್ರಾಮ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ: ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സായുധ പ്രതിരോധം ഇസ്രഈലിനെതിരെ ഫലപ്രദമാണെന്ന് തെളിഞ്ഞു: ഹിസ്ബുല്ല

ബെയ്‌റൂട്ട്: ഇസ്രഈലിനെ പ്രതിരോധിക്കാന്‍ ആയുധമെടുക്കുന്നത് ഫലപ്രദമാണെന്ന് തെളിയിക്കപ്പെട്ടെന്ന് ഹിസ്ബുല്ല സെക്രട്ടറി ജനറല്‍...

Notary Portal: "தமிழ்நாடே இல்லையா?" – மத்திய அரசின் நோட்டரி இணையதளத்தில் நிலவும் பெரும் குளறுபடி

பொதுமக்களுக்குச் சட்டப்பூர்வமான ஆவணச் சான்றொப்பம் மற்றும் உறுதிமொழிப் பத்திரங்களை வழங்கும் நோட்டரி...

Andhra Pradesh: ఏపీ ప్రభుత్వం కీలక నిర్ణయం.. వారికి రూ.174 కోట్లు తిరిగి చెల్లింపు

Andhra Pradesh: ఏపీ ప్రభుత్వం తాజాగా టిడ్కో ఇళ్లకు సంబంధించిన కీలక...

ಮೃತ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು,ಮಾರ್ಚ್,18,2026 (www.justkannada.in): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್...