18
March, 2026

A News 365Times Venture

18
Wednesday
March, 2026

A News 365Times Venture

10 ಸಾವಿರ ವನರಕ್ಷಕರಿಗೆ ಕೆಎಸ್ ಡಿಎಲ್ ನಿಂದ ಸುರಕ್ಷಾ ಕಿಟ್ ವಿತರಣೆ- ಸಚಿವ ಎಂ.ಬಿ ಪಾಟೀಲ್

Date:

ಬೆಂಗಳೂರು,ಜೂನ್,2,2025 (www.justkannada.in): ಅರಣ್ಯ ರಕ್ಷಣೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ರಾಜ್ಯದ 10 ಸಾವಿರ ಅರಣ್ಯ ರಕ್ಷಕರು/ ವೀಕ್ಷಕರು, ಕಾವಾಡಿಗಳು, ಮಾವುತರು ಮತ್ತು ಚಾಲಕರಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತದ (ಕೆಎಸ್ ಡಿಎಲ್) ವತಿಯಿಂದ ಗುಣಮಟ್ಟದ ಬ್ಯಾಗ್, ಜರ್ಕೀನ್, ಶೂ ಮತ್ತು ನೀರಿನ ಬಾಟಲಿ ಇರುವ ಕಿಟ್ ವಿತರಿಸಲಾಗುವುದು. ಈ ಸಿಎಸ್ ಆರ್ ಉಪಕ್ರಮದ ಮೊದಲ ಕಾರ್ಯಕ್ರಮ ಬುಧವಾರ (ಜೂನ್ 4) ಮಧ್ಯಾಹ್ನ 2 ಗಂಟೆಗೆ ಮೈಸೂರಿನ ಮುಕ್ತ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್  ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಎಂ.ಬಿ ಪಾಟೀಲ್ ಅವರು, ಕೆಎಸ್ಡಿಎಲ್ ಸಂಸ್ಥೆಯ 2024-25ನೇ ಸಾಲಿನ ಎರಡು ಕೋಟಿ ರೂಪಾಯಿ ಸಿಎಸ್ಆರ್ ನಿಧಿಯನ್ನು ಈ ಕಿಟ್ ಖರೀದಿಗೆ ಬಳಸಲಾಗಿದೆ. ಕೆಎಸ್ ಡಿ ಎಲ್ ನ ಹೆಮ್ಮೆಯ ಉತ್ಪನ್ನ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕೆಗೆ ಗಂಧದ ಎಣ್ಣೆ ಮುಖ್ಯವಾಗಿದೆ. ಈ ಸಂಪತ್ತನ್ನು ಕಾಪಾಡುವವರೇ ವನರಕ್ಷಕರು. ಅಂಥವರನ್ನು ಕುರಿತ ಕಳಕಳಿ ಈ ಹೆಜ್ಜೆಯಾಗಿದೆ ಎಂದಿದ್ದಾರೆ.

ಬುಧವಾರದ ಕಾರ್ಯಕ್ರಮದಲ್ಲಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಅರಣ್ಯ ವೃತ್ತಗಳ 2,168 ಸಿಬ್ಬಂದಿಗೆ  ಈ‌ ಕಿಟ್ ವಿತರಿಸಲಾಗುವುದು. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಕೆಎಸ್ ಡಿಎಲ್ ಅಧ್ಯಕ್ಷ ಸಿ.ಎಸ್.ನಾಡಗೌಡ, ವನ್ಯಜೀವಿ ಮಂಡಳಿ ಸದಸ್ಯ ಧ್ರುವ ಪಾಟೀಲ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಇದಕ್ಕೆ ಸಾಕ್ಷಿಯಾಗಲಿದ್ದಾರೆ.  ಮುಂದಿನ ದಿನಗಳಲ್ಲಿ ರಾಜ್ಯದ ಉಳಿದೆಡೆಗಳ ಅರಣ್ಯಗಳಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೂ ಕಿಟ್ ವಿತರಣೆ ಮಾಡಲಾಗುವುದು ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.

ಕಿಟ್ ಸ್ವೀಕರಿಸುವ ಪ್ರತಿಯೊಬ್ಬರಿಂದ ಮೊದಲೇ ಅಳತೆ ತೆಗೆದುಕೊಂಡು, ಜರ್ಕಿನ್, ಶೂ ಖರೀದಿಸಲಾಗಿದೆ. ಇದರಲ್ಲಿ 5 ಸಾವಿರ ಮಂದಿ ಖಾಯಂ ಸಿಬ್ಬಂದಿ ಯಾಗಿದ್ದು, ಮಿಕ್ಕವರು ತಾತ್ಕಾಲಿಕ ನೆಲೆಯಲ್ಲಿದ್ದಾರೆ. ಇವರೆಲ್ಲರ ಯೋಗಕ್ಷೇಮ ನಮ್ಮ ಹೊಣೆಯಾಗಿದೆ ಎಂದು ಅವರು ನುಡಿದಿದ್ದಾರೆ.

ವನ್ಯಜೀವಿ ಮಂಡಳಿ ಸದಸ್ಯರೂ ಆದ ಸೊಸೈಟಿ ಫಾರ್ ಪ್ರೊಟೆಕ್ಷನ್ ಆಫ್ ಪ್ಲಾಂಟ್ಸ್ ಅಂಡ್ ಅನಿಮಲ್ಸ್  (ಎಸ್ ಪಿಪಿಎ) ಸಂಸ್ಥಾಪಕ ಧ್ರುವ ಪಾಟೀಲ ಅವರು ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕರಾಗಿದ್ದು, ಪ್ರತಿಕೂಲ ಸಂದರ್ಭಗಳಲ್ಲಿ ವನರಕ್ಷಕರು ಎದುರಿಸುತ್ತಿದ್ದ ಸಮಸ್ಯೆಗಳಿಗೆ ಕಿವಿಯಾಗಿ ಈ ಯೋಜನೆ ರೂಪಿಸಲು ನೆರವಾಗಿದ್ದಾರೆ.

Key words: Safety Kit, KSDL, 10 thousand, Forest staff, Minister, MB Patil

The post 10 ಸಾವಿರ ವನರಕ್ಷಕರಿಗೆ ಕೆಎಸ್ ಡಿಎಲ್ ನಿಂದ ಸುರಕ್ಷಾ ಕಿಟ್ ವಿತರಣೆ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೈಗಾರಿಕೆಗಳು ಹೊರ ಹೋಗುತ್ತಿರುವುದು ಮೂಲಭೂತ ಸೌಕರ್ಯಗಳ ಕೊರತೆಯಿಂದಲ್ಲ-ಸಚಿವ ಭೈರತಿ ಸುರೇಶ್

ಬೆಂಗಳೂರು,ಮಾರ್ಚ್,17,2026 (www.justkannada.in): ರಾಜ್ಯದ ಕೈಗಾರಿಕೆಗಳು ಮೂಲಭೂತ ಸೌರ್ಕಯಗಳ ಕೊರತೆಯಿಂದ ಹೊರಹೋಗುತ್ತಿಲ್ಲ....

‘ഇറാന്‍ ഒരു ആസന്ന ഭീഷണിയല്ല, ഈ യുദ്ധം ഇസ്രായേലിന് വേണ്ടി’; രാജിവച്ച് അമേരിക്കന്‍ ഭീകരവിരുദ്ധ സമിതി മേധാവി

വാഷിങ്ടണ്‍: ഇറാനെതിരായ യു.എസ്- ഇസ്രഈല്‍ ആക്രമണത്തെ എതിര്‍ത്ത് യു.എസ് ഭീകരവിരുദ്ധ സമിതിയിലെ...

'ரஜினியை பற்றி பேசினால்…' – ஆதவ் இருந்த மேடையிலேயே கொந்தளித்த ரஜினி ரசிகர்

சென்னை கொளத்தூரில் தவெகவின் கொள்கை விளக்கப் பொதுக்கூட்டம் நடந்திருந்தது. இந்தக் கூட்டத்தில்...