18
March, 2026

A News 365Times Venture

18
Wednesday
March, 2026

A News 365Times Venture

ನಟ ಕಮಲ್ ಹಾಸನ್ ಗೌರವಯುತವಾಗಿ  ಕನ್ನಡಿಗರ ಬಳಿ ಕ್ಷಮೆ ಕೇಳಲೇಬೇಕು- ಮಾಜಿ ಸಿಎಂ ಬಿಎಸ್ ವೈ ಆಗ್ರಹ

Date:

ಬೆಂಗಳೂರು,ಜೂನ್,3,2025 (www.justkannada.in):  ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿರುವ ನಟ ಕಮಲ್ ಹಾಸನ್ ಗೌರವಯುತವಾಗಿ ಕನ್ನಡಿಗರ ಬಳಿ ಕ್ಷಮೆ ಕೇಳಲೇಬೇಕು ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಬಿಎಸ್ ಯಡಿಯೂರಪ್ಪ, ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಕನ್ನಡಿಗರ ಘೋಷ ವಾಕ್ಯ ಮಾತ್ರವಲ್ಲ, ಇದು ಕನ್ನಡಾಂಬೆ ತಾಯಿ ಭುವನೇಶ್ವರಿ ದೇವಿಯ ಮೇಲಿರುವ ಕನ್ನಡಿಗರ ದೀಕ್ಷೆ. ಕನ್ನಡ ಯಾವುದೇ ನಿರ್ದಿಷ್ಟ ಭಾಷೆಯಿಂದ ಹುಟ್ಟಿಕೊಂಡಿಲ್ಲ ಎಂದು ಅನೇಕ ಹಿರಿಯ ಭಾಷಾ ಪರಿಣಿತರು ಸಿದ್ದ ಮಾಡಿ ತೋರಿಸಿದ್ದಾರೆ.vtu

ಇತಿಹಾಸ, ಭಾಷಾಶಾಸ್ತ್ರ ತಜ್ಞರಲ್ಲದ ಕಲಾವಿದ ಕಮಲ್ ಹಾಸನ್ ಕನ್ನಡ ಭಾಷೆಯ ಬಗ್ಗೆ ಸಂವೇದನಾರಹಿತವಾಗಿ ಮಾತನಾಡಿರುವುದು ಅತ್ಯಂತ ಖೇದನೀಯ ಮತ್ತು ಖಂಡನಾರ್ಹ. ಅನಗತ್ಯವಾಗಿ ಶಾಂತಿ, ಸೌಹಾರ್ದತೆ, ಸಾಮರಸ್ಯಕ್ಕೆ ಭಂಗವುಂಟು ಮಾಡುವ ಅವರ ವರ್ತನೆ ಸರಿಯಲ್ಲ. ಅವರ ಅಭಿಪ್ರಾಯ ಮಂಡನೆಯ ಭರದಲ್ಲಿ ಕೋಟ್ಯಂತರ ಕನ್ನಡಿಗರ ಭಾವನೆಗಳಿಗೆ ಘಾಸಿಯುಂಟು ಮಾಡಿದ್ದು, ಅವರು ಗೌರವಯುತವಾಗಿ ಕನ್ನಡ ಮತ್ತು ಕನ್ನಡಿಗರ ಕ್ಷಮೆ ಕೇಳಲೇಬೇಕು. ಕ್ಷಮೆ ಕೇಳುವುದರಿಂದ ಯಾರೂ ಸಣ್ಣವರಾಗುವುದಿಲ್ಲ, ದುರಹಂಕಾರದಿಂದ ಯಾರೂ ದೊಡ್ಡವರಾಗುವುದಿಲ್ಲ ಎಂದು ಬಿಎಸ್ ವೈ ತಿಳಿಸಿದ್ದಾರೆ.

Key words: Actor, Kamal Haasan, apologize, Kannadigas,  BSY

The post ನಟ ಕಮಲ್ ಹಾಸನ್ ಗೌರವಯುತವಾಗಿ  ಕನ್ನಡಿಗರ ಬಳಿ ಕ್ಷಮೆ ಕೇಳಲೇಬೇಕು- ಮಾಜಿ ಸಿಎಂ ಬಿಎಸ್ ವೈ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഇറാന്‍ ഒരു ആസന്ന ഭീഷണിയല്ല, ഈ യുദ്ധം ഇസ്രായേലിന് വേണ്ടി’; രാജിവച്ച് അമേരിക്കന്‍ ഭീകരവിരുദ്ധ സമിതി മേധാവി

വാഷിങ്ടണ്‍: ഇറാനെതിരായ യു.എസ്- ഇസ്രഈല്‍ ആക്രമണത്തെ എതിര്‍ത്ത് യു.എസ് ഭീകരവിരുദ്ധ സമിതിയിലെ...

'ரஜினியை பற்றி பேசினால்…' – ஆதவ் இருந்த மேடையிலேயே கொந்தளித்த ரஜினி ரசிகர்

சென்னை கொளத்தூரில் தவெகவின் கொள்கை விளக்கப் பொதுக்கூட்டம் நடந்திருந்தது. இந்தக் கூட்டத்தில்...

ಸಿಎಂ ಸಿದ್ದರಾಮಯ್ಯರನ್ನ ಹೊಗಳಿದ ಜೆಡಿಎಸ್ MLC

ಬೆಂಗಳೂರು,ಮಾರ್ಚ್,17,2026 (www.justkannada.in):  ಸದನದಲ್ಲಿ ಸಿಎಂ ಸಿದ್ದರಾಮಯ್ಯರನ್ನು ವಿಧಾನಪರಿಷತ್ ಜೆಡಿಎಸ್ ಸದಸ್ಯ ...