13
March, 2026

A News 365Times Venture

13
Friday
March, 2026

A News 365Times Venture

RCB ಆಟಗಾರರ ಸನ್ಮಾನ‌ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ- ಸಿಎಂ ಸಿದ್ದರಾಮಯ್ಯ

Date:

ಚಿಕ್ಕಬಳ್ಳಾಪುರ, ಜೂನ್,11,2025 (www.justkannada.in): ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡಿದ್ದ RCB ಆಟಗಾರರ ಸನ್ಮಾನ‌ ಸಮಾರಂಭಕ್ಕೆ ರಾಜ್ಯಪಾಲರು ಅವರಾಗೇ ಬರಲಿಲ್ಲ, ನಾನೇ ಆಹ್ವಾನಿಸಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದರು.

ಇಂದು ಗೌರಿಬಿದನೂರಿನಲಗಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜೂನ್ 4 ರಂದು ಕರ್ನಾಟಕ ಕ್ರಿಕೆಟ್ ಸಂಸ್ಥೆ ಹಾಗೂ ಆರ್.ಸಿ.ಬಿಯ ವತಿಯಿಂದ  ಆರ್ ಸಿಬಿ  ಆಟಗಾರರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ನನಗೆ ಅಂದು ಬೆಳಿಗ್ಗೆ 11.29 ನಿಮಿಷಕ್ಕೆ ಕೆ.ಎಸ್.ಸಿ.ಎ ವತಿಯಿಂದ  ಶಂಕರ್ ಮತ್ತು  ಜಯರಾಮ್ ಅವರು  ಆಹ್ವಾನ ನೀಡಿ ಮನವಿ ಮಾಡಿಕೊಂಡರು.

ಇದಕ್ಕೆ ನಾನು ಒಪ್ಪಿಗೆ ನೀಡಿದೆ. ಬಳಿಕ ಅವರು ರಾಜ್ಯಪಾಲರನ್ನು ಆಹ್ವಾನ ಮಾಡಿರುವುದಾಗಿ ತಿಳಿಸಿದರು. ಪತ್ರಿಕೆಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ  ರಾಜ್ಯಪಾಲರು ಅವರಾಗಿಯೇ ಬಂದಿದ್ದರು ಎಂದು ಪ್ರಚಾರವಾಗಿದ್ದು ಅದು ತಪ್ಪು ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿದ್ದ ಗೋವಿಂದರಾಜು ಅವರು ರಾಜ್ಯಪಾಲರಿಗೆ ಕರೆ ಮಾಡಿ ಫೋನ್ ನನಗೆ ಕೊಟ್ಟರು.  ಆಗ  ನಾನು ಕೂಡ  ಕಾರ್ಯಕ್ರಮಕ್ಕೆ ತೆರಳುತ್ತಿದ್ದು ನೀವು ಬನ್ನಿ ಎಂದು ಆಹ್ವಾನಿಸಿದೆ. ರಾಜ್ಯಪಾಲರು ಕೂಡ ಕಾರ್ಯಕ್ರಮಕ್ಕೆ ಆಗಮಿಸಿದರು. ಸನ್ಮಾನ ಕಾರ್ಯಕ್ರಮ 20 ನಿಮಿಷಗಳಲ್ಲಿ ಮುಗಿದುಹೋಯಿತು. ಮಾಧ್ಯಮಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ರಾಜ್ಯಪಾಲರು ತಾವಾಗಿಯೇ ಬಂದಿದ್ದಾರೆ ಎಂದು ವರದಿಯಾದ್ದರಿಂದ ಸ್ಪಷ್ಟೀಕರಣ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕಾಲ್ತುಳಿತದಲ್ಲಿ ಮಾಡಿದವರ ಕುಟುಂಬಕ್ಕೆ ತಲಾ 25 ಲಕ್ಷ ರೂ.ಗಳನ್ನೂ ಈಗಾಗಲೇ ಪಾವತಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕನ್ನಡದ ಅಭಿವೃದ್ಧಿಗೆ ಅನುದಾನ ಲಭ್ಯವಿದೆ

ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಅನುದಾನದ ಅಗತ್ಯವಿದ್ದರೆ ಅನುದಾನ ಒದಗಿಸಲಾಗುವುದು. ಕನ್ನಡದ ಅಭಿವೃದ್ಧಿಗೆ ಯಾವುದೇ ಕಾರಣಕ್ಕೂ ಅನುದಾನವಿಲ್ಲ ಎಂದು ಹೇಳುವುದಿಲ್ಲ ಎಂದರು.

ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನದ ವಿಚಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ಮಾಡಬೇಕಿದ್ದು ಅದನ್ನು ಮುಂದಕ್ಕೆ ಹಾಕಿದ್ದೇವೆ ಎಂದರು.

ಹೊಸ ಜಿಲ್ಲೆ ರಚನೆ: ಚರ್ಚಿಸಿ ತೀರ್ಮಾನ

ಬೆಳಗಾವಿಯಲ್ಲಿ ಮಾತ್ರ ಹೊಸ ಜಿಲ್ಲೆ ರಚಿಸುವ ಬಗ್ಗೆ ಬೇಡಿಕೆ ಇದ್ದು, ಇದಕ್ಕೆ ಸಂಬಂಧಿಸಿದಂತೆ ಶಾಸಕರು, ಸಚಿವರು ಮಾತು ಸಂಸದರ ಸಭೆಯನ್ನು ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

ನಂದಿ ಬೆಟ್ಟದಲ್ಲಿ ಸಚಿವ ಸಂಪುಟ  ಸಭೆ ನಡೆಯಲಿರುವುದು.  ಈ ಭಾಗದ ಜನರಲ್ಲಿ ನಿರೀಕ್ಷೆ ಹುಟ್ಟು ಹಾಕಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ,  ಬೆಂಗಳೂರು ವಿಭಾಗಕ್ಕೆ ಸಂಬಂಧಿಸಿದಂತೆ ಜೂನ್ 19 ರಂದು  ಸಚಿವ ಸಂಪುಟ ನಡೆಯುತ್ತಿದೆ. ಅಲ್ಲಿ ಪ್ರಸ್ತಾಪವಾಗುವ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದರು.

ಮಾವಿಗೆ ಬೆಂಬಲ ಬೆಲೆ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ

ಮಾವಿನ ಬೆಲೆ ಕುಸಿತದ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ ಆಂಧ್ರದಲ್ಲಿ ತೋತಾಪುರಿ ಮಾವಿಗೆ ಒಂದು ಕೆಜಿ ಗೆ 4 ರೂ. ನೀಡಲಾಗುತ್ತಿದ್ದು, ಇಲ್ಲಿಯೂ ಕೊಡಬೇಕು ಎನ್ನುವ ಬೇಡಿಕೆಯನ್ನು ಸಚಿವ ಎಂ.ಸಿ.ಸುಧಾಕರ್ ಅವರು ಮಾಡಿದ್ದು,  ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದರು.vtu

Key words:  invited, Governor, RCB players, felicitation ceremony, CM Siddaramaiah

The post RCB ಆಟಗಾರರ ಸನ್ಮಾನ‌ ಸಮಾರಂಭಕ್ಕೆ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಭೀಕರ ಅಪಘಾತದಲ್ಲಿ ಮೂವರು ಸಾವು.

ಮಂಗಳೂರು, ಮಾರ್ಚ್,13,2026 (www.justkannada.in): ಕೆಎಸ್ ಆರ್ ಟಿಸಿ ರಾಜಹಂಸ ಬಸ್...

ഗസയിലെ വംശഹത്യ; ഐ.സി.ജെയിലെ കേസില്‍ കക്ഷി ചേര്‍ന്ന് നെതര്‍ലാന്‍ഡ്‌സും ഐസ്‌ലാന്‍ഡും

ഹേഗ്: ഗസയില്‍ ഇസ്രഈല്‍ നടത്തുന്ന വംശഹത്യ സംബന്ധിച്ച് ഹേഗിലെ അന്താരാഷ്ട്ര നീതിന്യായ...

ராஜீவ் காந்தி பதவிக்கு வேட்டு! – `டெண்டர் முதல் இன்ஸ்டா வரை…' – வெடித்துக் கிளம்பிய விவகாரம்!

தி.மு.க வின் மாணவர் அணிச் செயலாளராகச் செயல்பட்டு வந்த ராஜீவ் காந்தியை...

IndiGo: ఇరాన్ వార్ ఎఫెక్ట్.. పెరిగిన ఇండిగో టికెట్ ధరలు..

IndiGo: మధ్యప్రాచ్యంలోని ఇరాన్ యుద్ధ ప్రభావం దేశ విమానయాన రంగంపై పడింది....