ಬೆಂಗಳೂರು, ಜೂನ್, 13, 2025 (www.justkannada.in): ಕೋಮು ಸಂಘರ್ಷವನ್ನು ತಡೆಗಟ್ಟುವ ಸಲುವಾಗಿ ಮಂಗಳೂರಿನಲ್ಲಿ ‘ಸ್ಪೆಷಲ್ ಆಯಕ್ಷನ್ ಫೋರ್ಸ್’ (Special Action Force) ರಚಿಸಲಾಗಿದ್ದು ಇದಕ್ಕೆ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು.
ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ನೂತನ ಸ್ಪೆಷಲ್ ಆ್ಯಕ್ಷನ್ ಫೋರ್ಸ್’ ಗೆ ಚಾಲನೆ ನೀಡಿದರು. ಕೋಮು ಸಂಘರ್ಷ ನಿಗ್ರಹಕ್ಕೆ ಮಾಡಿರುವ ಸ್ಪೆಷಲ್ ಆಕ್ಷನ್ ಫೋರ್ಸ್ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಮಾಡಲಿದೆ. ಡಿಐಜಿ ದರ್ಜೆ ಅಧಿಕಾರಿ ನೇತೃತ್ವದಲ್ಲಿ ಈ ತಂಡ ಕಾರ್ಯ ನಿರ್ವಹಿಸಲಿದ್ದು, 248 ಸಿಬ್ಬಂದಿ ಒಳಗೊಂಡ ಮೂರು ಕಂಪನಿ ಕಾರ್ಯಾಚರಣೆಗೆ ಸಿದ್ಧವಾಗಿದೆ.
SAF ಉದ್ಘಾಟಿಸಿದ ಬಳಿಕ ಮಾತನಾಡಿದ ಗೃಹ ಸಚಿವ ಡಾ.ಪರಮೇಶ್ವರ್, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗದಲ್ಲಿ ಎಸ್ಎಎಫ್ ಅಗತ್ಯವಿದೆ. ಈ ಕಾರ್ಯಪಡೆಗೆ ಅನೇಕರು ಟೀಕೆ ಮಾಡಬಹುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಇದ್ದರೆ ರಾಜ್ಯದಲ್ಲಿ ಶಾಂತಿ ಇರುತ್ತದೆ. ಈ ಕಾರ್ಯಪಡೆ ಕೆಲಸಕ್ಕೆ ಜಿಲ್ಲೆಯ ಜನರು ಸಹಕಾರ ನೀಡಬೇಕು. ಅಗತ್ಯವಿದ್ದರೆ ಇಡೀ ರಾಜ್ಯದಲ್ಲಿ ಈ ಕಾರ್ಯಪಡೆ ಸ್ಥಾಪನೆ ಮಾಡುತ್ತೇವೆ ಎಂದು ತಿಳಿಸಿದರು.
Key words: Home Minister, Parameshwar, Special Action Force, Mangalore
The post ಮಂಗಳೂರಿನಲ್ಲಿ ‘ಸ್ಪೆಷಲ್ ಆ್ಯಕ್ಷನ್ ಫೋರ್ಸ್’ ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





