ಬೆಂಗಳೂರು,ಜೂನ್,17,2025 (www.justkannada.in): ಐಶ್ವರ್ಯಾಗೌಡ ವಿರುದ್ಧ ಚಿನ್ನಾಭರಣ ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿಕೆ ಸುರೇಶ್ ಗೆ ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.
ಜೂನ್ 19 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ಆದರೆ ಡಿ.ಕೆ ಸುರೇಶ್ ಅವರು ಜೂನ್ 23 ರಂದು ವಿಚಾರಣೆಗೆ ಬರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.
ಮಾಜಿ ಸಂಸದ ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಐಶ್ವರ್ಯಗೌಡ ಕೋಟ್ಯಂತರ ರೂ. ಚಿನ್ನ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಆರೋಪಿ ಐಶ್ವರ್ಯಾ ಗೌಡ ಮನೆ ಮೇಲೆ ದಾಳಿ ನಡೆಸಿ ಐಶ್ವರ್ಯಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು.
Key words: ED, summons, former MP, DK Suresh
The post ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿಕೆ ಸುರೇಶ್ ಗೆ ED ಸಮನ್ಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





