13
March, 2026

A News 365Times Venture

13
Friday
March, 2026

A News 365Times Venture

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಇಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಬೆಂಗಳೂರು,ಜೂನ್,19,2025 (www.justkannada.in): ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಪ್ರಶ್ನೆಗಳಿಗೆ  ಉತ್ತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,  ಈ‌ಗಾಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದು ಹೇಳಿದರು.

ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ಆತಂಹ ಸಮಸ್ಯೆ ಏನೂ ಇಲ್ಲ ಎಂದರು.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ‌. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದು ತಿಳಿಸಿದರು

ಪ್ರತಿ ತಿಂಗಳು 10 ರಿಂದ 15 ಸಾವಿರ ಫಲಾನುಭವಿಗಳ ಸಂಖ್ಯೆ ಹೆಚ್ಚುತ್ತಿದೆ. ನೋಂದಣಿ ಮಾಡಿಕೊಂಡ ಎಲ್ಲಾ ಫಲಾನುಭವಿಗಳಿಗೆ ಹಣ ತಲುಪುತ್ತಿದೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.vtu

Key words: no revision, Grihalakshmi Scheme, Minister, Lakshmi Hebbalkar

The post ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಪರಿಷ್ಕರಣೆ ಇಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇന്ധനക്ഷാമമില്ല, എല്‍.പി.ജി ഉത്പാദനം 28% വര്‍ധിപ്പിച്ചു; വ്യാജപ്രചരണം വേണ്ട: ഹര്‍ദീപ് സിങ്

ന്യൂദല്‍ഹി: ഇന്ത്യയിലെ ഊര്‍ജ ഇറക്കുമതി സുരക്ഷിതമായി തുടരുകയാണെന്ന് പെട്രോളിയം മന്ത്രി ഹര്‍ദീപ്...

சென்னை ரயில் நிலையங்களில் இந்தி எழுத்துகள் அழிப்பு போராட்டத்தில் மே 17 இயக்கத்தினர்!

தமிழ்நாட்டில் இந்தி திணிப்புக்கு எதிராக தொடர்ந்து குரல் எழுப்பப்பட்டு வருகிறது. அந்தவகையில்...

Lifetime Achievement Award: ‘ది వాల్’ రాహుల్ ద్రావిడ్ కు అరుదైన గౌరవం..

Lifetime Achievement Award: భారత మాజీ క్రికెటర్, మాజీ టీమిండియా కోచ్,...