15
March, 2026

A News 365Times Venture

15
Sunday
March, 2026

A News 365Times Venture

IPS ಅಧಿಕಾರಿಗಳ ಅಮಾನತು ರದ್ದು: ಸಿಎಂ ಡಿಸಿಎಂ ಕ್ಷಮೆ ಕೇಳಲಿ- ಬಿವೈ ವಿಜಯೇಂದ್ರ ಆಗ್ರಹ

Date:

ಬೆಂಗಳೂರು,ಜುಲೈ,29,2025 (www.justkannada.in):  ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ ‍ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿಗಳ ಅಮಾನತು ರದ್ದುಪಡಿಸಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಪೋಸ್ಟ್‌‍ ಮಾಡಿರುವ ಬಿವೈ ವಿಜಯೇಂದ್ರ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, ಹದಗೆಟ್ಟ ಕಾನೂನು ಸುವ್ಯವಸ್ಥೆಯ ನಿರಂತರ ವೈಫಲ್ಯ, ಇವೆಲ್ಲವನ್ನೂ  ಮುಚ್ಚಿಕೊಳ್ಳಲು ಆಯೋಗಗಳನ್ನು ರಚಿಸುವುದು, ಪ್ರಾಮಾಣಿಕ ಅಧಿಕಾರಿಗಳ ಬಲಿ ತೆಗೆದುಕೊಳ್ಳುವುದು ಕಾಂಗ್ರೆಸ್ ಸರ್ಕಾರದ ಜನರ ದಿಕ್ಕು ತಪ್ಪಿಸುವ ಕುತಂತ್ರ ನಡವಳಿಕೆಯಾಗಿದೆ.

ಬೆಂಗಳೂರಿನ RCB ವಿಜಯೋತ್ಸವದ ಸಂಭ್ರಮಾಚರಣೆಯನ್ನು ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹೊರಟು ದೂರದೃಷ್ಟಿ ಹಾಗೂ ಜನಕಾಳಜಿ ಇಲ್ಲದ ಅವಿವೇಕಿ ನಿರ್ಧಾರ ತೆಗೆದುಕೊಂಡ ಸಿದ್ದರಾಮಯ್ಯ ಹಾಗೂ ಡಿಕೆಶಿವಕುಮಾರ್  ಅವರು ತಲೆದಂಡ ತಪ್ಪಿಸಿಕೊಳ್ಳಲು ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ್ದ ಈ ಸರ್ಕಾರ ಇದೀಗ ಅವರ ಅಮಾನತ್ತನ್ನು ರದ್ದುಗೊಳಿಸಿ ಮುಖ ಮುಚ್ಚಿಕೊಳ್ಳಲು ಹೊರಟಿದೆ.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಸರ್ಕಾರದ ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳ ‘ತುಘಲಕ್’ ನಿರ್ಧಾರದಿಂದ ಇಂಥಾ ಘೋರ ದುರಂತ ಸಂಭವಿಸಿತು, ಎಂಬ ವಾಸ್ತವ ಸತ್ಯದ ಹಿನ್ನಲೆಯಲ್ಲಿ ಜನಾಕ್ರೋಶ ಎದುರಿಸಲಾಗದೆ ‘ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು’ ಭಂಡತನದಿಂದ ಅಧಿಕಾರದಲ್ಲಿ ಉಳಿಯಲು ತಪ್ಪೆಸಗದ ಪೊಲೀಸ್ ಅಧಿಕಾರಿಗಳಿಗೆ ಅಮಾನತು ಶಿಕ್ಷೆ ವಿಧಿಸಿ ಹೊಣೆಗೇಡಿತನದಿಂದ ಪಾರಾಗಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಪ್ರಯತ್ನಿಸಿದ್ದರು. ಇದೀಗ ಗತ್ಯಂತರವಿಲ್ಲದೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಅಧಿಕಾರಿಗಳ ಅಮಾನತು ರದ್ದುಗೊಳಿಸಲಾಗಿದೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಇತರರು ಅಮಾನತು ರದ್ದುಗೊಂಡ ಅಧಿಕಾರಿಗಳ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸುವೆ ಎಂದಿದ್ದಾರೆ.vtu

Key words: Cancellation, suspension, IPS officers, BY Vijayendra

The post IPS ಅಧಿಕಾರಿಗಳ ಅಮಾನತು ರದ್ದು: ಸಿಎಂ ಡಿಸಿಎಂ ಕ್ಷಮೆ ಕೇಳಲಿ- ಬಿವೈ ವಿಜಯೇಂದ್ರ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಮಗ್ರ ಆರೋಗ್ಯಕ್ಕೆ ಯೋಗ-ವಿಜ್ಞಾನದ ಸಮನ್ವಯ ಅಗತ್ಯ: ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಮೈಸೂರು,ಮಾರ್ಚ್,14,2026 (www.justkannada.in):  ಭಾರತ ದೇಶ ಜಗತ್ತಿಗೆ ಕೊಟ್ಟತಂಹ ಕೊಡಗೆಗಳಲ್ಲಿ ಯೋಗವೂ...

ആര്‍ത്തവ അവധി സ്ത്രീകളുടെ അവകാശങ്ങളുടെ ഭാഗമാക്കണം; സുപ്രീം കോടതിക്കെതിരെ പോളിറ്റ് ബ്യൂറോ

ന്യൂദല്‍ഹി: ആര്‍ത്തവ അവധികള്‍ നിയമവിധേയമാക്കിയാല്‍ സ്ത്രീകളെ ജോലിക്കെടുക്കാന്‍ കമ്പനികള്‍ മടിക്കുമെന്ന സുപ്രീം...

`அதிமுக உறுப்பினர் கார்டை கிழிச்சு போடக்கூட மனசு வரலை!'- சசிகலா கட்சியின் நிறுவன தலைவர் சக்கரவர்த்தி

தனது ஆதரவாளர் ஒருவர் பதிவு செய்து வைத்திருந்த ‘அகில இந்திய புரட்சித்...

Breaking News: మొయినాబాద్ ఫామ్ హౌస్‌లో కాల్పుల కలకలం.. పోలీసులపై డ్రగ్స్ బ్యాచ్ దాడి.!

హైదరాబాద్ శివార్లలోని మొయినాబాద్‌ మరోసారి వార్తల్లో నిలిచింది. ఒక మాజీ ఎమ్మెల్యేకు...