27
August, 2026

A News 365Times Venture

27
Thursday
August, 2026

A News 365Times Venture

ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರು ಜುಲೈ,31,2025 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಅಸಹಾಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಚಿವರು ಮತ್ತು ಶಾಸಕರುಗಳ ಜೊತೆ ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆಯ ನಡುವೆಯೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರವಾಣಿ ಮೂಲಕ ಮಾತನಾಡಿ ಸ್ಪಷ್ಟ ಸೂಚನೆ ನೀಡಿದ್ದಾರೆ.

ಜಿಲ್ಲೆ ಮತ್ತು ತಾಲ್ಲೂಕು, ಹೋಬಳಿ ಎಲ್ಲೂ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಠಿಯಾಗಬಾರದು. ಈ ರೀತಿ ಅಭಾವ ಸೃಷ್ಟಿಸುತ್ತಿರುವವರ ಬಗ್ಗೆ ತೀವ್ರ ನಿಗಾ ಇಟ್ಡು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.vtu

Key words: strict action, against, fertilizer, hoarders, CM, Siddaramaiah

The post ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರು ದಸರಾ 2026: ಗಜಪಯಣಕ್ಕೆ ಅದ್ದೂರಿ ಚಾಲನೆ

ಮೈಸೂರು,ಆಗಸ್ಟ್, 26,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ...

യു.എന്‍.ആര്‍.ഡ.ബ്ല്യു.എ പരിശീലന കേന്ദ്രം പിടിച്ചെടുത്ത ഇസ്രഈല്‍ നടപടിയെ അപലപിച്ച് ബ്രിട്ടിഷ് മന്ത്രി

ജെറുസലേം: യു.എന്‍ ഏജന്‍സിയായ യുനൈറ്റഡ് നേഷന്‍സ് റിലീഫ് ആന്‍ഡ് വര്‍ക്‌സ് ഏജന്‍സി...

Nepal Flood: நேபாளத்தில் கடும் வெள்ள பெருக்கு; பலி எண்ணிக்கை 46-ஆக அதிகரிப்பு!| Live Updates

நேபாளத்தில் கடும் வெள்ளம் - முதல்வர் அறிக்கை!நேபாளத்தில் கடும் வெள்ள பாதிப்பு...

IISc Study: ఆవు ఎంజైమ్‌తో ప్రమాదకర బ్యాక్టీరియాకు చెక్.. IISc సంచలన పరిశోధన

IISc Study:  ఇండియన్ ఇన్‌స్టిట్యూట్ ఆఫ్ సైన్స్ (IISc) శాస్త్రవేత్తలు పరిశోధన...