15
March, 2026

A News 365Times Venture

15
Sunday
March, 2026

A News 365Times Venture

ಶಾಲೆಯ ಕುಡಿಯುವ ನೀರಿಗೆ ವಿಷ: ಸಿಎಂ ಸಿದ್ದರಾಮಯ್ಯ ಕಳವಳ : ಸೂಕ್ತ ತನಿಖೆಗೆ ಸೂಚನೆ

Date:

ಬೆಂಗಳೂರು,ಆಗಸ್ಟ್,1,2025 (www.justkannada.in): ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹೂವಿನಕೋಣೆಯ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ಕಿಡಿಗೇಡಿಗಳು ಕೀಟನಾಶಕ ಬೆರೆಸಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಹತ್ತಾರು ಎಳೆಯ ಮಕ್ಕಳ ಮಾರಣ ಹೋಮ ನಡೆಸುವ ದುರುದ್ದೇಶ ಹೊಂದಿದ್ದ ಇದು ಯಾವ ಭಯೋತ್ಪಾದಕ ಕೃತ್ಯಗಳಿಗೂ ಕಡಿಮೆಯಿಲ್ಲ ಎನ್ನುವುದು ನನ್ನ ಭಾವನೆ.

ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಶಾಲೆಯ ಅಡುಗೆ ಸಿಬ್ಬಂದಿಗಳನ್ನು ಅಭಿನಂದಿಸುತ್ತೇನೆ.  ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಕುಡಿಯುವ ನೀರಿಗೆ ವಿಷ ಬೆರೆಸುವ ಮನಸ್ಥಿತಿ ನಮ್ಮ ನಡುವೆ ಮಾನವೀಯತೆಯ ಅಧಃಪತನವನ್ನು ತೋರಿಸುತ್ತದೆ. ಈ ಬಗ್ಗೆ ಎಲ್ಲರೂ ಆತ್ಮವಿಮರ್ಷೆ ಮಾಡಿಕೊಳ್ಳಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.vtu

Key words: Poison, school, drinking water,  CM Siddaramaiah, investigation

The post ಶಾಲೆಯ ಕುಡಿಯುವ ನೀರಿಗೆ ವಿಷ: ಸಿಎಂ ಸಿದ್ದರಾಮಯ್ಯ ಕಳವಳ : ಸೂಕ್ತ ತನಿಖೆಗೆ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು...

ഏത് വിധേനെയും ഹോര്‍മുസ് തുറക്കും; ചൈനയും യു.കെയും ഉള്‍പ്പടെയുള്ള രാജ്യങ്ങള്‍ യുദ്ധക്കപ്പലുകള്‍ അയക്കുമെന്ന് ട്രംപ്

വാഷിങ്ടണ്‍: ഇറാന്റെ നിയന്ത്രണത്തിലുള്ള ഹോര്‍മുസ് കടലിടുക്ക് തുറക്കാന്‍ ഏത് മാര്‍ഗവും സ്വീകരിക്കുമെന്ന്...

இறுதியான என்.ஆர் – பாஜக கூட்டணி; தவெக-வுக்கு வலை வீசும் ரங்கசாமி! – புதுவையில் விசிலடிப்பாரா விஜய்?

புதுச்சேரி, தமிழகம் உட்பட ஐந்து மாநில சட்டப்பேரவை தேர்தலுக்கான அறிவிப்பு இன்றே...

Car Sold: ఇదెక్కడి పనికిమాలిన ఐడియా రా.. అద్దెకు తీసుకున్న కారును అమ్మడం ఏంటి రా బాబు..

అద్దె కారు తీసుకున్నారు.. లాంగ్ డ్రైవ్‌కు వెళ్లారు.. మధ్యలో ఓ కన్నింగ్...