15
March, 2026

A News 365Times Venture

15
Sunday
March, 2026

A News 365Times Venture

ಇಬ್ಬರಿಗೆ ‘ಅರ್ಜುನ ಆನೆ’ ವಾರ್ಷಿಕ ಪ್ರಶಸ್ತಿ ಪ್ರಕಟ: ಗಜಪಯಣದಲ್ಲಿ ಪ್ರದಾನ

Date:

ಬೀದರ್, ಆಗಸ್ಟ್,2,2025 (www.justkannada.in):  ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ನಾಡಿದ್ದು (ಆ.4) ಗಜಪಯಣದ ವೇಳೆ ಮಾವುತ/ ಸಿಬ್ಬಂದಿಗೆ ಪ್ರಥಮ ಪ್ರಶಸ್ತಿ ಪ್ರದಾನ ಮಾಡಲಾಗುವುದು  ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬೀದರ್ ನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ ಅವರು, ನಾಡಿದ್ದು ವೀರನಹೊಸಹಳ್ಳಿಯಲ್ಲಿ ನಡೆಯಲಿರುವ ಗಜ ಪಯಣದ ಸಂದರ್ಭದಲ್ಲಿ ಹಾಸನ, ಸಕಲೇಶಪುರ, ಕೊಡಗು ಮೊದಲಾದ ಕಡೆಗಳಲ್ಲಿ ಆನೆ ಮತ್ತು ವನ್ಯಜೀವಿ ಸೆರೆ ಕಾರ್ಯಚರಣೆಗಳಲ್ಲಿ ಯಶಸ್ವಿಯಾಗಿ ಭಾಗಿಯಾಗಿರುವ ಭೀಮ ಆನೆಯ ಮಾವುತ ಗುಂಡ ಹಾಗೂ ಕವಾಡಿ ನಂಜುಂಡಸ್ವಾಮಿ ಅವರಿಗೆ  2025ರ ಸಾಲಿನ  “ಅರ್ಜುನ ಆನೆ” ಪ್ರಶಸ್ತಿ ನೀಡಲು 2025ರ ದಸರಾ ಆನೆಗಳ  ಆಯ್ಕೆ ಸಮಿತಿಯ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಎಚ್.ಡಿ. ಕೋಟೆ ಶಾಸಕ ಅನಿಲ್ ಕುಮಾರ್ ಸಿ ಅವರು ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸುವ ಸಲಹೆ ನೀಡಿದ್ದರು. ಈ ಸಲಹೆ ಪುರಸ್ಕರಿಸಿ, ಮಾನವ-ವನ್ಯಜೀವಿ ಸಂಘರ್ಷ ತಡೆಗಟ್ಟುವ ಹಾಗೂ ವನ್ಯಪ್ರಾಣಿಗಳನ್ನು ಸೆರೆಹಿಡಿಯುವ ಕಾರ್ಯಚರಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಕಾರ್ಯಚರಣೆಯನ್ನು ಯಶಸ್ವಿಗೊಳಿಸಿರುವ ಹಾಗೂ ಸೆರೆಹಿಡಿಯುವ ಆನೆಗಳನ್ನು ಪಳಗಿಸಿ ಆರೈಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಾವುತ/ಸಿಬ್ಬಂದಿಗಳನ್ನು ಗುರುತಿಸಿ ಪ್ರತಿವರ್ಷ ನಡೆಯುವ ಗಜಪಯಣದ ಸಂದರ್ಭದಲ್ಲಿ “ಅರ್ಜುನ ಆನೆ” ಪ್ರಶಸ್ತಿ ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದರು.

1968ರಲ್ಲಿ ಕಾಕನಕೋಟೆಯಲ್ಲಿ ನಡೆದ ಖೆಡ್ಡಾ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ 22 ಬಾರಿ ಜಂಬೂಸವಾರಿಯಲ್ಲಿ ಭಾಗಿಯಾಗಿ, 8 ಬಾರಿ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು, ದೇಶದ ಜನರ ಮನ ಗೆದ್ದಿದ್ದ. ಅರಣ್ಯ ಸಿಬ್ಬಂದಿಯ ಪ್ರಾಣ ಉಳಿಸಲು ಪ್ರಾಣತ್ಯಾಗ ಮಾಡಿದ ಅರ್ಜುನನ ಹೆಸರು ಚಿರಸ್ಥಾಯಿಯಾಗಿ ಉಳಿಯುವಂತೆ ಈ ಪ್ರಶಸ್ತಿ ಸ್ಥಾಪಿಸಲಾಗಿದೆ ಎಂದರು.vtu

Key words:  ‘Arjuna Elephant’ annual award, Presented, Gajapayana, Minister, Ishwar khandre

The post ಇಬ್ಬರಿಗೆ ‘ಅರ್ಜುನ ಆನೆ’ ವಾರ್ಷಿಕ ಪ್ರಶಸ್ತಿ ಪ್ರಕಟ: ಗಜಪಯಣದಲ್ಲಿ ಪ್ರದಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Trump: "பொழுதுபோக்கிற்காக மீண்டும் தாக்குவோம்" – ஈரான் மீதான தாக்குதலைத் தீவிரப்படுத்தும் ட்ரம்ப்

ஈரான் மீது அமெரிக்காவும், இஸ்ரேலும் தாக்குதல் நடத்திய நிலையில், அதற்கு பதில்...

Maharaja 2 : మహారాజ సీక్వెల్ కథ రెడీ.. షూటింగ్ కోసం ఈగర్లీ వెయిటింగ్ : విజయ్ సేతుపతి

తమిళ స్టార్ హీరో విజయ్ సేతుపతి కెరీర్‌లో 50వ మైలురాయిగా నిలిచిన...

ಗೂಡ್ಸ್ ರೈಲು ಡಿಕ್ಕಿ : ಮೂವರು ಯುವಕರು ಸಾವು.

ಮುಂಬೈ,ಮಾರ್ಚ್,14,2026 (www.justkannada.in):  ಗೂಡ್ಸ್ ರೈಲು ರೈಲು ಡಿಕ್ಕಿಯಾಗಿ ಮೂವರು ಯುವಕರು...

ഏത് വിധേനെയും ഹോര്‍മുസ് തുറക്കും; ചൈനയും യു.കെയും ഉള്‍പ്പടെയുള്ള രാജ്യങ്ങള്‍ യുദ്ധക്കപ്പലുകള്‍ അയക്കുമെന്ന് ട്രംപ്

വാഷിങ്ടണ്‍: ഇറാന്റെ നിയന്ത്രണത്തിലുള്ള ഹോര്‍മുസ് കടലിടുക്ക് തുറക്കാന്‍ ഏത് മാര്‍ഗവും സ്വീകരിക്കുമെന്ന്...