14
March, 2026

A News 365Times Venture

14
Saturday
March, 2026

A News 365Times Venture

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಸಲ್ಲಿಸಿ..

Date:

ಬೆಂಗಳೂರು ಗ್ರಾಮಾಂತರ, ಆಗಸ್ಟ್,4,2025  (www.justkannada.in): ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಯೋಜನಾ ನಿರ್ದೇಶಕ 01 ಹುದ್ದೆಗೆ ಮಾಸಿಕ ಗೌರವಧನ 31,763 ಹಾಗೂ ಪ್ರಯಾಣ ಭತ್ಯೆ 3,000 ನೀಡಿ 1 ವರ್ಷ ಅವಧಿವರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಯೋಜನಾ ನಿರ್ದೇಶಕ ಹುದ್ದೆಗೆ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ/ ಎಂ.ಎಸ್.ಡಬ್ಲೂ/ ಅಭಿವೃದ್ಧಿ ಅಧ್ಯಯನ/ ಲಾಭರಹಿತ ಸಂಸ್ಥೆಗಳ (ಎನ್ ಜಿಒ ) ನಿರ್ವಹಣಾ ಶಾಸ್ತ್ರ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು. ವಿವಿಧ ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಕುರಿತು 05 ವರ್ಷಗಳ ಸೇವಾ ಅನುಭವ ಹೊಂದಿರಬೇಕು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆಯನ್ನು ನೀಡಲಾಗುವುದು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅವಶ್ಯಕವಾಗಿರುತ್ತದೆ (MS Office, MS Excel & MS Powerpoint & Internet Operation.). ಕಂಪ್ಯೂಟರ್ ಜ್ಞಾನದ ಬಗ್ಗೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. 40 ವಯೋಮಾನ ಮೀರಿರಬಾರದು. ಕಛೇರಿಯ ಲೆಕ್ಕಪತ್ರಗಳ ವ್ಯವಹಾರವನ್ನು ಅರಿತಿರಬೇಕು. ಕಛೇರಿಯ ಲೆಕ್ಕಪತ್ರಗಳ ವ್ಯವಹಾರವನ್ನು ಅರಿತಿರಬೇಕು. ಯಾವುದೇ ಸರ್ಕಾರಿ ಕೆಲಸದಿಂದ ವಜಾಗೊಂಡಿರುವ ಹಾಗೂ ನಿವೃತ್ತಿ ಹೊಂದಿರುವ ಮತ್ತು ಸರ್ಕಾರಿ ಕೆಲಸ ನಿರ್ವಹಿಸುತ್ತಿರುವ ವ್ಯಕ್ತಿಗಳಾಗಿರಬಾರದು.

ಗುಮಾಸ್ತ ಕಂ ಲೆಕ್ಕಿಗ 01 ಹುದ್ದೆಗೆ ಮಾಸಿಕ ಗೌರವಧನ 21,909 ನೀಡಿ 1 ವರ್ಷ ಅವಧಿ ವರೆಗೆ ನೇಮಕಾತಿ ಮಾಡಿಕೊಳ್ಳಲಾಗುವುದು. ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಬಿ.ಕಾಂ ಪದವಿ ಹೊಂದಿರಬೇಕು. ಲೆಕ್ಕಪತ್ರಗಳನ್ನು ನಿರ್ವಹಿಸುವಲ್ಲಿ/ ಅಕೌಂಟೆಂಟ್ ಹುದ್ದೆಯಲ್ಲಿ ಕನಿಷ್ಠ 05 ವರ್ಷಗಳ ಅನುಭವ ಹೊಂದಿರಬೇಕು. ಲೆಕ್ಕ ಪತ್ರದಲ್ಲಿ ಬ್ಯಾಂಕ್ ವ್ಯವಹಾರಗಳನ್ನು, ಸರ್ಕಾರದ ಲೆಕ್ಕಪತ್ರಗಳನ್ನು ತಯಾರಿಸುವ ಲೆಕ್ಕಪತ್ರಗಳಿಗೆ ಸಂಬಂಧಿಸಿದ ದಾಖಲಾತಿಗಳು, ರಿಜಿಸ್ಟರ್ ಗಳ ಕುರಿತು ಮಾಹಿತಿಯನ್ನು ಹೊಂದಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಮಾತನಾಡುವ ಹಾಗೂ ಬರೆಯುವಲ್ಲಿ ಉತ್ತಮ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರುವುದು ಅವಶ್ಯಕವಾಗಿರುತ್ತದೆ. ಟ್ಯಾಲಿ ಸಾಪ್ಟವೇರ್ ಕಂಪ್ಯೂಟರ್ ಜ್ಞಾನದ ಬಗ್ಗೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. 40 ವಯೋಮಾನ ಮೀರಿರಬಾರದು. ಕಛೇರಿಯ ಪತ್ರ ವ್ಯವಹಾರಗಳು, ಲೆಕ್ಕಪತ್ರಗಳ ವ್ಯವಹಾರವನ್ನು ಗಣಕೀಕೃತದಲ್ಲಿ ನಮೂದಿಸಿ. ಕೇಂದ್ರ ಕಛೇರಿಗಳಿಗೆ ಗಣಕ ಯಂತ್ರ ಮೂಲಕ ಕಳುಹಿಸುವ ಕುರಿತು ಪರಿಣತಿ ಹೊಂದಿರಬೇಕು.

ಅರ್ಹ ಅಭ್ಯರ್ಥಿಗಳು ಆಗಸ್ಟ್ 20 ರೊಳಗಾಗಿ ಕಾರ್ಮಿಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ- ಜಿಲ್ಲಾ ಬಾಲಕಾರ್ಮಿಕ ಯೋಜನೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, 5 ನೇ ಮುಖ್ಯ ರಸ್ತೆ, 2 ನೇ ಹಂತ, ಸೋಮೇಶ್ವರ ಬಡಾವಣೆ, ದೊಡ್ಡಬಳ್ಳಾಪುರ-561203 ಇಲ್ಲಿ ನೇರವಾಗಿ ಅರ್ಜಿ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-27622133, ಇಮೇಲ್ ವಿಳಾಸ lobngrural@gmail.com ಅಥವಾ  ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನೆ  ಕಾರ್ಮಿಕ ಅಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Apply, Project Director, Clerk & Accountant, post

The post ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಸಲ್ಲಿಸಿ.. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್

 ಮೈಸೂರು,ಮಾರ್ಚ್,14,2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ  ಯದುವೀರ್ ಕೃಷ್ಣದತ್ತ...

നെതര്‍ലാന്‍ഡ്‌സിലെ സിനഗോഗ് തീവെപ്പിന് പിന്നാലെ ജൂത സ്‌കൂളില്‍ സ്‌ഫോടനം; ഭീരുത്വമെന്ന് ആംസ്റ്റര്‍ഡാം മേയര്‍

ആംസ്റ്റര്‍ഡാം: ആംസ്റ്റര്‍ഡാമിലെ ജൂത സ്‌കൂളില്‍ സ്‌ഫോടനം. ശനിയാഴ്ച രാവിലെയാണ് സ്‌ഫോടനമുണ്ടായതെന്ന് റോയിട്ടേഴ്‌സ്...

“கூட்டணிக்காக நாங்கள் யாரையும் எதிர்பார்த்து இல்லை" – அண்ணாமலை அதிரடி

கோவையில் பாஜக முன்னாள் மாநில தலைவர் அண்ணாமலை செய்தியாளர்களைச் சந்தித்தார். அப்போது அவர்...

Milk Purity: మీరు తాగే పాలు అసలైనవేనా? కల్తీ పాలను గుర్తించే 5 సింపుల్ పద్ధతులు ఇవే!

Milk Purity: చిన్న పిల్లల నుంచి వృద్ధుల వరకు అందరికీ అవసరమైన...