23
March, 2026

A News 365Times Venture

23
Monday
March, 2026

A News 365Times Venture

ಮತಗಳ್ಳತನ ಬಗ್ಗೆ ಕಾನೂನು ಇಲಾಖೆ  ಪರಿಶೀಲನೆ, ಶಿಫಾರಸಿನಂತೆ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ

Date:

ಮೈಸೂರು,  ಆಗಸ್ಟ್ , 9,2025 (www.justkannada.in):  ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ  ಪರಿಶೀಲನೆ ನಡೆಸಲಿದೆ. ಅವರು ನೀಡುವ ಶಿಫಾರಸಿನ ಅನ್ವಯ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣ ದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಮತಗಳ್ಳತನದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ರಾಹುಲ್ ಗಾಂಧಿ ಸೂಚನೆ ನೀಡಿದ್ದು, ಬಿಬಿಎಂಪಿ ಚುನಾವಣೆ ಮುನ್ನ ಪಕ್ಷ ಇದನ್ನು ಪರಿಶೀಲಿಸುತ್ತದೆ ಎಂಬ ಮಾಧ್ಯಮಗಳ ಪ್ರಶ್ನೆಗೆ  ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಪರಿಶೀಲನಾ ಕಾರ್ಯವನ್ನು ತ್ವರಿತವಾಗಿ ನಡೆಸಿ ವರದಿ ನೀಡಲು ಅಡ್ವೊಕೇಟ್ ಜನರಲ್ ಅವರಿಗೆ ಸೂಚನೆ ನೀಡಲಾಗುವುದು ಎಂದರು. ಮತದಾರರ ಪಟ್ಟಿಯ ಸಂಬಂಧ ಸಂಪೂರ್ಣ ಅಧಿಕಾರವಿರುವುದು ಚುನಾವಣಾ ಆಯೋಗಕ್ಕೆ ಎಂದರು.

ಮೂರು ಸಾವಿರ ಮತ ಖರೀದಿ ಬಗ್ಗೆ ತಿಳಿದಿಲ್ಲ:

ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಮುಖ್ಯಮಂತ್ರಿಗಳು ಬಾದಾಮಿ ಕ್ಷೇತ್ರದಲ್ಲಿ ಮೂರು  ಸಾವಿರ ಮತಗಳನ್ನು ಖರೀದಿ ಮಾಡಿ ಗೆದ್ದದ್ದು ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಇಬ್ರಾಹಿಂ ನಮ್ಮ ಪಕ್ಷದವರಲ್ಲ. ನಾನು ನಾಮನಿರ್ದೇಶನ  ಸಲ್ಲಿಸಲು  ಹಾಗೂ ಪ್ರಚಾರಕ್ಕಾಗಿ ಬಾದಾಮಿಗೆ ಹೋಗಿದ್ದೆ. ಅದು ಬಿಟ್ಟರೆ ನನಗೆ ಏನೂ ಗೊತ್ತಿಲ್ಲ. ನಾನು 1600 ಮತಗಳಿಂದ ಗೆದ್ದಿದ್ದು. ಈ ವಿಚಾರ ನನಗೆ ಹೊಸದು, ಈ ಬಗ್ಗೆ  ನನಗೆ ಗೊತ್ತಿಲ್ಲ ಎಂದರು.

ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ

ಬಿಜೆಪಿಯವರು ಕಾಂಗ್ರೆಸ್ ಈಗ ಮತಗಳ ಸ್ಥಾನದ ಬಗ್ಗೆ ಪ್ರಸ್ತಾಪಿಸಿರುವುದು ಏಕೆ ಎಂದು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ,  ಬಿಜೆಪಿಯವರು ತಪ್ಪು ಮಾಡಿ ಸುಳ್ಳು ಹೇಳುತ್ತಿದ್ದಾರೆ. ನಾವು ಕಳೆದ ಲೋಕಸಭಾ ಚುನಾವಣೆಯಲ್ಲಿ ಹದಿನಾರು ಸ್ಥಾನಗಳನ್ನು ಗೆಲ್ಲುವು ಎಂದು ಆಂತರಿಕ ಸಮೀಕ್ಷೆ ತಿಳಿಸಿತ್ತು ಆದರೆ ನಾವು ಗೆದ್ದದ್ದು 9 ಸ್ಥಾನಗಳನ್ನು  ಮಾತ್ರ. ರಾಹುಲ್ ಗಾಂಧಿ ಅವರು ಸಾಕ್ಷಿ ಸಮೇತ ವಿಚಾರಗಳನ್ನು ತಿಳಿಸಿದ್ದಾರೆ. ಈ ಎಲ್ಲವೂ ರಾಜ್ಯ ಮತ್ತು ಕೇಂದ್ರ ಚುನಾವಣಾ ಆಯೋಗದ ಬಳಿ ಲಭ್ಯವಿದೆ. ದಾಖಲಾತಿಗಳ ಬಗ್ಗೆಯೇ ಪ್ರಸ್ತಾಪ ಮಾಡಿದ್ದಾರೆ. ಒಂದೇ ಸಣ್ಣ ಕೊಠಡಿಯಲ್ಲಿ 80 ಜನ ವಾಸ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.  ನಾವು ಈ ಬಗ್ಗೆ ಅಧ್ಯಯನ ಮಾಡಿದ ನಂತರ  ವಿಷಯ ತಿಳಿದಿದೆ ಎಂದರು.

ಚುನಾವಣೆಗಳಲ್ಲಿ  ಕೈವಾಡ

ಚುನಾವಣಾ ಆಯೋಗದ ಬಗ್ಗೆ ಜನರಲ್ಲಿ ವಿಶ್ವಾಸವನ್ನು ಮೂಡಿಸಲು ಮತಗಳ್ಳತನದ ಬಗ್ಗೆ ನ್ಯಾಯಾಂಗ ಸ್ವಯಂ ಪ್ರೇರಿತವಾಗಿ ಮಧ್ಯಪ್ರವೇಶ  ಮಾಡಬೇಕೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಚುನಾವಣೆಗಳಲ್ಲಿ, ಇವಿಎಂಗಳಲ್ಲಿ,  ಮತದಾರರ ಪಟ್ಟಿಗಳಲ್ಲಿ, ಕೈವಾಡ ನಡೆಯುತ್ತಿದೆ ಎಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇವೆ. ನನ್ನ ಪ್ರಕಾರ ರಾಹುಲ್ ಗಾಂಧಿಯವರು ಮಾಧ್ಯಮಗಳಲ್ಲಿ ಪ್ರದರ್ಶನ ಮಾಡಿದ್ದು ನಿಜ ಎಂದರು.

ಸತ್ತವರು ಮತ ಹಾಕಿದ್ದರೆ ಅದಕ್ಕೆ ಚುನಾವಣಾ ಆಯೋಗ ಹೊಣೆ

ಉಪ ಚುನಾವಣೆಯಲ್ಲಿ ಸತ್ತವರೆಲ್ಲಾ  ಮತ ಹಾಕಿ ಗೆಲ್ಲಿಸಿದ್ದಾರೆ ಎಂದು ಹಿಂದೆ ಮುಖ್ಯಮಂತ್ರಿಗಳು ಮಾಡಿದ್ದ ಭಾಷಣ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ  ಸಿಎಂ ಸಿದ್ದರಾಮಯ್ಯ, ಒಂದು ವೇಳೆ  ಸತ್ತವರು  ಮತ ಹಾಕಿದ್ದರೆ ಅದಕ್ಕೆ ಯಾರು ಜವಾಬ್ದಾರರು? ಚುನಾವಣಾ ಆಯೋಗ ಇದಕ್ಕೆ ನೇರ ಹೊಣೆ ಎಂದರು.

ಪೀಟರ್ ವೀಕ್ಷಕರಾಗಿದ್ದರು ಅದಕ್ಕೆ ಸಿದ್ದರಾಮಯ್ಯ ಗೆದ್ದರು ಎಂದು ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಅವರಿಲ್ಲದೇ ಹೋಗಿದ್ದರೆ ನನ್ನನ್ನು ಸೋಲಿಸುತ್ತಿದ್ದರು ಎಂದರು.

Key words: Illegal voting, legal action, recommended, CM Siddaramaiah, Mysore

 

The post ಮತಗಳ್ಳತನ ಬಗ್ಗೆ ಕಾನೂನು ಇಲಾಖೆ  ಪರಿಶೀಲನೆ, ಶಿಫಾರಸಿನಂತೆ ಕಾನೂನು ಕ್ರಮ: ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಜಮೀರ್ ರಾಜೀನಾಮೆ ಹೇಳಿಕೆಗೆ ಕಾಂಗ್ರೆಸ್ ಸೊಪ್ಪು ಹಾಕಿಲ್ಲ-ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು,ಮಾರ್ಚ್,21,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಮುಸ್ಲಿಂಮರಿಗೆ ಕೊಡಬೇಕು....

ബി.ജെ.പി തെരഞ്ഞെടുപ്പ് കമ്മിഷനുമായി ഒത്തുകളിച്ചാലും ബംഗാളിൽ മമത ചരിത്ര വിജയം നേടും; പിന്തുണച്ച് അഖിലേഷ്

ലഖ്‌നൗ: പശ്ചിമ ബംഗാൾ തെരഞ്ഞെടുപ്പിൽ മുഖ്യമന്ത്രി മമത ബാനർജി ചരിത്ര ഭൂരിപക്ഷത്തിൽ...

`புதுச்சேரியிலும் திராவிட மாடல் ஆட்சி' திமுக காங்கிரஸ் கூட்டணி இழுபறி; பின்னணியில் ஸ்டாலின் பிளான்

``புதுச்சேரிக்கு திராவிட மாடல் ஆட்சி தேவை...”புதுச்சேரி 2021 சட்டமன்றத் தேர்தலில் மதசார்பற்ற...

CM Chandrababu : హైదరాబాద్ ను మించేలా అమరావతిని నిర్మిస్తాం

ఆంధ్రప్రదేశ్ రాజధాని అమరావతిని అత్యున్నత సాంకేతికతతో, హైదరాబాద్ నగరాన్ని మించేలా ఒక...