26
August, 2026

A News 365Times Venture

26
Wednesday
August, 2026

A News 365Times Venture

ಸೆ.1 ರಂದು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

Date:

ಮೈಸೂರು,ಆಗಸ್ಟ್,19,2025 (www.justkannada.in): ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ (AIISH) ಸಿಲ್ವರ್ ಜ್ಯುಬಿಲಿ(ಬೆಳ್ಳಿ ಮಹೋತ್ಸವ) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸೆಪ್ಟಂಬರ್ 1 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಲಿದ್ದಾರೆ.

ಸೆಪ್ಟೆಂಬರ್ 1 ರಂದು ಮೈಸೂರಿನ ಐಶ್(AIISH)ನಲ್ಲಿ ಸಿಲ್ವರ್ ಜ್ಯುಬಿಲಿ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ  ರಾಷ್ಟ್ರಪತಿ ದ್ರೌಪದಿ  ಮುರ್ಮು ಅವರು ಪಾಲ್ಗೊಳ್ಳುವ ಬಗ್ಗೆ ಅಧಿಕೃತ ಮಾಹಿತಿ ಬಂದಿದೆ ಎಂದು  ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ನಿರ್ದೇಶಕಿ ಎಂ. ಪುಷ್ಪಾವತಿ ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿಗೆ ನೀಡುತ್ತಿರುವ ಎರಡನೇ ಭೇಟಿ ಇದಾಗಿದ್ದು, ಸೆಪ್ಟೆಂಬರ್ 26, 2022 ರಂದು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಆಗಮಿಸಿದ್ದರು. ಸೆಪ್ಟಂಬರ್ 1 ರಂದು  ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿಗೆ ಆಗಮಿಸಿ ಅಲ್ಲಿಂದ ವಿಶೇಷ ವಿಮಾನದಲ್ಲಿ ಮೈಸೂರಿಗೆ ಬರಲಿದ್ದಾರೆ.

ರಾಷ್ಟ್ರಪತಿಯವರ ಭೇಟಿಯ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿ ಅವರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಅವರ ಭೇಟಿಯ ಸಮಯದಲ್ಲಿ ಯಾವುದೇ ಭದ್ರತಾ ಲೋಪವಾಗಬಾರದು ಎಂದು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Key words: President, Draupadi Murmu, visit, Mysore, September 1

The post ಸೆ.1 ರಂದು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒണ്ടാരിയോ തടാകത്തിന്റെ പേര് ‘ലേക്ക് അമേരിക്ക’ എന്നാക്കുമെന്ന് ട്രംപ്

വാഷിങ്ടണ്‍: യു.എസ്- കാനഡ വ്യാപാര തര്‍ക്കം ശക്തമാവുന്നതിനിടെ ഒണ്ടാരിയോ തടാകത്തിന്റെ പേരുമാറ്റുമെന്ന...

`வண்ணத்துப்பூச்சி பூங்காவுக்கு முறையான பேருந்து வசதி இல்லையே..!'- மக்கள் எதிர்பார்ப்பு நிறைவேறுமா?

திருச்சி மாவட்டத்தில் மலைக்கோட்டை, முக்கொம்பு, கல்லணை, ஸ்ரீரங்கம் என நீளும் சுற்றுலாத்...

JustKannada ವರದಿಗೆ ಪಾಲಿಕೆ ಆಯುಕ್ತೆಯ ತಕ್ಷಣದ ಸ್ಪಂದನೆ: 24 ಗಂಟೆಯೊಳಗೆ ಅಪಾಯಕಾರಿ ಕೊಂಬೆ ತೆರವು

ಮೈಸೂರು. ಆಗಸ್ಟ್,25,2026 (www.justkannada.in): ನಗರದ ಚಾಮರಾಜಪುರಂ ಬಜ್ಜಣ್ಣ ಲೇನ್‌ ನ...