ಮಂಗಳೂರು, ಆಗಸ್ಟ್,21,2025 (www.justkannada.in): ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದ ಸಂಬಂಧಿಸಿದಂತೆ ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಎಐ ವಿಡಿಯೋ ಸೃಷ್ಟಿಸಿ ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ವಿರುದ್ದ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸುಮೊಟೋ ಕೇಸ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಗೆ ಪೊಲೀಸರು ನೋಟಿಸ್ ನೀಡಿದ್ದರು.
ಆದರೆ ಸಮೀರ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಮಧ್ಯೆ ಸಮೀರ್ ಆಗಸ್ಟ್ 19 ರಂದು ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇದೀಗ ಸಮೀರ್ ಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು ಬಂಧನ ಭೀತಿಯಿಂದ ಪಾರಾಗಿದ್ದಾರೆ.
Key words: Dharmasthala case, Bail, granted, YouTuber, MD Sameer
The post ಯೂಟ್ಯೂಬರ್ ಎಂ.ಡಿ ಸಮೀರ್ ಗೆ ನಿರೀಕ್ಷಣಾ ಜಾಮೀನು ಮಂಜೂರು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





