25
April, 2026

A News 365Times Venture

25
Saturday
April, 2026

A News 365Times Venture

ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧಿಸಿದ ED

Date:

ಬೆಂಗಳೂರು,ಆಗಸ್ಟ್,23,2025 (www.justkannada.in): ಅಕ್ರಮವಾಗಿ ಆನ್‌ ಲೈನ್ ಮತ್ತು ಆಫ್‌ ಲೈನ್ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಪ್ರಕರಣ ವಿಚಾರವಾಗಿ ದಾಳಿ ಮಾಡಿದ ಇಡಿ ಅಧಿಕಾರಿಗಳು  ಇದೀಗ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿದ್ದಾರೆ . ಸತತ 18 ಗಂಟೆಗೂ ಹೆಚ್ಚು ಕಾಲ ಪರಿಶೀಲಿಸಿದ ಇಡಿ ಅಧಿಕಾರಿಗಳು, ಕೆ.ಸಿ.ವೀರೇಂದ್ರ ಪಪ್ಪಿ ಮನೆಯಲ್ಲಿ ಕೋಟ್ಯಂತರ ರೂ ನಗದು, ವಿದೇಶಿ ಕರೆನ್ಸಿ ಸೇರಿದಂತೆ ಚಿನ್ನಾಭರಣ ಮತ್ತು ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿರುವ ವೀರೇಂದ್ರ ಪಪ್ಪಿ ನಿವಾಸ ನಿನ್ನೆ ದಾಳಿ ಮಾಡಿದ್ದ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಪರಿಶೀಲನೆ ವೇಳೆ 1 ಕೋಟಿ ರೂ ವಿದೇಶಿ ಕರೆನ್ಸಿ ಸೇರಿದಂತೆ ಸುಮಾರು 12 ಕೋಟಿ ರೂ ನಗದು ಪತ್ತೆ ಆಗಿದೆ ಎನ್ನಲಾಗಿದೆ. 6 ಕೋಟಿ ರೂ. ಮೌಲ್ಯದ ಚಿನ್ನ, ಸುಮಾರು 10 ಕೆಜಿ ಬೆಳ್ಳಿ, 4 ವಾಹನಗಳು, 17 ಬ್ಯಾಂಕ್ ಅಕೌಂಟ್ಸ್ ಮತ್ತು 2 ಲಾಕರ್ ಜಪ್ತಿ ಮಾಡಲಾಗಿದೆ ಎನ್ನಲಾಗಿದೆ.

ಸಿಕ್ಕಿಂನ ಗ್ಯಾಂಗ್ಟಕ್ ನಲ್ಲಿ  ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನ  ಬಂಧಿಸಲಾಗಿದ್ದು, ಸಿಕ್ಕಿಂ ನ್ಯಾಯಾಲಯಕ್ಕೆ ಹಾಜರು ಪಡಿಸಿ ಟ್ರಾನ್ಸಿಟ್ ವಾರೆಂಟ್ ಮೇಲೆ ಇಂದು ರಾತ್ರಿ ಬೆಂಗಳೂರಿಗೆ ಇಡಿ ಅಧಿಕಾರಿಗಳು ಕರೆತರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: ED, arrested, Congress MLA, Virender Puppy

The post ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಬಂಧಿಸಿದ ED appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘അവര്‍ ഇപ്പോഴും സൂര്യനെ വരയ്ക്കുന്നു’; ദല്‍ഹിയില്‍ മിനാബ് പെണ്‍കുട്ടികളുടെ കലാസൃഷ്ടികളുടെ പ്രദര്‍ശനം

  ന്യൂദല്‍ഹി: അമേരിക്കയുടെയും ഇസ്രഈലിന്റെയും ആക്രമണത്തിന്റെ ഇരകളായ കുരുന്നുകളുടെ സ്വപ്‌നങ്ങളും കണ്ണീരും...

Dwcra Group: డ్వాక్రా మహిళలకు గుడ్ న్యూస్.. 22 లక్షల మంది అకౌంట్లోకి డబ్బులు..

ఆంధ్రప్రదేశ్‌లోని డ్వాక్రా మహిళల చిరకాల నిరీక్షణకు తెరపడింది. ‘అభయహస్తం’ పథకం కింద...

ಒಳಮೀಸಲಾತಿ ಕಗ್ಗಂಟು ಅಂತ್ಯ:  ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಣಯ

ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಲ್ಲಿ ಉಂಟಾಗಿದ್ದ ಗೊಂದಲವನ್ನು ನಿವಾರಿಸುವಲ್ಲಿ...