5
March, 2026

A News 365Times Venture

5
Thursday
March, 2026

A News 365Times Venture

ನೋಟು ನಿಷೇಧದ ವೇಳೆ ಗ್ರಾಮೀಣ ಭಾರತವನ್ನು ಆರ್ಥಿಕ ಕುಸಿತದಿಂದ ಕಾಪಾಡಿದ್ದೇ ಸಹಕಾರಿ ಚಳವಳಿ- ಕೆ.ವಿ.ಪ್ರಭಾಕರ್

Date:

ಬೆಂಗಳೂರು ಆಗಸ್ಟ್, 23,2025 (www.justkannada.in): 2016 ರಲ್ಲಿ ನೋಟು ನಿಷೇಧ ಜಾರಿ ಆದಾಗ ದೇಶದ ನಗರ ಆರ್ಥಿಕತೆ ಪಾತಾಳ ಸೇರಿತು. ಆದರೆ, ಗ್ರಾಮೀಣ ಭಾರತದ ಆರ್ಥಿಕತೆ ಕುಸಿಯದಂತೆ ತಡೆದದ್ದು ಸಹಕಾರಿ ತತ್ವ ಮತ್ತು ಸಹಕಾರಿ ಚಳವಳಿಯ ಮೌಲ್ಯ ಎನ್ನುವುದನ್ನು ನಾವು ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಪತ್ರಕರ್ತರ ಸಹಕಾರಿ ಸಂಘಕ್ಕೆ 75 ವರ್ಷಗಳು ತುಂಬಿದ ಸಂದರ್ಭದಲ್ಲಿ ಆಯೋಜಿಸಿದ್ದ “ಅಮೃತ ಸಂಭ್ರಮ” ಕಾರ್ಯಕ್ರಮ ಉದ್ಘಾಟಿಸಿ ಕೆ.ವಿ ಪ್ರಭಾಕರ್ ಮಾತನಾಡಿದರು.

ದೇಶದ ಸ್ವಾತಂತ್ರ್ಯ ಚಳವಳಿ ಜೊತೆ ಜೊತೆಗೆ ನಡೆದದ್ದು ನಮ್ಮ ದೇಶದ ಸಹಕಾರ ಚಳವಳಿ. ಮಹಾತ್ಮಗಾಂಧಿ ದೇಶದ ಸ್ವಾತಂತ್ರ್ಯಕ್ಕಾಗಿ 1920 ರಲ್ಲಿ “ಅಸಹಾಕಾರ ಚಳವಳಿಗೆ” ಕರೆ ಕೊಡುವ ಮೊದಲೇ ರಾಜ್ಯದಲ್ಲಿ 1904 ರಲ್ಲಿ ಸಹಕಾರ ಕಾಯ್ದೆ ಜಾರಿ ಆಗಿತ್ತು. ದುಡಿಯುವ ವರ್ಗಗಳ ಆರ್ಥಿಕ ಸ್ವಾತಂತ್ರ್ಯಕ್ಕಾಗಿ ನಡೆದ ಸಹಕಾರ ಚಳವಳಿಯ ಭಾಗವಾಗಿ “ಪತ್ರಕರ್ತರ ಸಹಕಾರ ಸಂಘವೂ ಜನ್ಮ ತಾಳಿದೆ”. ಈ ಸಂಘದ ಸ್ಥಾಪನೆಗೆ ಮುನ್ನುಡಿ ಬರೆದ ಎಲ್ಲಾ ಹಿರಿಯರನ್ನೂ ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ ಎಂದರು.

ಸಹಕಾರಿ ಸಂಘಗಳು, ಸ್ವ-ಸಹಾಯ ಸಂಘಗಳ ಚಳವಳಿಗಳು ಇಂದಿರಾಗಾಂಧಿಯವರ ಬ್ಯಾಂಕ್ ಗಳ ರಾಷ್ಟ್ರೀಕರಣಕ್ಕೆ ಪ್ರೇರಣೆ ಆಗಿದ್ದವು. “ಪರಸ್ಪರ” ಎನ್ನುವುದು ಸಹಕಾರ ತತ್ವದ ಮೂಲ ಮೌಲ್ಯ ಆಗಿರುವಂತೆಯೇ ಪತ್ರಿಕೋದ್ಯಮದ ಮೂಲ ಮಂತ್ರವೂ ಇದೇ ಆಗಿದೆ.  ಪತ್ರಕರ್ತರು ಸಹಕಾರ ಸಂಘ ಸ್ಥಾಪಿಸುವ ಮೊದಲೇ ಕೃಷಿ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಮೀನುಗಾರರ ಸಹಕಾರ ಸಂಘಗಳು ಸ್ಥಾಪನೆ ಆಗಿದ್ದವು. ದುಡಿಯುವ ವರ್ಗಗಳನ್ನು, ಶ್ರಮಿಕ ಸಮುದಾಯಗಳನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಸಹಕಾರಿ ಮನೋಭಾವದಿಂದಲೇ ಪತ್ರಕರ್ತರ ಸಹಕಾರ ಸಂಘವನ್ನೂ ನಮ್ಮ ಹಿರಿಯರು ಸ್ಥಾಪಿಸಿದರು ಎಂದರು.

ಪತ್ರಕರ್ತರು ಮತ್ತು ಪತ್ರಿಕಾ ಕಾರ್ಮಿಕರು ರಾಷ್ಟ್ರೀಯ ಬ್ಯಾಂಕ್ ಗಳ‌ ಪಾಲಿಗೆ ಹೊರಗಿನವರು. ನಾನೂ ಸಹ ಗೃಹ ಸಾಲ ಪಡೆಯುವಾಗ ಸಿಕ್ಕಾಪಟ್ಟೆ ರಗಳೆ ಅನುಭವಿಸಿದೆ. ಪತ್ರಕರ್ತರಿಗೆ ಖಾಸಗಿಯಾಗಿ ಸಾಲ ಕೊಡುವವರೂ ಇಲ್ಲ. ವಾಪಾಸ್ ಕೇಳೋದು ಕಷ್ಟ ಎನ್ನುವ ಭಯ ಖಾಸಗಿಯವರಿಗೆ ಇದ್ದೇ ಇದೆ. ಹೀಗಾಗಿ ಈ ಸಂಘದಲ್ಲಿ ನಾವೇ ಪರಸ್ಪರ ಒಬ್ಬರಿಗೊಬ್ಬರು ಜಾಮೀನು ಆಗುವ ಮೂಲಕ ಪರಸ್ಪರರ ಅಗತ್ಯಗಳಿಗೆ ಸ್ಪಂದಿಸುತ್ತಿದ್ದೇವೆ. ಕಷ್ಟದಲ್ಲಿದ್ದಾಗ ಜಾಮೀನು ಹಾಕಿಸಿಕೊಂಡವರು, ಜಾಮೀನು ಹಾಕಿದವರಿಗೆ ವಂಚಿಸಬಾರದು ಎಂದು ನನ್ನ ವಿನಂತಿ. “ಪರಸ್ಪರತೆ” ಮೌಲ್ಯ ಕಾಪಾಡದಿದ್ದರೆ ಸಹಕಾರ ಬ್ಯಾಂಕ್ ಗಳು ಯಶಸ್ವಿಯಾಗುವುದು ಕಷ್ಟ ಎಂದು ಕೆ.ವಿ ಪ್ರಭಾಕರ್ ತಿಳಿಸಿದರು.

ನಿವೇಶನ ಖರೀದಿ ಮತ್ತು ಗೃಹ ನಿರ್ಮಾಣಕ್ಕೆ ನೆರವಾಗುವ ಉದ್ದೇಶದಿಂದ 1949ರಲ್ಲಿ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ, ಕೇವಲ ರೂ. 353.12 ದುಡಿಯುವ ಬಂಡವಾಳದೊಂದಿಗೆ ಆರಂಭವಾಗಿ ಈಗ ರೂ. 10 ಕೋಟಿಗೂ ಮೀರಿದ ದುಡಿಯುವ ಬಂಡವಾಳ ಹೊಂದಿ, ನಿರಂತರ ನಿವ್ವಳ ಲಾಭವನ್ನೂ ಗಳಿಸುತ್ತಿರುವುದು ಸಂತೋಷದ ವಿಷಯ. ಲೆಕ್ಕಪರಿಶೋಧನಾ ವರ್ಗೀಕರಣದಲ್ಲಿ ‘ಎ’ ಶ್ರೇಣಿಯನ್ನು ಪಡೆದು ಮುನ್ನಡೆಯುತ್ತಿರುವುದು ಸಂಘದ ವಹಿವಾಟು ಪಾರದರ್ಶಕವಾಗಿರುವುದು, ಸಂಘ ಒಂದು  ಕುಟುಂಬದಂತೆ ಪತ್ರಕರ್ತರ ನೋವು ನಲಿವುಗಳಿಗೆ ಸ್ಪಂದಿಸುತ್ತಿದೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಪ್ರತಿ ವರ್ಷ ಸದಸ್ಯರ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸುತ್ತಿರುವುದು, ಕೊಡಗು ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ತರ ನಿಧಿಗೆ ದೇಣಿಗೆ ನೀಡಿರುವುದು ಸಂಘದ ಸಾಮಾಜಿಕ ಹೊಣೆಗಾರಿಕೆಗೆ ಸಾಕ್ಷಿ.

ಪ್ರಸಕ್ತ ಆಡಳಿತ ಮಂಡಳಿ ಸೆಪ್ಟಂಬರ್ 2023ರಲ್ಲಿ ಅಧಿಕಾರ ವಹಿಸಿಕೊಂಡ ನಂತರ, ಸಂಘದ ಚಟುವಟಿಕೆಗಳನ್ನು ವಿಸ್ತರಿಸಲು ಅವಿರತ ಶ್ರಮವಹಿಸುತ್ತಿರುವುದು ಶ್ಲಾಘನೀಯ. ಸದಸ್ಯರಿಗೆ ಮನೆ ಮತ್ತು ನಿವೇಶನ ಖರೀದಿಗಾಗಿ ರೂ. 30 ಲಕ್ಷದವರೆಗೆ ಭದ್ರತಾ ಸಾಲ ಸೌಲಭ್ಯ ನೀಡಲು  ನಿರ್ಧರಿಸಿರುವುದು  ಸಂಘವು ಸುಭದ್ರವಾಗಿರುವುದರ  ಸೂಚಕವಾಗಿದೆ. ಕಡಿಮೆ ಬಡ್ಡಿ ದರದಲ್ಲಿ ರೂ.3 ಲಕ್ಷಗಳ ವರೆಗೆ ವೈಯಕ್ತಿಕ ಸಾಲ, ರೂ.25 ಸಾವಿರದ ವರೆಗೆ ವೈದ್ಯಕೀಯ ನೆರವು ಹಾಗೂ 2 ಲಕ್ಷ ಮೌಲ್ಯದ ಅಪಘಾತ ವಿಮಾ ರಕ್ಷಣೆ ಒದಗಿಸುತ್ತಿದೆ ಎಂದರು.

ಸಂಘವು ‘ಎ’ ಶ್ರೇಣಿಯ ಆಡಿಟ್‌ ವರ್ಗೀಕರಣ ಹೊಂದಿದ್ದು, 2005 ರಲ್ಲಿ ನಡೆದ ‘ಸಹಕಾರ ಸಪ್ತಾಹ’ ಕಾರ್ಯಕ್ರಮದಲ್ಲಿ ಉತ್ತಮ ಸಹಕಾರ ಸಂಘವೆಂಬ ಗೌರವಕ್ಕೆ ಪಾತ್ರವಾಗಿರುವುದು ಸಂಘದ ಸದಸ್ಯರ ಸಮರ್ಪಣಾ ಮನೋಭಾವಕ್ಕೆ ಸಾಕ್ಷಿಯಾಗಿದೆ ಇದು ಹೀಗೆಯೇ ಸಾಗಲಿ, ಸಂಘ ಹಾಗೂ ಪತ್ರಕರ್ತ ಮಿತ್ರರ ಬಾಂಧವ್ಯ ಗಟ್ಟಿಯಾಗಲಿ , ಇನ್ನಷ್ಟು, ಮತ್ತಷ್ಟು ಕಲ್ಯಾಣ ಕಾರ್ಯಕ್ರಮಗಳನ್ನು ಸಂಘ ಹಮ್ಮಿಕೊಂಡು‌ ಮುನ್ನಡೆಯಲಿ  ಎಂದು ಹಾರೈಸುತ್ತೇನೆ. ಸಹಕಾರ ಸಂಘ ಮುಂದಿಟ್ಟಿರುವ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಸಕಾರಾತ್ಮಕವಾಗಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಸಂಘದ ಅಧ್ಯಕ್ಷರಾದ ರಮೇಶ್ ಪಾಳ್ಯ, ಕಾರ್ಯದರ್ಶಿ ರಮೇಶ್, ಹಿರೇಜಂಬೂರು ಸೇರಿ ಎಲ್ಲಾ ಪದಾಧಿಕಾರಿಗಳು ಮತ್ತು ನಿರ್ದೇಶಕರು ಉಪಸ್ಥಿತರಿದ್ದರು.

Key words:  Journalists’ Cooperative Association, rural India, economic, K.V. Prabhakar

The post ನೋಟು ನಿಷೇಧದ ವೇಳೆ ಗ್ರಾಮೀಣ ಭಾರತವನ್ನು ಆರ್ಥಿಕ ಕುಸಿತದಿಂದ ಕಾಪಾಡಿದ್ದೇ ಸಹಕಾರಿ ಚಳವಳಿ- ಕೆ.ವಿ.ಪ್ರಭಾಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು...

ഇസ്രഈലിന്റെ പാവയായ ട്രംപിൽ നിന്നും അമേരിക്കയെ തിരിച്ചുപിടിക്കാൻ ആഹ്വാനം ചെയ്ത് ഇറാഖ് നേതാവ്

ബാഗ്‌ദാദ്‌: ഇസ്രഈലിന്റെ കയ്യിലെ പാവയായ അമേരിക്കൻ പ്രസിഡന്റ് ഡൊണാൾഡ് ട്രംപിൽ നിന്നും...

“ஃபினிஷ்' அந்த கை சைகையை நான் திட்டமிட்டு செய்யவில்லை.!' – முதல்வர் ஸ்டாலின் விளக்கம்

திமுக - காங்கிரஸ் கூட்டணியின் தொகுதி பங்கீடு ஒப்பந்தத்தை நேற்று (மார்ச்.5)...

Sonu Sood: రంగంలోకి హీరో సోనూసూద్.. దుబాయ్‌లో చిక్కుకున్న వారికి ఉచిత వసతి!

పశ్చిమాసియాలో నెలకొన్న యుద్ధ పరిస్థితుల కారణంగా అంతర్జాతీయ విమాన సర్వీసులు రద్దయిన...