9
February, 2026

A News 365Times Venture

9
Monday
February, 2026

A News 365Times Venture

ಡಿಸಿಎಂ ಡಿಕೆಶಿ ಅವರಿಗೆ ಕಿಂಚಿತ್ತು ಸ್ವಾಭಿಮಾನ, ಧೈರ್ಯ ಇದ್ದಿದ್ದರೇ ಕ್ಷಮೆ ಕೇಳದೇ ರಾಜೀನಾಮೆ ಬಿಸಾಕಬೇಕಿತ್ತು- ಆರ್.ಅಶೋಕ್

Date:

ಬೆಂಗಳೂರು,ಆಗಸ್ಟ್,26,2025 (www.justkannada.in):  ಸದನದಲ್ಲಿ ಆರ್ ಎಸ್ ಎಸ್ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಕ್ಷಮೆ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್ , ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು ಎಂದು ತಿಳಿಸಿದ್ದಾರೆ.

“ನಮಸ್ತೇ ಸದಾ ವತ್ಸಲೇ ಮಾತೃಭೂಮೇ” ಎಂದು ತಾಯಿ ಭಾರತಾಂಬೆಗೆ ನಮಸ್ಕರಿಸಿದ್ದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎನ್ನುವುದಾದರೆ, ಕಾಂಗ್ರೆಸ್ ಪಕ್ಷದ ಪ್ರಕಾರ ಭಾರತೀಯರು ಇನ್ಯಾರಿಗೆ ಜಯಕಾರ ಹಾಕಬೇಕು? ಇಟಲಿ ಮಾತೆಗಾ? ಇಟಲಿಯಿಂದ ಬಂದ ಮೇಡಂಗಾ? ಎಂದು ಲೇವಡಿ ಮಾಡಿದ್ದಾರೆ.

ಆರ್ ಎಸ್ಎಸ್ ಪ್ರಾರ್ಥನಾ ಗೀತೆಯ ಮೊದಲನೆಯ ಸಾಲಿನ ಸಾರಾಂಶ ಇಷ್ಟೇ.  “ನಮ್ಮನ್ನೆಲ್ಲ ವಾತ್ಸಲ್ಯದಿಂದ ಸಾಕುತ್ತಿರುವ ಮಾತೃ ಸಮಾನಳಾದ ತಾಯಿ ಭಾರತಾಂಬೆಗೆ ನನ್ನ ನಮಸ್ಕಾರಗಳು.” ಜನ್ಮ ಕೊಟ್ಟ ಮಾತೃಭೂಮಿ ಬಗ್ಗೆ ಈ ಭಾವನೆ ಇಟ್ಟುಕೊಳ್ಳುವುದು ತಪ್ಪೇ? ತಾಯ್ನೆಲಕ್ಕೆ ನಮಸ್ಕಾರ ಮಾಡುವುದೇ ತಪ್ಪೇ? ಎಂದು ಪ್ರಶ್ನಿಸಿರುವ ಆರ್.ಅಶೋಕ್,  ಒಂದು ಕಡೆ ವಿಧಾನಸೌಧದಲ್ಲಿ “ಪಾಕಿಸ್ತಾನ ಜಿಂದಾಬಾದ್” ಎಂದು ಘೋಷಣೆ ಕೂಗಿದವರನ್ನ ಸಮರ್ಥನೆ ಮಾಡಿಕೊಳ್ಳುವ ಕಾಂಗ್ರೆಸ್ ಪಕ್ಷ, ಮತ್ತೊಂದು ಕಡೆ ತಾಯಿ ಭಾರತಾಂಬೆಗೆ ನಮಸ್ಕರಿಸುವವರನ್ನ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುತ್ತದೆ. ಇದನ್ನು ದೇಶದ್ರೋಹಿ ಮನಸ್ಥಿತಿ ಅನ್ನದೇ ಇನ್ನೇನನ್ನಲು ಸಾಧ್ಯ? ಎಂದು ಕುಟುಕಿದ್ದಾರೆ.

ಇಷ್ಟಕ್ಕೂ ಡಿ.ಕೆ.ಶಿವಕುಮಾರ್ ಅವರು ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು? ಸೋನಿಯಾ ಗಾಂಧಿ ಅವರಾ? ರಾಹುಲ್ ಗಾಂಧಿ ಅವರಾ? ಕೆ.ಸಿ.ವೇಣುಗೋಪಾಲ್ ಅವರಾ? ಸುರ್ಜೆವಾಲಾ ಅವರಾ? ಅಥವಾ ಬಿಕೆ ಹರಿಪ್ರಸಾದ್ ಅವರು ಹೇಳಿದ್ದಕ್ಕೆ ಕ್ಷಮೆ ಕೇಳಿದರಾ?

ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕಿಂಚಿತ್ತಾದರೂ ಸ್ವಾಭಿಮಾನ ಇದ್ದಿದ್ದರೆ, ಕಿಂಚಿತ್ತಾದರೂ ಧೈರ್ಯ ಇದ್ದಿದ್ದರೆ, ಕ್ಷಮೆ ಕೇಳಬಾರದಿತ್ತು. ಕೇಳಲೇಬೇಕು ಎನ್ನುವ ಒತ್ತಡ ಇದ್ದಿದ್ದರೆ ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು.

“He who loves not his country can love nothing”. ಅಂದರೆ “ತನ್ನ ಮಾತೃಭೂಮಿಯನ್ನು ಪ್ರೀತಿಸದವನು ಏನನ್ನೂ ಪ್ರೀತಿಸಲಾರ” ಎನ್ನುವ ಮಾತಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ “ಕುರ್ಚಿಯ ಮೇಲೆ ಪ್ರೀತಿ ಇದ್ದರೆ ದೇಶಪ್ರೇಮವನ್ನು ಬಿಡಬೇಕು” ಎನ್ನುವ ಪರಿಸ್ಥಿತಿ ಇದೆ. ಅಧಿಕಾರದ ಮೇಲಿನ ವ್ಯಾಮೋಹಕ್ಕೆ, ಜನ್ಮ ಕೊಟ್ಟ ತಾಯ್ನೆಲವನ್ನೇ ಬಿಟ್ಟುಕೊಡುವ so-called ನಾಯಕರು ನಾಡಿನ ಮುಖ್ಯಮಂತ್ರಿಗಳಾಗಲು ಹೊರಟಿರುವುದು ನಮ್ಮ ನಾಡಿನ ಸದ್ಯದ ದೊಡ್ಡ ದುರಂತ ಎಂದು ಆರ್.ಅಶೋಕ್ ಟೀಕಿಸಿದ್ದಾರೆ.

Key words: DCM DK Shivakumar, RSS, Song,  Apologized, R.Ashok

The post ಡಿಸಿಎಂ ಡಿಕೆಶಿ ಅವರಿಗೆ ಕಿಂಚಿತ್ತು ಸ್ವಾಭಿಮಾನ, ಧೈರ್ಯ ಇದ್ದಿದ್ದರೇ ಕ್ಷಮೆ ಕೇಳದೇ ರಾಜೀನಾಮೆ ಬಿಸಾಕಬೇಕಿತ್ತು- ಆರ್.ಅಶೋಕ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಎ.ಆರ್.ಎ.ಐ. ಸ್ಥಾವರಕ್ಕೆ ಮಂಡ್ಯ ಜಿಲ್ಲೆಯಲ್ಲಿ ಭೂಮಿ ಲಭ್ಯ: ಎಚ್ಡಿಕೆಗೆ ಎಂ ಬಿ ಪಾಟೀಲ ಪತ್ರ

  ಬೆಂಗಳೂರು ಫೆ.೦೯,೨೦೨೬ : ದೇಶದ ಪ್ರಪ್ರಥಮ ನಿರ್ಮಾಣ ಕಾಮಗಾರಿ ಮತ್ತು...

നരവനെയുടെ പുസ്തകം പ്രചരിപ്പിക്കുന്നതിനെതിരെ കേസെടുത്ത് ദല്‍ഹി പൊലീസ്

ന്യൂദല്‍ഹി: കരസേനാ മുന്‍ മേധാവി ജനറല്‍ എം.എ നരവനെയുടെ ‘ഫോര്‍ സ്റ്റാര്‍സ്...

OPS: '130 எம்.எல்.ஏக்கள் வருவார்கள்’ டு தனிமரம்! – சரிந்த ஓ.பி.எஸ் சாம்ராஜ்யம்

`அதிகாரத்தை விட்டுக் கொடுப்பதற்காக யாரும் அதிகாரத்துக்கு வருவதில்லை!' ஆனால், ஓ.பன்னீர்செல்வம் கொஞ்சம்...

Tragedy : పెళ్లి వేడుకలో విషాదం.. స్విమ్మింగ్ పూల్‌లో పడి బాలుడి మృతి..

హైదరాబాద్ శివార్లలోని చిలుకూరు పరిధిలో గల ఒక రిసార్ట్‌లో ఘోర విషాదం...