14
March, 2026

A News 365Times Venture

14
Saturday
March, 2026

A News 365Times Venture

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜೊತೆ ಸಭೆ: ಬೇಡಿಕೆಗಳ ಬಗ್ಗೆ ಚರ್ಚೆ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ

Date:

ಬೆಂಗಳೂರು, ಆಗಸ್ಟ್, 29,2025 (www.justkannada.in):  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದೊಂದಿಗೆ ಇಂದು ಬೆಂಗಳೂರಿನ ಮಲ್ಲೇಶ್ವರದ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕಚೇರಿಯಲ್ಲಿ ಸಭೆ ನಡೆಸಿದರು.

ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಲಿ ಅವರ ನೇತೃತ್ವದಲ್ಲಿ ಹಲವು ಪ್ರತಿನಿಧಿಗಳು ಸಚಿವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಮಂಡಿಸಿದರು.

ಶಿಕ್ಷಕರ ಬೇಡಿಕೆಗಳಿಗೆ ಪ್ರತಿಕ್ರಿಯಿಸಿದ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಇಲಾಖೆ ಸದಾ ಶಿಕ್ಷಕರ ಜೊತೆಗೆ ನಿಲ್ಲುವುದು ಎಂದು ಭರವಸೆ ನೀಡಿದರು. ಅಲ್ಲದೇ, ಈ ಬೇಡಿಕೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತರುತ್ತೇವೆ ಎಂದು ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಸಕಾರಾತ್ಮಕ ನಿರ್ಧಾರದ ನಿರೀಕ್ಷೆಯಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಸಚಿವ ಮಧು ಬಂಗಾರಪ್ಪ, ಶಿಕ್ಷಕರ ಸಂಘವನ್ನು ಮುಷ್ಕರಕ್ಕೆ ಹೋಗಬಾರದೆಂದು ತಿಳಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ. ವಿ. ತ್ರಿಲೋಕ್ ಚಂದ್ರ ಉಪಸ್ಥಿತರಿದ್ದರು.

Key words: Primary School Teachers’ Association, Meeting,  Minister, Madhu Bangarappa

The post ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜೊತೆ ಸಭೆ: ಬೇಡಿಕೆಗಳ ಬಗ್ಗೆ ಚರ್ಚೆ ಭರವಸೆ ನೀಡಿದ ಸಚಿವ ಮಧು ಬಂಗಾರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ದೇಶದಲ್ಲಿ LPG ಗ್ಯಾಸ್, ಪೆಟ್ರೋಲ್ ಡಿಸೇಲ್ ಗೆ ಅಭಾವವಿಲ್ಲ- ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟನೆ

ನವದೆಹಲಿ,ಮಾರ್ಚ್,13,2026 (www.justkannada.in): ದೇಶದಲ್ಲಿ LPG ಗ್ಯಾಸ್ ಸಿಲಿಂಡರ್, ಪೆಟ್ರೋಲ್ ಡಿಸೇಲ್...

ഒറ്റ രാത്രി കൊണ്ടല്ല, പൊങ്കാല ശുചീകരണം നടന്നത് മൂന്നുദിവസം കൊണ്ട്; വി.വി. രാജേഷിന്റെ വാദം തള്ളി കളക്ടര്‍

തിരുവനന്തപുരം: ആറ്റുകാല്‍ പൊങ്കാല ദിനത്തില്‍ തന്നെ തിരുവനന്തപുരം നഗരം പൂര്‍ണമായും ശുചിയാക്കിയെന്ന...

ஆதவ் டேபிள் ஃபேன்; ஆனந்த் எலெக்ட்ரிக் குக்கர்! – போட்டி போட்டு பரிசுப் பொருட்களை இறக்கும் தவெக-வினர்

தவெகவின் முதற்கட்ட வேட்பாளர் பட்டியலை விஜய் உறுதி செய்திருக்கும் நிலையில், சென்னைக்குள்...

LPG Crisis: భారత్‌కు గుడ్‌ న్యూస్.. హార్ముజ్ నుంచి బయలుదేరిన LPG నౌకలు..

LPG Crisis: భారత్‌కు గుడ్ న్యూస్. దేశవ్యాప్తంగా ఇంధన సంక్షోభం ముంచుకొస్తున్న...