12
March, 2026

A News 365Times Venture

12
Thursday
March, 2026

A News 365Times Venture

ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು

Date:

ಮಂಡ್ಯ, ಸೆಪ್ಟೆಂಬರ್​,1,2025 (www.justkannada.in): ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್ ಮೃತ ವ್ಯಕ್ತಿ. ಕೆ.ಆರ್.ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಘಟನೆ ನಡೆದಿದೆ. ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಯುವಕರ ಜೊತೆ ಡಿಜೆ ಹಾಡಿಗೆ  ಮಂಜುನಾಥ್ ಭರ್ಜರಿ ಹೆಜ್ಜೆ ಹಾಕುತ್ತಿದ್ದರು. ಆದರೆ ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ್ ಅವರ ಕೊನೆಯ ಕ್ಷಣದ ದೃಶ್ಯಗಳು ಸ್ಥಳೀಯರ ಮೊಬೈಲ್​ನಲ್ಲಿ ಸೆರೆ ಆಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಾಗವಲ್ಲಿ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ವ್ಯಕ್ತಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಲಕ್ಷ್ಮಿಪತಿ (40) ಮೃತಪಟ್ಟ ವ್ಯಕ್ತಿ.

ಗಣೇಶ ವಿಸರ್ಜನೆ ಹಿನ್ನಲೆ ಗ್ರಾಮಸ್ಥರು ಡ್ಯಾನ್ಸ್​​ ಮಾಡುತ್ತಿದ್ದರು. ಲಕ್ಷ್ಮಿಪತಿ ಕೂಡ ಡ್ಯಾನ್ಸ್ ಮಾಡುತ್ತಿದ್ದು,  ಹಠಾತ್ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.

Key words: Man, dies, heart attack, dancing

The post ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ...

ഇറാനെ ആക്രമിക്കാനായി ഇറാഖിനെ താവളമാക്കാന്‍ ആരെയും അനുവദിക്കില്ല: ഇറാഖ് പ്രധാനമന്ത്രി

ബാഗ്ദാദ്: ഇറാനെതിരായ ആക്രമണങ്ങള്‍ക്ക് യു.എസ് ഇറാഖിന്റെ വ്യോമാതിര്‍ത്തിയടക്കം ഉപയോഗിക്കുന്നതിനെ എതിര്‍ത്ത് ഇറാഖ്...

Supreme Court: పార్టీ ఫిరాయింపుల కేసులో సుప్రీంకోర్టు సంచలన తీర్పు..

Supreme Court: 10 మంది పార్టీ ఫిరాయింపు కేసు ఎదుర్కొన్న ఎమ్మెల్యేలకు...