1
April, 2026

A News 365Times Venture

1
Wednesday
April, 2026

A News 365Times Venture

ಗ್ಯಾರಂಟಿ ಯೋಜನೆ: ಈವರೆಗೆ 97,813 ಕೋಟಿ ರೂ. ವೆಚ್ಚ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಸೆಪ್ಟಂಬರ್,8,2025 (www.justkannada.in): ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ 544ಕೋಟಿ ಫಲಾನುಭವಿಗಳಿಗೆ ರೂ.13,903ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ 72.02ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ ಎಂದರು.

ಮರಣ ಹೊಂದುವ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ತಿಂಗಳು ಪಂಚಾಯತ್ ಹಂತದಲ್ಲಿ ನವೀಕರಿಸಿ ಸಂಬಂಧಪಟ್ಟ ಬ್ಯಾಂಕುಗಳಿಗೆ ಮಾಹಿತಿಯನ್ನು ಒದಗಿಸಬೇಕು. ಮರಣ ಹೊಂದುವ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು.  ಪಂಚಾಯತ್ ಮಟ್ಟದಲ್ಲಿ ಫಲಾನುಭವಿಗಳ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಗೆ ಕ್ರಮ ಕೈಗೊಳ್ಳಬೇಕು. ಜಿಎಸ್ಟಿ ರಿಟರ್ನ್ ಸಲ್ಲಿಸುವವರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು.

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ. ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆಂದೋಲನ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Guarantee scheme, Rs 97,813 crore, spent, CM Siddaramaiah

The post ಗ್ಯಾರಂಟಿ ಯೋಜನೆ: ಈವರೆಗೆ 97,813 ಕೋಟಿ ರೂ. ವೆಚ್ಚ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಇಂದು ಸಿಎಂ ಸಿದ್ದರಾಮಯ್ಯ, ಏ.5ಕ್ಕೆ ಜಮೀರ್ ಪ್ರಚಾರಕ್ಕೆ ಬರಲಿದ್ದಾರೆ – ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ,ಏಪ್ರಿಲ್,1,2026 (www.justkannada.in):  ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು...

ലൈംഗികാതിക്രമ കേസില്‍ രഞ്ജിത് 14 ദിവസം റിമാന്‍ഡില്‍; കള്ളക്കേസെന്ന് പ്രതിഭാഗം; ഒതുക്കി തീര്‍ക്കാന്‍ ശ്രമിച്ചെന്ന് പരാതിക്കാരി

കൊച്ചി: യുവനടിയുടെ ലൈംഗികാതിക്രമ പരാതിയില്‍ സംവിധായകനും ചലച്ചിത്ര അക്കാദമി മുന്‍ ചെയര്‍മാനുമായ...

16-வது மக்கள் தொகை கணக்கெடுப்பு: ரூ.11,718.24 கோடி நிதி ஒதுக்கீடு; ‘டிஜிட்டல்’ முறையில் தொடக்கம்!

இந்தியாவின் 16-வது மக்கள் தொகை கணக்கெடுப்பு மற்றும் சுதந்திரத்திற்குப் பிறகு நடைபெறும்...

Sai Rajesh :మెగాస్టార్ సినిమాలకు మణిశర్మ ప్లస్ పాయింట్..

టాలీవుడ్ సెన్సేషనల్ డైరెక్టర్ సాయి రాజేష్ తనలోని అసలైన ‘మెగా’ ఫ్యాన్‌ను...