1
April, 2026

A News 365Times Venture

1
Wednesday
April, 2026

A News 365Times Venture

ಮದ್ದೂರು ಗಲಭೆ ಕೇಸ್: ಜಾತಿಧರ್ಮ ಪರಿಗಣಿಸದೇ ತಪ್ಪೆಸೆಗಿದವರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಸೆಪ್ಟೆಂಬರ್ 9,2025 (www.justkannada.in): ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ, 21 ಜನರನ್ನು ಈಗಾಗಲೇ ಬಂಧಿಸಿದ್ದು, ಯಾವುದೇ ಜಾತಿ ಧರ್ಮಗಳನ್ನು ಸರ್ಕಾರ ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮದ್ದೂರು ಗಲಭೆಗೆ ಸಂಬಂಧಪಟ್ಟಂತೆ ಬಿಜೆಪಿಯವರು ಮದ್ದೂರಿಗೆ ಪಾದಯಾತ್ರೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೆಶವಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ಚಲೋ ಎಂಬ ಕಾರ್ಯಕ್ರಮ ಮಾಡಿದರು. ಆರ್ ಎಸ್ ಎಸ್ ಸಂಘಟನೆಯವರು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದವರು ಇದರಲ್ಲಿ ಪಾಲ್ಗೊಂಡು,  ಶಾಂತಿ ಕದಡುವ ಕೆಲಸವನ್ನು ಮಾಡುತ್ತಾರೆಂಬ ಕಾರಣಕ್ಕೆ  ಪೊಲೀಸರು ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನೀಡಲಿಲ್ಲ. ಮದ್ದೂರಿನಲ್ಲಿ ಬಂದ್ ಮಾಡಲು ಕರೆ ನೀಡಿದ್ದರು. ಗಲಭೆಯಲ್ಲಿ ನಿರತರಾಗಿದ್ದ ಯಾವುದೇ ಪಕ್ಷ, ಸಮುದಾಯವರೇ ಆಗಿದ್ದರೂ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಣಿಪುರ ಹಿಂಸಾಚಾರದ ಬಗ್ಗೆ ಬಿಜೆಪಿ ಧ್ವನಿ ಎತ್ತುವುದಿಲ್ಲ

ಬಿಜೆಪಿಯವರು ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಾಗಿ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ್ದಾರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ರಾಜ್ಯ ಸರ್ಕಾರದ್ದಾಗಿರುತ್ತದೆ. ಕೇಂದ್ರದಲ್ಲಿ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡ ಸಂದರ್ಭದಲ್ಲಿ ಬಿಜೆಪಿಯವರು ಎಲ್ಲಿದ್ದರು.? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ  ಯಾವುದೇ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ ಎಂದು ಮರುಪ್ರಶ್ನಿಸಿದರು. ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದರು.

ಎಂಎಲ್ ಸಿಗಳಿಗೂ ಕ್ಷೇತ್ರ ಅಭಿವೃದ್ಧಿಗೆ ಅನುದಾನ ನೀಡುವ ಆಶ್ವಾಸನೆ

ಇಂದು ಆಡಳಿತ ಪಕ್ಷದ ವಿಧಾನಪರಿಷತ್ತಿನ ಸದಸ್ಯರೊಂದಿಗೆ ಸಭೆ ನಡೆಸಲಾಗಿದೆ.  .ಈ ಹಿಂದೆ ಜಿಲ್ಲಾ ಶಾಸಕರೊಂದಿಗೆ ಸಭೆ ನಡೆಸಿದಂತೆ, ನಾಳೆ ಬೆಂಗಳೂರು ನಗರದ ಶಾಸಕರೊಂದಿಗೆ ಸಭೆ ನಡೆಸಲಾಗುವುದು. ಶಾಸಕರು ತಮ್ಮ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಆಯವ್ಯಯದಲ್ಲಿ 8000 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಶಾಸಕರಿಗೆ ನೀಡಿದಂತೆ ಎಂಎಲ್ ಸಿ ಗಳಿಗೂ, ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವಂತೆ ಬೇಡಿಕೆ ಸಲ್ಲಿಸಿದ್ದು, ಮೀಸಲಿರಿಸಿರುವ 8000 ಕೋಟಿ ರೂ.ಗಳಲ್ಲಿ ಎಂಎಲ್ ಸಿ ಗಳಿಗೂ ಅನುದಾನ ನೀಡಲು ಪರಿಶೀಲಿಸುವುದಾಗಿ ಆಶ್ವಾಸನೆ ನೀಡಲಾಗಿದೆ ಎಂದು ತಿಳಿಸಿದರು.

Key words: Maddur, riot case, Action, CM Siddaramaiah

The post ಮದ್ದೂರು ಗಲಭೆ ಕೇಸ್: ಜಾತಿಧರ್ಮ ಪರಿಗಣಿಸದೇ ತಪ್ಪೆಸೆಗಿದವರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

16-வது மக்கள் தொகை கணக்கெடுப்பு: ரூ.11,718.24 கோடி நிதி ஒதுக்கீடு; ‘டிஜிட்டல்’ முறையில் தொடக்கம்!

இந்தியாவின் 16-வது மக்கள் தொகை கணக்கெடுப்பு மற்றும் சுதந்திரத்திற்குப் பிறகு நடைபெறும்...

Sai Rajesh :మెగాస్టార్ సినిమాలకు మణిశర్మ ప్లస్ పాయింట్..

టాలీవుడ్ సెన్సేషనల్ డైరెక్టర్ సాయి రాజేష్ తనలోని అసలైన ‘మెగా’ ఫ్యాన్‌ను...

ಕಾಂಗ್ರೆಸ್ ವಿರುದ್ದ ಮುಸ್ಲೀಮರು ಮುನಿಸಿಕೊಂಡಿಲ್ಲ: ಎಲ್ಲಾ ಬಿಜೆಪಿ ಷಡ್ಯಂತ್ರ- ಸಚಿವ ಮಲ್ಲಿಕಾರ್ಜುನ್

ದಾವಣಗೆರೆ,ಮಾರ್ಚ್,31,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಸ್ಲೀಂ...

ഗള്‍ഫ് രാജ്യങ്ങളിലെ ഇറാന്റെ ആക്രമണങ്ങളെ അപലപിക്കുന്നു: സിറിയന്‍ പ്രസിഡന്റ്

സിറിയ: ഗള്‍ഫ് രാജ്യങ്ങളിലേക്കുള്ള ഇറാന്റെ സൈനിക നടപടികളെ അപലപിച്ച് സിറിയന്‍ പ്രസിഡന്റും...