1
April, 2026

A News 365Times Venture

1
Wednesday
April, 2026

A News 365Times Venture

ಅನರ್ಹ ಬಿಪಿಎಲ್ ಕಾರ್ಡ್ ಗಳ ರದ್ದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರು,ಸೆಪ್ಟಂಬರ್,10,2025 (www.justkannada.in): ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು.  ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್ ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು. ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Key words: Department of Food, Meeting, CM Siddaramaiah, BPL cards.

The post ಅನರ್ಹ ಬಿಪಿಎಲ್ ಕಾರ್ಡ್ ಗಳ ರದ್ದಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕಾಂಗ್ರೆಸ್ ವಿರುದ್ದ ಮುಸ್ಲೀಮರು ಮುನಿಸಿಕೊಂಡಿಲ್ಲ: ಎಲ್ಲಾ ಬಿಜೆಪಿ ಷಡ್ಯಂತ್ರ- ಸಚಿವ ಮಲ್ಲಿಕಾರ್ಜುನ್

ದಾವಣಗೆರೆ,ಮಾರ್ಚ್,31,2026 (www.justkannada.in): ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಸ್ಲೀಂ...

ഗള്‍ഫ് രാജ്യങ്ങളിലെ ഇറാന്റെ ആക്രമണങ്ങളെ അപലപിക്കുന്നു: സിറിയന്‍ പ്രസിഡന്റ്

സിറിയ: ഗള്‍ഫ് രാജ്യങ്ങളിലേക്കുള്ള ഇറാന്റെ സൈനിക നടപടികളെ അപലപിച്ച് സിറിയന്‍ പ്രസിഡന്റും...

TVK: விஜய் முன் நிறுத்தப்பட்ட `திடீர்' வேட்பாளர் – திக்குமுக்காடும் திருப்பத்தூர் தவெக!

திருப்பத்தூர் மாவட்ட அ.தி.மு.க-வில், திருப்பத்தூர் தெற்கு ஒன்றியச் செயலாளராக இருந்தவர் டாக்டர்...

Chicken Shops Shut Down: నాన్‌వెజ్‌ ప్రియులకు షాకింగ్‌ న్యూస్‌.. నేటి నుంచి చికెన్‌ సెంటర్లు బంద్..

Chicken Shops Shut Down: నాన్‌వెజ్‌ ప్రియులకు షాకింగ్‌ న్యూస్.. రిటైల్‌...