1
April, 2026

A News 365Times Venture

1
Wednesday
April, 2026

A News 365Times Venture

ಚಲನಚಿತ್ರಗಳ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿರುವ ಅತ್ಯಂತ ಪ್ರಭಾವಿ ಕ್ಷೇತ್ರ ಚಿತ್ರ ರಂಗ- ಸಚಿವ ಡಾ. ಹೆಚ್. ಸಿ ಮಹದೇವಪ್ಪ

Date:

ಮೈಸೂರು,ಸೆಪ್ಟಂಬರ್, 13,2025 (www.justkannada.in): ಭಾರತದ ಜನರ ಜೀವನದ ಮೇಲೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಧಾರ್ಮಿಕ ಶಕ್ತಿಗಳನ್ನು ಸೇರಿಸುವ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿರುವ ಅತ್ಯಂತ ಪ್ರಭಾವಿ ಕ್ಷೇತ್ರ ಎಂದರೇ ಅದು ಚಲನಚಿತ್ರ ಕ್ಷೇತ್ರ. ತಮ್ಮ ರಚನೆ, ಸಂಗೀತ, ಸಾಹಿತ್ಯದ ಮೂಲಕ ಸಮಾಜದಲ್ಲಿ ಹೆಚ್ಚು ಜನಪ್ರಿಯತೆಯನ್ನು  ಚಲನಚಿತ್ರ ಕ್ಷೇತ್ರ ಗಳಿಸುತ್ತಿದೆ  ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ. ಹೆಚ್. ಸಿ ಮಹದೇವಪ್ಪ ಅವರು ಹೇಳಿದರು.

ಇಂದು ಮಾಲ್ ಆಫ್ ಮೈಸೂರಿನ ನೆಲಮಹಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ದಸರಾ ಚಲನಚಿತ್ರೋತ್ಸವ -2025 ವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ಸರೋಜಾ ದೇವಿ ಅವರು ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಹೆಸರು ಮಾಡಿ ಸಾಧನೆ ಮಾಡಿದ್ದಾರೆ. ಕನ್ನಡ, ತೆಲುಗು, ಹಿಂದಿ ಚಿತ್ರಗಳಲ್ಲಿ ತನ್ನದೇ ಆದಂತಹ ಗಂಭೀರತೆ ಮೂಲಕ ಜನರ ಮನಸನ್ನು ಗೆದ್ದಿದ್ದಾರೆ. ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತೀರ್ಮಾನ ಮಾಡಲಾಗಿದೆ ಹಾಗೂ ಡಾ.ವಿಷ್ಣುವರ್ಧನ್ ಅವರಿಗೂ ನೀಡಲು ತೀರ್ಮಾನಿಸಲಾಗಿದೆ. ಸಮಾಜದ ಮೇಲೆ ನಡವಳಿಕೆಯ ಮೇಲೆ ಸಾಧಕರನ್ನು ಜೀವಂತವಾಗಿ ಇಡುವಂತೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಭಾರತೀಯರು ಎಲ್ಲರೂ ಒಂದೇ ಎಂದು ತೋರಿಸಿ ಕೊಡುವ ಹಬ್ಬ ನಮ್ಮ ಮೈಸೂರು ದಸರಾ. ಎಲ್ಲರೂ ಒಗ್ಗಟ್ಟಿನಿಂದ ಇರುವುದಕ್ಕೆ ಈ ಹಬ್ಬ ಸಾಕ್ಷಿಯಾಗಿದೆ ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್ ದಸರಾ ಹಬ್ಬಕ್ಕೆ ಕೊಟ್ಟಿರುವಂತಹ ಕೊಡುಗೆ ಅಪಾರ ಮಹತ್ವವಾದದ್ದು. ಅದರಂತೇ ನಾವೆಲ್ಲರೂ ಒಂದಾಗಿ ನಾವೆಲ್ಲರೂ ಒಂದೇ ಎಂಬ ಸಂದೇಶವನ್ನು ನೀಡುವುದರ ಮೂಲಕ ಈ ಚಲನಚಿತ್ರವನ್ನು ಉದ್ಘಾಟನೆ ಮಾಡಿದ್ದೇನೆ.  ಇಲ್ಲಿ 84 ಸಿನಿಮಾಗಳ ಪ್ರದರ್ಶನ ಮಾಡಲಾಗುತ್ತಿದ್ದು, ಪ್ರೇಕ್ಷಕರು  ಪ್ರತಿ ಚಿತ್ರವನ್ನು ವೀಕ್ಷಣೆ ಮಾಡಬೇಕು. ಎಲ್ಲರೂ ಮೈಸೂರು ಪ್ರಾಂತ್ಯವನ್ನು ಎತ್ತಿ ಹಿಡಿಯುವಂತಹ ಕೆಲಸ ಮಾಡೋಣ ಎಂದು ಹೇಳಿದರು.

ಸು ಫ್ರಂ ಸೋ ಖ್ಯಾತಿಯ ಚಲನಚಿತ್ರ ನಟಿಯಾದ ಸಂಧ್ಯಾ ಅರಕೆರೆ ಅವರು ಮಾತನಾಡಿ ನಾನು ಮೈಸೂರಿನವಳಾಗಿರುವುದು ನನಗೆ ತುಂಬಾ ಸಂತೋಷವಾಗಿದೆ. ಪ್ರತಿ ಭಾರಿ ನಾನು ಮೈಸೂರಿನವರಾಗಿ ದಸರಾ ವೀಕ್ಷಣೆ ಮಾಡುತ್ತಿದ್ದೆ. ಆದರೆ ಈಗ ಸಿನಿಮಾರಂಗದಿಂದ ಬಂದು ಈ ದಸರಾದಲ್ಲಿ ಭಾಗಿಯಾಗಿರುವುದು ನನಗೆ ತುಂಬಾ ಸಂತೋಷ ಉಂಟುಮಾಡಿದೆ ಎಂದು ಹೇಳಿದರು.

ಖ್ಯಾತ ಚಲನಚಿತ್ರ ನಟ ಪೃಥ್ವಿ ಅಂಬರ್ ಅವರು ಮಾತನಾಡಿ ಕೆಡುಕನ್ನು ಗೆಲ್ಲುವಂತಹ ಒಳಿತನ್ನು ಮಾಡುವಂತಹ ಒಂದು ಹಬ್ಬ ಎಂದರೆ ನಮ್ಮ ಮೈಸೂರು ದಸರಾ ಹಬ್ಬ , ಮೈಸೂರು ಎಂದರೆ ನನಗೆ ಚಿಕ್ಕ ವಯಸ್ಸಿನಿಂದಲೂ ಒಂದು ದೊಡ್ಡ ಸೆಳೆತ. ಐತಿಹಾಸಿಕವಾಗಿ, ಸಾಂಸ್ಕೃತಿಕವಾಗಿ ಶ್ರೀಮಂತವಾಗಿರುವ ಜಿಲ್ಲೆ ಎಂದರೆ ಮೈಸೂರು. ಮೈಸೂರು ಎಂದರೆ ನನಗೆ ಹೆಚ್ಚು ಪ್ರೀತಿ ಎಂದು ಹೇಳಿದರು.

ಪ್ರೇಕ್ಷಕರಿಗೆ ಚಲನ ಚಿತ್ರಗಳನ್ನು ಕೊಡುವುದು ಚಲನ ಚಿತ್ರೋತ್ಸವ. ಸಿನಿಮಾ ಕ್ಷೇತ್ರ ಎಂದರೇ ಒಂದು ಪ್ರಭಾವಿ ಕ್ಷೇತ್ರ. ಪ್ರತಿಯೊಂದು ಚಲನ ಚಿತ್ರಗಳು ಸಮಾಜದಲ್ಲಿ ರಚನಾತ್ಮಕ ಬದಲಾವಣೆಗಳಾಗುತ್ತದೆ. ಪ್ರೇಕ್ಷಕರು ಹೆಚ್ಚು ಸಿನಿಮಾಗಳನ್ನು ನೋಡಬೇಕು ಅದರಲ್ಲಿ ಬರುವಂತಹ  ಒಳ್ಳೆಯ ವಿಚಾರಗಳನ್ನು ಪ್ರೇಕ್ಷಕರು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಖ್ಯಾತ ಹಿನ್ನೆಲೆ ಗಾಯಕ ಜಸ್ಕರನ್ ಸಿಂಗ್ ಅವರು ಕೃಷ್ಣಂ ಪ್ರಣಯ ಸಖಿ ಚಿತ್ರದ ದ್ವಾಪರ ದಾಟುತ ನನ್ನನೆ ನೋಡಲು ನನ್ನನ್ನೇ ಸೇರಲು ಬಂದ ರಾಧಿಕೆ ಎಂಬ ಹಾಡು ಹೇಳುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿದರು.

ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿವಿಧ ಕಲಾವಿದರು ನಿರ್ದೇಶಕರಿಗೆ ಸನ್ಮಾನ ಮಾಡಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಚಲನಚಿತ್ರೋತ್ಸವ ಸಮಿತಿಯ ಕಾರ್ಯದರ್ಶಿಗಳಾದ ಟಿ.ಕೆ ಹರೀಶ್ ಅವರು ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕ ತನ್ವೀರ್ ಸೇಠ್ , ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ, ವಿಧಾನ ಪರಿಷತ್ ನ ಸದಸ್ಯ ಡಾ. ಡಿ ತಿಮ್ಮಯ್ಯ, ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು, ಚಲನಚಿತ್ರೋತ್ಸವ ಉಪ ಸಮಿತಿ ಉಪವಿಶೇಷಾಧಿಕಾರಿ ವಿಜಯ್ ಕುಮಾರ್, ಕಾರ್ಯಾಧ್ಯಕ್ಷೆ ಕೆ.ಶೋಭಾ. ಖ್ಯಾತ ಚಲನಚಿತ್ರ ನಟಿಯಾದ ಅಂಜಲಿ, ಖ್ಯಾತ ಸಂಗೀತ ನಿರ್ದೇಶಕರು ನಾಗಾರ್ಜುನ ಶರ್ಮಾ, ನೃತ್ಯ ನಿರ್ದೇಶಕರಾದ  ಮುರುಗ,  ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Key words: social work, film industry, Minister, Dr. H. C Mahadevappa, Mysore

The post ಚಲನಚಿತ್ರಗಳ ಮೂಲಕ ಸಮಾಜಮುಖಿ ಕೆಲಸ ಮಾಡುತ್ತಿರುವ ಅತ್ಯಂತ ಪ್ರಭಾವಿ ಕ್ಷೇತ್ರ ಚಿತ್ರ ರಂಗ- ಸಚಿವ ಡಾ. ಹೆಚ್. ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യുവനടിയുടെ ലൈംഗികാതിക്രമ പരാതി; സംവിധായകന്‍ രഞ്ജിത്ത് അറസ്റ്റില്‍

  കൊച്ചി:യുവനടിയുടെ ലൈംഗികാതിക്രമ പരാതിയില്‍ സംവിധായകനും ചലച്ചിത്ര അക്കാദമി മുന്‍ ചെയര്‍മാനുമായ...

"ஊழலின் பேரரசு திமுக ஆட்சி; மத்திய அரசு கொடுத்த ஒரு‌ பைசாக் கூட.!" – பியூஷ் கோயல் குற்றச்சாட்டு

தமிழ்நாடு சட்டமன்றத் தேர்தல் நெருங்கிவிட்டது. இதையொட்டி இன்று கமலாலயத்தில் பாஜக...

PBKS vs GT : గుజరాత్‌పై పంజాబ్ కింగ్స్ ఘనవిజయం.. అరంగేట్రంలోనే అదరగొట్టిన కూపర్ కానోలీ.!

పంజాబ్ కింగ్స్ తమ ఐపీఎల్ 2026 క్యాంపెయిన్‌ను విక్టరీతో ప్రారంభించింది. ఆస్ట్రేలియా...

ಮಿಡಿದ ಮಾನವೀಯ ಸ್ಪಂದನೆ:  ಮತ್ತಿಗೋಡು ಶಿಬಿರಕ್ಕೆ “ಗಜೇಂದ್ರ “ ಸ್ಥಳಾಂತರ

  ಬೆಂಗಳೂರು, ಮಾ.31: ಒಂಟಿತನದಲ್ಲಿ ಕಳೆಯುತ್ತಿದ್ದ ವೃದ್ಧ ಗಜೇಂದ್ರನಿಗೆ ಇಂದು ಹೊಸ...