25
June, 2026

A News 365Times Venture

25
Thursday
June, 2026

A News 365Times Venture

ಜಾತಿಗಣತಿ ಪ್ರಶ್ನಿಸಿ ಸಲ್ಲಿಸಿದ್ದ PIL ವಿಚಾರಣೆ ನಾಳೆಗೆ ಮುಂದೂಡಿಕೆ

Date:

ಬೆಂಗಳೂರು,ಸೆಪ್ಟಂಬರ್,23,2025 (www.justkannada.in): ರಾಜ್ಯ ಸರ್ಕಾರ ನಡೆಸುತ್ತಿರುವ  ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಪಿಐಎಲ್ ವಿಚಾರಣೆಯನ್ನು ಹೈಕೋರ್ಟ್  ನಾಳೆಗೆ ಮುಂದೂಡಿಕೆ ಮಾಡಿದೆ.

ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಪ್ರಶ್ನಿಸಿ ರಾಜ್ಯ ಒಕ್ಕಲಿಗರಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ವೀರಶೈವ ಲಿಂಗಾಯಿತ ಮಹಾಸಭಾ ಸದಸ್ಯರು ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು.

ಈ ಸಂಬಂಧ ವಾದ ಪ್ರತಿವಾದ ಆಲಿಸಿದ ಸಿಜೆ ಬಖ್ರು, ನ್ಯಾ.ಸಿ.ಎಂ.ಜೋಶಿ ಅವರಿದ್ದ ಪೀಠ ವಿಚಾರಣೆಯನ್ನ ನಾಳೆಗೆ ಮುಂದೂಡಿಕೆ ಮಾಡಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ವಿವೇಕ್ ರೆಡ್ಡಿ, ಅಂಕಿ ಅಂಶ ಸಂಗ್ರಹಕ್ಕೂ ಪ್ರತ್ಯೇಕ ಕಾಯ್ದೆ ಇದೆ. ಆ ಕಾಯ್ದೆಯಲ್ಲಿ ರಾಜ್ಯಕ್ಕೆ ಅಂಕಿ ಅಂಶ ಸಂಗ್ರಹದ ಅಧಿಕಾರ ನೀಡಲಾಗಿಲ್ಲ. ಹಿಂದೆಂದೂ ಇತರೆ ಧರ್ಮದೊಂದಿಗೆ ಜಾತಿಯನ್ನು ಸೇರಿಸಲಾಗಿರಲಿಲ್ಲ ಎಂದರು.

ರಾಜ್ಯ ಸರ್ಕಾದ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಮನು ಸಿಂಘ್ವಿ, ಇದು ಜಾತಿಗಣತಿಯಲ್ಲ. ಇದು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸರ್ವೆ. ಸರ್ಕಾರದ ನೀತಿ ನಿರೂಪಣೆಗೆ ಪೂರಕವಾಗಿ ಸರ್ವೆಯಾಗಿದೆ. ಸಾಮಾಜಿಕ ಕಲ್ಯಾಣ ಕಾರ್ಯಗಳಿಗೆ ಪೂರಕವಾಗಿ ಸರ್ವೆ ನಡೆಸಲಾಗುತ್ತಿದೆ. ಇದಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಬಾರದೆಂದು ಎಂದು  ಮನವಿ ಮಾಡಿದರು.

Key words: High court, cast census, PIL, Hearing, Adjourned

The post ಜಾತಿಗಣತಿ ಪ್ರಶ್ನಿಸಿ ಸಲ್ಲಿಸಿದ್ದ PIL ವಿಚಾರಣೆ ನಾಳೆಗೆ ಮುಂದೂಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എഫ്.സി.ആര്‍.എ ഭേദഗതിയെ വിമര്‍ശിച്ച്‌ ക്രൈസ്തവ സഭകള്‍; ജൂണ്‍ 28ന് രാജ്യവ്യാപക പ്രതിഷേധം

ന്യൂദല്‍ഹി: കേന്ദ്രസര്‍ക്കാര്‍ വിദേശസംഭാവനാ നിയന്ത്രണ ചട്ടത്തില്‍ (എഫ്.സി.ആര്‍.എ) വരുത്തിയ ഭേദഗതിക്കെതിരെ വിമര്‍ശനവുമായി...

ராமதாஸ் – அன்புமணி: `நீங்க எல்லோரும் ஒன்னா நல்லா இருங்க' – பாச சந்திப்பை புறக்கணித்த ஸ்ரீகாந்தி?

பா.ம.க-வில் மருத்துவர் ராமதாஸுக்கும், அவரது மகன் அன்புமணிக்கும் இடையேயான மோதல் ஒன்றரை...

52dB ANC, 54 గంటల బ్యాటరీ బ్యాకప్‌తో భారత్‌లో లాంచ్ అయిన OnePlus Nord Buds 4.. ధర ఎంతంటే.?

OnePlus Nord Buds 4 Launched: ప్రముఖ స్మార్ట్‌ఫోన్ తయారీ సంస్థ...

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ...