30
March, 2026

A News 365Times Venture

30
Monday
March, 2026

A News 365Times Venture

ಎಸ್ ಎಲ್ ಭೈರಪ್ಪ ಅಗಲಿಕೆಯಿಂದ ಬಹುದೊಡ್ಡ ಶೂನ್ಯ ಸೃಷ್ಟಿಯಾಗಿದೆ-ಕೇಂದ್ರ ಸಚಿವ ಹೆಚ್ ಡಿಕೆ ಸಂತಾಪ

Date:

ಬೆಂಗಳೂರು,ಸೆಪ್ಟಂಬರ್,24,2025 (www.justkannada.in): ಸಾಹಿತಿ ಎಸ್ ಎಲ್ ಭೈರಪ್ಪ ಅವರ  ನಿಧನಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್.ಡಿಕೆ,  ‘ಪರ್ವ’ ಮತ್ತು ‘ಉತ್ತರಕಾಂಡ’ ಕಾದಂಬರಿಗಳ ಮೂಲಕ ಮಹಾಭಾರತ ಹಾಗೂ ರಾಮಾಯಣವನ್ನು ನೋಡುವ ಮತ್ತು ಓದುವ ಕ್ರಮವನ್ನೇ ಬದಲಿಸಿದ ಅಭಿಜಾತ ಕಾದಂಬರಿಕಾರ ಪದ್ಮಭೂಷಣ ಎಸ್.ಎಲ್. ಭೈರಪ್ಪನವರು ನಿಧನರಾದರೆಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು.

ಶ್ರೀ ಭೈರಪ್ಪನವರ ಕಾದಂಬರಿಗಳನ್ನು ನಾನು ನಿಕಟವಾಗಿ ಓದಿದ್ದೇನೆ. ಅವರ ಕಥನ ಶೈಲಿ, ಪಾತ್ರ ಸೃಷ್ಟಿಯ ಪ್ರತಿಭೆಗೆ ಮಾರು ಹೋಗಿದ್ದೇನೆ. ಅವರು ಕನ್ನಡ ನೆಲದಲ್ಲಿ ಹುಟ್ಟಿ ಕನ್ನಡದಲ್ಲೇ ಬರೆದ ಅಪ್ಪಟ ಭಾರತೀಯ ಕಾದಂಬರಿಕಾರರು. ಮೇಲಾಗಿ ಹಾಸನ ಜಿಲ್ಲೆಯಲ್ಲಿ ಹುಟ್ಟಿದ್ದ ‘ಅಮರ ಪ್ರತಿಭೆ’ ಎಂಬ ಹೆಮ್ಮೆ ನನ್ನದು. ಅವರ ಅಗಲಿಕೆಯಿಂದ ಬಹುದೊಡ್ಡ ಶೂನ್ಯ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ.

ಶ್ರೀಯುತರ ನಿಧನ ವೈಯಕ್ತಿಕವಾಗಿ ನನಗೆ ಬಹಳ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

Key words: Union Minister, HDK, Condolences, Writer, SL Bhyrappa

The post ಎಸ್ ಎಲ್ ಭೈರಪ್ಪ ಅಗಲಿಕೆಯಿಂದ ಬಹುದೊಡ್ಡ ಶೂನ್ಯ ಸೃಷ್ಟಿಯಾಗಿದೆ-ಕೇಂದ್ರ ಸಚಿವ ಹೆಚ್ ಡಿಕೆ ಸಂತಾಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

KSRTC  ಬಸ್ ಗಳಿಗೆ  ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,30,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ಈಗಾಗಲೇ ದೇಶಾದ್ಯಂತ ಎಲ್ ಪಿಜಿ...

மனோ தங்கராஜ்: `அமைச்சருக்கே சீட் இல்லியா?' – இரவு வரை போராட்டம் – நிர்வாகிகள் சொல்வது என்ன?

கன்னியாகுமரி மாவட்டம் பத்மநாபபுரம் சட்டமன்ற தொகுதியில் சிட்டிங் அமைச்சர் மனோ தங்கராஜிக்கு...

Bihar: ఎమ్మెల్సీకి నితీష్ కుమార్, ఎమ్మెల్యే పదవికి నితిన్ నవీన్ రాజీనామా

బీహార్ రాజకీయాల్లో కీలక పరిణామం చోటుచేసుకుంది. ఎమ్మెల్సీ పదవికి ముఖ్యమంత్రి నితీష్...