29
March, 2026

A News 365Times Venture

29
Sunday
March, 2026

A News 365Times Venture

ನೆರೆ ಹಾನಿ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಸಿದ್ದರಾಮಯ್ಯ

Date:

ಕಲಬುರಗಿ,ಸೆಪ್ಟಂಬರ್,30,2025 (www.justkannada.in):  ಕಲ್ಯಾಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.

ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಭೀಮಾ ಹಾಗೂ ಕೃಷ್ಣಾ ನದಿಗಳಲ್ಲಿ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸಿದರು.

ಇದಕ್ಕೂ ಮುನ್ನ ಸಿಎಂ  ಸಿದ್ದರಾಮಯ್ಯ ಅವರು ಕಲ್ಬುರ್ಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ,  ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆ ವಿಮಾನ ‌ನಿಲ್ದಾಣದಲ್ಲೇ ಪ್ರಾಥಮಿಕ ಸಭೆ ನಡೆಸಿ ವಿವರವಾದ ಮಾಹಿತಿ ಪಡೆದರು.

ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳು ಸಭೆಯಲ್ಲಿದ್ದು ವಿವರಗಳನ್ನು ನೀಡಿದರು.

ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಾದ ಎಂ.ಬಿ‌.ಪಾಟೀಲ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರ ಜೊತೆಯಲ್ಲಿ ಮೊದಲ ಸುತ್ತಿನ‌ ವೈಮಾನಿಕ ಸಮೀಕ್ಷೆಗೆ ತೆರಳಿದರು. ಇದಾದ ಬಳಿಕ  ಬೀದರ್ ಜಿಲ್ಲಾ ವ್ಯಾಪ್ತಿಯಲ್ಲಿನ ಬೆಳೆ ಹಾನಿ ಕುರಿತು ಎರಡನೇ ಸುತ್ತಿನ ವೈಮಾನಿಕ ಸಮೀಕ್ಷೆಯನ್ನು ಮಧ್ಯಾಹ್ನ ಕೈಗೊಂಡರು.

Key words: CM Siddaramaiah, conducts, aerial survey, flood-affected areas

The post ನೆರೆ ಹಾನಿ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಟಾರ್ಚು – ಮರೆಯಲಾಗದ ಒಂದು ಪ್ರಯಾಣ

  ಬೆಂಗಳೂರು: ಇತ್ತೀಚೆಗೆ, ಆಹ್ವಾನದ ಮೇರೆಗೆ ನಾನು ಪ್ರಯೋಗಾತ್ಮಕ ಕನ್ನಡ ಚಲನಚಿತ್ರ...

എഥനോള്‍ ചേര്‍ത്ത പെട്രോളുള്ളതുകൊണ്ട് നമുക്ക് ഇന്ധന പ്രതിസന്ധിയുണ്ടായില്ല, E20 പെട്രോളിനെ ന്യായീകരിച്ച് മോദി

ലഖ്‌നൗ: കേന്ദ്ര സര്‍ക്കാരിന്റെ എഥനോള്‍ മിശ്രിത പെട്രോളിനെ ന്യായീകരിച്ച് പ്രധാനമന്ത്രി നരേന്ദ്ര...

"சிறுபான்மையினர் வாக்குகளை அவ்வளவு எளிதாகக் கவர முடியாது" – விஜய்யை விமர்சிக்கும் கருணாஸ்

தமிழக வெற்றிக் கழகத்தின் தலைவர் விஜய், வருகிற சட்டமன்றத் தேர்தலில் போட்டியிடப்...