29
March, 2026

A News 365Times Venture

29
Sunday
March, 2026

A News 365Times Venture

ವೀರಶೈವ ಲಿಂಗಾಯತರು ಕೆಟ್ಟರೆ ಇಡೀ ರಾಜ್ಯವೇ ಹಾಳಾಗುತ್ತೆ- ಸಚಿವ ಈಶ್ವರ್ ಖಂಡ್ರೆ

Date:

ಬೆಂಗಳೂರು,ಅಕ್ಟೋಬರ್,6,2025 (www.justkannada.in): ವೀರಶೈವ-ಲಿಂಗಾಯತರು ಸುಧಾರಿಸಿದರೆ ರಾಜ್ಯ ಸುಧಾರಿಸುತ್ತದೆ, ವೀರಶೈವ ಲಿಂಗಾಯತರು ಕೆಟ್ಟರೆ ಇಡೀ ರಾಜ್ಯವೇ ಹಾಳಾಗುತ್ತದೆ ಎಂಬ ಜನಜನಿತ ಹೇಳಿಕೆ ಇದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ವೀರಶೈವ -ಲಿಂಗಾಯತರನ್ನು ಬೇರೆ ಮಾಡಲು ಯಾವುದೇ ಶಕ್ತಿಗೂ ಸಾಧ್ಯವಿಲ್ಲ. ಇಬ್ಬರೂ ಒಂದೇ ಎಂದು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರೇ ಪ್ರತಿಪಾದಿಸಿದ್ದಾರೆ. ನಮ್ಮ ಸಮುದಾಯದ ಒಗ್ಗಟ್ಟಿನಲ್ಲಿ ಬಲವಿದೆ. ವಿಘಟನೆಯಲ್ಲಿ ಸೋಲಿದೆ. ವೀರಶೈವ-ಲಿಂಗಾಯತ ಸಮಾನಾರ್ಥಕ ಪದಗಳು. ಇಷ್ಟಲಿಂಗ ಪೂಜೆ ಮಾಡುವವರು ಮತ್ತು ಅಷ್ಟಾವರ್ಣ ಪಂಚಾಚಾರ ಷಟಸ್ಥಳ ಆಚರಣೆ ಮಾಡುವ ಗುರುಗಳು ಮತ್ತು ವಿರಕ್ತರೂ ಇದ್ದಾರೆ. ಹೀಗಾಗಿ ವೀರಶೈವರು ಮತ್ತು ಲಿಂಗಾಯತರು ಒಟ್ಟಿಗೆ ಇರಬೇಕು ಎಂಬುದು ಸಭಾದ ಸ್ಪಷ್ಟ ನಿಲುವಾಗಿದೆ ಎಂದು ತಿಳಿಸಿದರು.

ಸರ್ಕಾರಕ್ಕೂ ಪ್ರತ್ಯೇಕ ಧರ್ಮದ ವಿಚಾರಕ್ಕೂ ಯಾವುದೇ ಸಂಬಂಧವಿಲ್ಲ. ಸಿಎಂ ಸಿದ್ದರಾಮಯ್ಯ ಜನ ಸಮುದಾಯದ ನಾಯಕರಾಗಿದ್ದಾರೆ. ಕೆಲವರು ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದ್ದಾರೆ. ಬಸವಾದಿ ಶರಣರು ಸಮಸಮಾಜದ ಭವ್ಯ ಕನಸು ಕಂಡಿದ್ದರು. ಅದನ್ನೇ ಸಿಎಂ ಪಾಲನೆ ಮಾಡುತ್ತಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕೊಡಿಸಲು ಶ್ರಮಿಸುತ್ತಿದ್ದಾರೆ ಎಂದರು.

Key words: Veerashaiva Lingayats, bad,  state , ruined, Minister, Ishwar Khandre

The post ವೀರಶೈವ ಲಿಂಗಾಯತರು ಕೆಟ್ಟರೆ ಇಡೀ ರಾಜ್ಯವೇ ಹಾಳಾಗುತ್ತೆ- ಸಚಿವ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ಆರೋಪ: ಸ್ಪಷ್ಟನೆ  ನೀಡಿದ ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಮಾರ್ಚ್,28,2026 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್...

ബി.ജെ.പി സീല്‍ വിവാദം: ഡെപ്യൂട്ടി സി.ഇ.ഒ മിഷാല്‍ സാഗര്‍ ഭരതിനെ മാറ്റി

തിരുവനന്തപുരം: തെരഞ്ഞെടുപ്പ് കമ്മീഷന്‍ രാഷ്ട്രീയ പാര്‍ട്ടികള്‍ക്കയച്ച കത്തില്‍ ബി.ജെ.പിയുടെ സീല്‍ ഉള്‍പ്പെട്ട...

அண்ணாவுக்கு பிறகு… நெடுஞ்செழியனை முந்தி கருணாநிதி முதல்வராக, திமுக தலைவராக மாறிய கதை! ஆடுபுலி 11

திமுகவில் துரைமுருகன், கே.என்.நேரு, பொன்முடி, டி.ஆர்.பாலு, ஆ.ராசா, அதிமுகவில் திண்டுக்கல் சீனிவாசன்,...

Story Board : ఇరాన్ ఉచ్చులో ట్రంప్..! యుద్ధం మొదలుపెట్టి.. ఎగ్జిట్ దొరకక అమెరికా అయోమయం

ఎవరైనా యుద్ధానికి ముందు వ్యూహరచన చేస్తారు. యుద్ధం మొదలయ్యాక కూడా అవసరమైతే...