29
March, 2026

A News 365Times Venture

29
Sunday
March, 2026

A News 365Times Venture

CJI ಮೇಲೆ ಶೂ ಎಸೆತಕ್ಕೆ ಖಂಡನೆ: ವಕೀಲನ ಬಂಧಿಸಿ ಕಾನೂನು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

Date:

ಬೆಂಗಳೂರು, ಅಕ್ಟೋಬರ್, 6,2025 (www.justkannada.in): ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಮೂರ್ತಿಗಳಾಗಿರುವ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದು ಅವಮಾನ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಮತ್ತು ನ್ಯಾಯಾಲಯಕ್ಕೆ ಅವಮಾನ ಮಾಡಿರುವ ಕಿಡಿಗೇಡಿ ವಕೀಲನನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕು  ಎಂದು ಸಿಎಂ ಸಿದ್ದರಾಮಯ್ಯ  ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,  ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದವರು. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಸಲ್ಲಿ ಭಧ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ.

ಗೌರವಾನ್ವಿತ ಮುಖ್ಯನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರು ಒಬ್ಬಂಟಿಯಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಕೋಟ್ಯಂತರ ಜಾತ್ಯತೀತ ಮನಸ್ಸುಗಳು ಅವರ ಬೆಂಬಲಕ್ಕೆ ಇವೆ ಎನ್ನುವುದನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಮುಖ್ಯನ್ಯಾಯಮೂರ್ತಿಗಳು ಯಾವುದೇ ಪಕ್ಷ ಇಲ್ಲವೇ ಧರ್ಮಕ್ಕೆ ಸೇರಿದವರಲ್ಲ. ಈ ದೃಷ್ಟಿಯಿಂದ ದೇಶದ ಎಲ್ಲ ಜಾತಿ, ಧರ್ಮ ಮತ್ತು ಪಕ್ಷಗಳ ಜನರು ಸುಪ್ರೀಂ ಕೋರ್ಟ್ ನಲ್ಲಿ ಇಂದು ನಡೆದಿರುವ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ.

ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದುಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟುಹಾಕಿರುವ ಕಾರಣಕ್ಕಾಗಿಯೇ ರಾಕೇಶ್ ಕಿಶೋರ್ ನಂತಹ ಮನುವಾದಿ ಮನಸ್ಸುಗಳು ಸಮಾಜದಲ್ಲಿ  ಹುಟ್ಟಿಕೊಂಡಿವೆ ಎನ್ನುವುದನ್ನು ನಾವು ಮರೆಯಬಾರದು. ನಾಥೂರಾಮ್ ಗೋಡ್ಸೆಯಂತಹ ಒಬ್ಬ ಕೊಲೆಗಡುಕನನ್ನು ದೇಶಪ್ರೇಮಿ ಎಂದು ಮೆರೆಸಲು ಹೊರಟಿರುವ ರೀತಿಯಲ್ಲಿಯೇ ಕೆಲವು ಪುಂಡರು ವಕೀಲನ ಕುಕೃತ್ಯವನ್ನು ಸಂಭ್ರಮಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕಾದ ಅಗತ್ಯ ಇದೆ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

Key words: CM Siddaramaiah, CJI, Shoe, lawyer, arrest

The post CJI ಮೇಲೆ ಶೂ ಎಸೆತಕ್ಕೆ ಖಂಡನೆ: ವಕೀಲನ ಬಂಧಿಸಿ ಕಾನೂನು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ʼಮುಖ್ಯಮಂತ್ರಿ ಪದಕʼ ಪ್ರಕಟ: ಮೈಸೂರಿನ ನಾಲ್ವರು ಸೇರಿ ರಾಜ್ಯದ 153 ಪೊಲೀಸರಿಗೆ ಗೌರವ

  ಬೆಂಗಳೂರು, ಮಾ.೨೮,೨೦೨೬ : 2025ನೇ ಸಾಲಿನ ಮುಖ್ಯಮಂತ್ರಿ ಪದಕ (CM...

ആശങ്ക കുറയുന്നു; രണ്ട് ഇന്ത്യന്‍ എല്‍.പി.ജി കപ്പലുകള്‍ ഹോര്‍മുസ് കടലിടുക്ക് കടന്നു

ന്യൂദല്‍ഹി: ഹോര്‍മുസ് കടലിടുക്കിലൂടെയുള്ള ഗതാഗതം പൂര്‍ണമായും നിരോധിച്ചെന്ന റിപ്പോര്‍ട്ടുകള്‍ ആശങ്കയാകുന്നതിനിടെ രണ്ട്...

"இதற்குப் பெயர்தான் சீட் பங்கீடா?" – கடிந்துக்கொண்ட பி.எல்.சந்தோஷ் ; கப்சிப் நயினார்

அ.தி.மு.க தலைமையிலான தே.ஜ கூட்டணியில், பா.ஜ.க-வுக்கு 27 தொகுதிகள் ஒதுக்கப்பட்டுள்ளன. தொகுதி...

Viral Video: సీఎం బుగ్గపై ముద్దు పెట్టిన మహిళ.. నెట్టింట వీడియో వైరల్..

అసోం ముఖ్యమంత్రి హిమంత బిశ్వ శర్మ ఎన్నికల ప్రచారంలో జరిగిన ఒక...