ಬೆಂಗಳೂರು,ಅಕ್ಟೋಬರ್,7,2025 (www.justkannada.in): ಕನ್ನಡ ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಜಿಲ್ಲಾಡಳಿತ ಬೀಗ ಜಡಿದಿದೆ.
ಪರಿಸರ ನಿಯಮ ಉಲ್ಲಂಘನೆ ಆರೋಪದಡಿ ಕನ್ನಡ ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಡೇಸ್ ಗೆ ಇಲಾಖೆಯಿಂದ ನೋಟಿಸ್ ನೀಡಲಾಗಿತ್ತು. ಈ ನೋಟಿಸ್ ಗೆ ಯಾವುದೇ ಪ್ರತಿಕ್ರಿಯೆ ನೀಡದ ಪರಿಣಾಮ, ಇದೀಗ ಪರಿಸರ ನಿಯಮ ಉಲ್ಲಂಘನೆಯ ಆರೋಪದಡಿ ಬಿಗ್ ಬಾಸ್ ಮನೆಗೆ ಬೀಗವನ್ನು ಜಡಿಯಲಾಗಿದೆ.
ಇಂದು ಬೆಂಗಳೂರಿನ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಇರುವ ಜಾಲಿವುಡ್ ಸ್ಟುಡಿಯೋಸ್ ಗೆ ತಹಶೀಲ್ದಾರ್ ತೇಜಸ್ವಿನಿ ಅವರ ನೇತೃತ್ವದಲ್ಲಿ ಬೀಗ ಹಾಕಲಾಗಿದ್ದು, ಬಿಗ್ ಬಾಸ್ ಸ್ಪರ್ಧಿಗಳು ಸಂಜೆ 7ರೊಳಗೆ ಬಿಗ್ ಬಾಸ್ ಗೌಸ್ ಖಾಲಿ ಮಾಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
Key words: Bigg Boss House, Jollywood Studio, Lock
The post ಜಾಲಿವುಡ್ ಸ್ಟುಡಿಯೋದಲ್ಲಿರುವ ‘ಬಿಗ್ ಬಾಸ್’ ಹೌಸ್ ಗೆ ಬೀಗ ಜಡಿದ ಜಿಲ್ಲಾಡಳಿತ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





