ಬೆಂಗಳೂರು, ಅಕ್ಟೋಬರ್,7,2025 (www.justkannada.in): ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕಾರ್ಯ ಇನ್ನೂ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ನಾಳೆಯಿಮದ ಅಕ್ಟೋಬರ್ 18ರವರೆಗೆ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ದಸರಾ ರಜೆಯನ್ನ ವಿಸ್ತರಣೆ ಮಾಡಲಾಗಿದೆ.
ಈ ಸಂಬಂಧ ಸಭೆ ನಡೆಸಿ ಚರ್ಚಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಸಮೀಕ್ಷೆಯಲ್ಲಿ 1.20 ಲಕ್ಷ ಶಿಕ್ಷಕರು ಭಾಗಿಯಾಗಿದ್ದಾರೆ. ಸಮೀಕ್ಷೆಯ ಪೂರ್ಣ ಕೆಲಸ ಆಗಬೇಕಾದರೆ ರಜೆ ವಿಸ್ತರಣೆ ಮಾಡಬೇಕು ಎಂದು ಶಿಕ್ಷಕರ ಸಂಘ ಮನವಿ ಮಾಡಿತ್ತು. ಹೀಗಾಗಿ ಎಲ್ಲಾ ಸರ್ಕಾರಿ ,ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ದಸರಾ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಮಧ್ಯಂತರ ಪರೀಕ್ಷೆ ನಡೆಯುತ್ತಿದೆ. ಹೀಗಾಗಿ ಪಿಯುಸಿ ಉಪನ್ಯಾಸಕರು ಸಮೀಕ್ಷೆಯಲ್ಲಿ ಭಾಗಯಾಗುವಂತಿಲ್ಲ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ಘೊಷಣೆ ಮಾಡಲಾಗಿದೆ. ಸಮೀಕ್ಷೆಗೆ 12 ದಿನಗಳು ಸಿಗುತ್ತವೆ. ಅಕ್ಟೋಬರ್ 19ಗಿಂತ ಮೊದಲು ಸರ್ವೇಕಾರ್ಯ ಮುಗಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
Key words: Dasara holiday, extension , schools , Oct 18
The post ನಾಳೆಯಿಂದ ಅ.18ರವರೆಗೆ ಶಾಲೆಗಳಿಗೆ ದಸರಾ ರಜೆ ವಿಸ್ತರಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





