ಮೈಸೂರು, ಅಕ್ಟೋಬರ್,10,2025 (www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗಿಲ್ಕಿ ವೆಂಕಟೇಶ್ ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ಸ್ಥಳದ ಇನ್ನೊಂದು ಬದಿಯಲ್ಲಿ ಬಲೂನ್ ಮಾರುವ ಬಾಲಕಿ ಮೇಲೆ ದುಷ್ಕರ್ಮಿ ಅತ್ಯಾಚಾರವೆಸಗಿ ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಎಲ್ಲರನ್ನ ಬೆಚ್ಚಿಬೀಳಿಸಿದೆ. ಹೀಗೆ ಸರಣಿ ಕೊಲೆಗಳಾದರೂ ಸಹ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರುಗಳು ಧ್ವನಿ ಎತ್ತುತ್ತಿಲ್ಲ ಎಂದು ವಿಪಕ್ಷಗಳಿಂದ ಸಾಕಷ್ಟು ಟೀಕೆ ಗಳು ಬಂದಿವೆ.
ಇದೀಗ ಕಡೆಗೂ ಎಚ್ಚೆತ್ತುಕೊಂಡ ಸಿಎಂ ಸಿದ್ದರಾಮಯ್ಯ ನಾಳೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ. ನಾಳೆ ಸಂಜೆ 7.25ಕ್ಕೆ ಮೈಸೂರಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ಕೊಲೆ ಪ್ರಕರಣ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ.
ಬಳಿಕ ಖಾಸಗಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಾಸಾಗಲಿದ್ದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಪಟ್ಟಿ ಬಿಡುಗಡೆಯಾಗಿದೆ. ಪ್ರಕರಣಗಳ ಸಂಬಂಧ ಈಗಾಗಲೇ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಗಿಲ್ಕಿ ವೆಂಕಟೇಶ್ ಕೊಲೆ ಪ್ರಕರಣ 6 ಮಂದಿ ಹಾಗೂ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಕಾರ್ತಿಕ್ ನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
Key words: Serial murder case, Mysore, CM Siddaramaiah, meeting, tomorrow
The post ಮೈಸೂರಿನಲ್ಲಿ ಸರಣಿ ಕೊಲೆ ಪ್ರಕರಣ: ಎಚ್ಚೆತ್ತ ಸಿಎಂ ಸಿದ್ದರಾಮಯ್ಯ, ನಾಳೆ ಸಭೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





