ಮಂಡ್ಯ, ಅಕ್ಟೋಬರ್, 11,2025 (www.justkannada.in): ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡಿ ನಿರ್ಧರಿಸಲಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಸಂಪುಟ ಪುನಾರಚನೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಪಕ್ಷ ವರಿಷ್ಠರು ಚರ್ಚೆ ಮಾಡಿ ನಿರ್ಧರಿಸುತ್ತಾರೆ. ಕಾಂಗ್ರೆಸ್‌ನ 138 ಮಂದಿ ಶಾಸಕರು ಸಚಿವರಾಗಬೇಕೆಂಬ ಆಕಾಂಕ್ಷೆ ಹೊಂದಿರುತ್ತಾರೆ. ಆದರೆ 34 ಮಂದಿಗೆ ಮಾತ್ರ ಅವಕಾಶವಿದೆ. ಸಂಪುಟ ಪುನಾರಚನೆಯ ವೇಳೆ ಯಾರನ್ನು ತೆಗೆಯುತ್ತಾರೋ ಗೊತ್ತಿಲ್ಲ. ಸಚಿವರನ್ನ ಕೈಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ ಎಂದರು.
ಅ.13 ರಂದು ಸಿಎಂ ಸಿದ್ದರಾಮಯ್ಯರಿಂದ ಔತಣ ಕೂಟ ಕುರಿತು ಪ್ರತಿಕ್ರಿಯಿಸಿದ ಸಚಿವ ಚಲುವರಾಯಸ್ವಾಮಿ, ಸಚಿವರು ಜಿಲ್ಲೆಗಳಲ್ಲಿ ಯಾವ ರೀತಿಯ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿರ್ವಹಿಸುತ್ತಿರುವ ಜವಾಬ್ದಾರಿ ಬಗ್ಗೆ ಚರ್ಚೆ ಮಾಡಲು ಸಚಿವರ ಔತಣ ಕೂಟ ಆಯೋಜಿಸಿದ್ದಾರೆ. ಇದನ್ನು ಬೇರೆ ರೀತಿ ಬಿಂಬಿಸಬಾರದು ಎಂದರು.
Key words: Cabinet, Restructure, Minister, Chaluvarayaswamy
The post ಬಿಹಾರ ವಿಧಾನಸಭೆ ರಿಸಲ್ಟ್ ಬಳಿಕ ಸಂಪುಟ ಪುನಾರಚನೆ ಚರ್ಚೆ- ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





