ಬೆಂಗಳೂರು, ಅಕ್ಟೋಬರ್,14,2025 (www.justkannada.in): ಬೆಂಗಳೂರಿನ ರಸ್ತೆಗುಂಡಿಗಳ ಬಗ್ಗೆ ಟ್ವೀಟ್ ಮಾಡಿ ಅಸಮಾಧಾನ ಹೊರಹಾಕಿದ್ದ ಉದ್ಯಮಿ ಕಿರಣ್ ಮಜುಂದಾರ್ ಷಾ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್, ರಸ್ತೆ ದುರಸ್ತಿ, ಅಭಿವೃದ್ದಿ ಉಲ್ಲೇಖಿಸಿ ತಿರುಗೇಟು ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರಿನಲ್ಲಿ ರಾಜ್ಯಸರ್ಕಾರಕ್ಕೆ ಸಾಕಷ್ಟು ಸವಾಲು ಇದೆ. ಈಗಾಗಲೇ ಅದರತ್ತ ಗಮನಹರಿಸಿದ್ದೇವೆ. ರಸ್ತೆ ದುರಸ್ತಿಗೆ 1100 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ಬೆಂಗಳೂರು ನಗರದಲ್ಲಿ 10 ಸಾವಿರ ಗುಂಡಿಗಳನ್ನ ಗುರುತಿಸಿದ್ದು 5 ಸಾವಿರ ಗುಂಡಿ ಮುಚ್ಚಿದ್ದೇವೆ. ಬೆಂಗಳೂರು ಪೂರ್ವ ಪಾಲಿಕೆಯಲ್ಲಿ ಸಾಕಷ್ಟು ಕೆಲಸವಾಗುತ್ತಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಲಕ್ಷಾಂತರ ಜನರಿಗೆ ಅವಕಾಶಗಳು, ಗುರುತು ಮತ್ತು ಯಶಸ್ಸನ್ನು ನೀಡಿದೆ. ಇದು ನಿರಂತರ ಟೀಕೆಯಲ್ಲ, ಸಾಮೂಹಿಕ ಪ್ರಯತ್ನಕ್ಕೆ ಅರ್ಹವಾಗಿದೆ. ಹೌದು, ಎದುರಾಗಿರುವ ಸವಾಲುಗಳನ್ನ ತುರ್ತಾಗಿ ಪರಿಹರಿಸುತ್ತಿದ್ದೇವೆ. ಬೆಂಗಳೂರನ್ನು ಜಾಗತಿಕವಾಗಿ ಸ್ಪರ್ಧಾತ್ಮಕವಾಗಿಸಲು ಪ್ರಮುಖ ಮೂಲಸೌಕರ್ಯ ಕಾರ್ಯಗಳು ನಡೆಯುತ್ತಿವೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
Key words: Kiran Mazumdar Shah, post, potholes, DCM, DK Shivakumar
The post ರಸ್ತೆ ಗುಂಡಿಗಳ ಬಗ್ಗೆ ಕಿರಣ್ ಮಜುಂದಾರ್ ಷಾ ಪೋಸ್ಟ್: ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





