29
June, 2026

A News 365Times Venture

29
Monday
June, 2026

A News 365Times Venture

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಟಿಇಟಿಗೆ ಅಧಿಸೂಚನೆ ಪ್ರಕಟ

Date:

ಬೆಂಗಳೂರು,ಅಕ್ಟೋಬರ್,18,2025 (www.justkannada.in): ಶಿಕ್ಷಕರ ಅರ್ಹತಾ ಪರೀಕ್ಷೆಯ(TET) ನಿರೀಕ್ಷೆಯಲ್ಲಿದ್ದ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದೆ.

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅಧಿಸೂಚನೆ ಹೊರಡಿಸಲಾಗಿದ್ದು ಅಕ್ಟೋಬರ್ 23 ರಿಂದ  ನವೆಂಬರ್ 9ರವರೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ಈ ಕುರಿತು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ಬೆಳಕಿನ ಹಬ್ಬ ದೀಪಾವಳಿಯ ಮುನ್ನ, ಬಹು ದಿನಗಳಿಂದ ನಿರೀಕ್ಷೆಯಲ್ಲಿದ್ದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಇದೀಗ ಚಾಲನೆ ದೊರಕಿರುವುದನ್ನು ತಿಳಿಸಲು ನನಗೆ ಅತೀವ ಸಂತೋಷವಾಗುತ್ತಿದೆ.

ಈ ಪ್ರಕ್ರಿಯೆಯ ಭಾಗವಾಗಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕುರಿತ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಆನ್ ಲೈನ್ ನಲ್ಲಿ 23.10.2025 ರಿಂದ 09.11.2025 ರವರೆಗೆ  ಸಲ್ಲಿಸಬಹುದು. ಪರೀಕ್ಷೆಯನ್ನು 07.12.2025 ರಂದು ನಡೆಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ 31.12.2025 ರಂದು ಫಲಿತಾಂಶ ಪ್ರಕಟಿಸುವ ಉದ್ದೇಶವಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತು ಉಳಿದ ಶಿಕ್ಷಕರ ಹುದ್ದೆಗಳ ಭರ್ತಿಗೂ ಸಿಇಟಿ ಪರೀಕ್ಷೆಯ ಮೂಲಕ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಟಿಇಟಿ ಪರೀಕ್ಷೆಗೆ ಸಜ್ಜಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಶುಭಾಶಯಗಳು! ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

Key words: teaching, aspirants, Notification , TET

The post ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಟಿಇಟಿಗೆ ಅಧಿಸೂಚನೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Ayodhya Donation Theft Case: నిందితులకు షాక్.. వాదిస్తే రూ.5 లక్షల జరిమానా.. బార్ అసోసియేషన్ సంచలన నిర్ణయం

Ayodhya Donation Theft Case: అయోధ్య రామమందిర విరాళాల దుర్వినియోగం కేసులో...

ಬಿಡದಿ ಟೌನ್ ಶಿಪ್ ವಿರುದ್ದ ಹೋರಾಟ: ಸರ್ಕಾರಕ್ಕೆ ಯಾವುದೇ ಪರಿಣಾಮವಾಗಲ್ಲ- ಸಚಿವ ಎಂ.ಬಿ ಪಾಟೀಲ್

ರಾಮನಗರ,ಜೂನ್,29,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿರುದ್ದ ರೈತರ...

കോണ്‍ഗ്രസ് എല്ലായ്‌പ്പോഴും ഇറ്റാലിയന്‍മാരെ പോലെയാണ് ചിന്തിക്കുന്നത്; അവര്‍ക്ക് ഇന്ത്യയില്‍ സ്ഥാനമില്ല: നിതിന്‍ നബിന്‍

ഹൈദരാബാദ്: കോണ്‍ഗ്രസ് പാര്‍ട്ടി എല്ലായ്‌പ്പോഴും ഇറ്റാലിയന്മാരെ പോലെയാണെന്ന് ചിന്തിക്കുന്നതെന്ന് ബി.ജെ.പി പ്രസിഡന്റ്...

'இதுதான் சரியான நேரம்!' – தோழமை கட்சிகளின் கூட்டத்தை கூட்டும் முதல்வர் விஜய்! – பின்னணி என்ன?

ஆட்சியமைக்க ஆதரவளித்த மற்றும் தங்களுக்கு ஆதரவாக கருத்து கூறி வரும் தோழமைக்...