ಮೈಸೂರು, ನವೆಂಬರ್,1,2025 (www.justkannada.in): ರಾಜ್ಯದಲ್ಲಿ ನವೆಂಬರ್ ಕ್ರಾಂತಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿಲು ನಿರಾಕರಿಸಿದ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ನಾನು ಈ ಪ್ರಶ್ನೆಗೆ ಉತ್ತರ ಕೊಡಲ್ಲ ಎಂದಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ತಂದೆ ಅವರು ಈಗಾಗಲೇ ಹೇಳಿದ್ದಾರೆ. ಅವರು ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳಲ್ಲ ಎಂದರು.
ಸರಗೂರಿನಲ್ಲಿ ಹುಲಿ ದಾಳಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ನಿನ್ನೆ ಕೂಡ ಹುಲಿ ದಾಳಿ ಮಾಡಿದೆ. ಒಬ್ಬ ರೈತರು ಮೃತಪಟ್ಟಿದ್ದಾರೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಹಿಂದೆಯೇ ಈ ರೀತಿ ಘಟನೆಗಳು ಆಗಬಾರದು ಅಂತ ಈಶ್ವರ್ ಖಂಡ್ರೆ ಸಭೆ ಮಾಡಿದ್ದರು. ಅಧಿಕಾರಿಗಳಿಗೆ ಸೂಚನೆ ಸಹ ಕೊಟ್ಟಿದ್ದರು. ಮೃತ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡುತ್ತೇವೆ ಎಂದು ತಿಳಿಸಿದರು.
Key words: November Revolution, Yathindra Siddaramaiah, Mysore
The post ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ನವೆಂಬರ್ ಕ್ರಾಂತಿ ಬಗ್ಗೆ ಉತ್ತರಿಸಲ್ಲ – ಯತೀಂದ್ರ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





