20
March, 2026

A News 365Times Venture

20
Friday
March, 2026

A News 365Times Venture

ಮೈಸೂರಿನಲ್ಲಿ ಫ್ಲೈ ಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ-ಸಂಸದ ಯದುವೀರ್

Date:

ಮೈಸೂರು,ನವೆಂಬರ್,5,2025 (www.justkannada.in): ಮೈಸೂರಿನಲ್ಲಿ ಜನರ ವಿರೋಧದ ನಡುವೆ ಫ್ಲೈ ಓವರ್ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ರಾಝ್ಯ ಸರ್ಕಾರಕ್ಕೆ  ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಚ್ಚರಿಕೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಯದುವೀರ್.  ಮೈಸೂರು ನಗರದೊಳಗೆ ಎರಡು ಫ್ಲೈ ಓವರ್ ನಿರ್ಮಾಣ ಮಾಡುವುದಾಗಿ ಹೇಳಿದ್ದಾರೆ, ಸಾಯಿಲ್ ಟೆಸ್ಟ್ ಮಾಡ್ತಿದ್ದಾರೆ ಇದಕ್ಕೆ ನಮ್ಮ ವಿರೋಧವಿದೆ. ಜೆ ಎಲ್ ಬಿ ರಸ್ತೆ, ವಿನೋಬ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ  ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ದ ಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದರು.

ವಿನೋಬ ರಸ್ತೆಯಲ್ಲಿ ಫ್ಲೈ ಓವರ್ ನಿರ್ಮಿಸಲು ಮುಂದಾದರೆ ಮರಗಳ ಹನನ ಆಗಲಿದೆ. ಹಾಗಾಗಿ ಈ ಮಾರ್ಗದಲ್ಲಿ ಫ್ಲೈ ಓವರ್ ನಿರ್ಮಾಣ ಮಾಡಬಾರದು. ಅಭಿವೃದ್ಧಿ ನೆಪದಲ್ಲಿ ಮೈಸೂರಿನ ಸೌಂದರ್ಯ ಹಾಳು ಮಾಡಬಾರದು. ಪಾರಂಪರಿಕ ನಗರಿಯ ಗುರುತು ಉಳಿಸಿಕೊಳ್ಳಬೇಕು. ಸಿಎಂ ಕೂಡ ಗ್ರೇಟರ್ ಮೈಸೂರು ಸಭೆಯಲ್ಲಿ ಮೈಸೂರಿನ ಪಾರಂಪರಿಕತೆ ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಿಎಂ ಅವರ ಸಲಹೆಯಂತೆ ಅಧಿಕಾರಿಗಳು ನಡೆದುಕೊಳ್ಳಬೇಕು ಎಂದು ಸಂಸದ ಯದುವೀರ್ ತಿಳಿಸಿದರು.

ಫ್ಲೈ ಓವರ್ ನಿರ್ಮಾಣವೇ ಶಾಶ್ವತ ಪರಿಹಾರವಲ್ಲ. ಮೆಟ್ರೋ ಮಾರ್ಗ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಮುಂಬೈ ಮಾದರಿಯಲ್ಲಿ ಅಂಡರ್ ಗ್ರೌಂಡ್ ನಲ್ಲಿ ಮೆಟ್ರೋ ನಿರ್ಮಾಣ ಮಾಡಲಿ. ಮೈಸೂರಿನ ಜನಸಂಖ್ಯೆಗೆ ಅನುಗುಣವಾಗಿ ಕಾಮಗಾರಿ ಕೈಗೊಳ್ಳಲಿ. ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಸ್ಥಳೀಯರಿಗೆ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿ ಮಾಡಲಿ. ಜನರ ವಿರೋಧದ ನಡುವೆ ಫ್ಲೈ ಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಜನರ ಸಹಕಾರದೊಂದಿಗೆ ಹೋರಾಟ ರೂಪಿಸುತ್ತೇವೆ.. ಗ್ರೇಟರ್ ಮೈಸೂರಿನಿಂದ ಒಳಿತಾಗಲಿದೆ. ಆದರೆ ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಬೆಂಗಳೂರು ಮಾದರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಬಾರದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

Key words: Legal fight, flyover work, Mysore, MP Yaduveer

The post ಮೈಸೂರಿನಲ್ಲಿ ಫ್ಲೈ ಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ-ಸಂಸದ ಯದುವೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ശബരിമല സ്ത്രീപ്രവേശനം: ആചാരങ്ങളില്‍ ഏകപക്ഷീയമായ നിലപാടില്ല, ചര്‍ച്ചകള്‍ വേണമെന്ന് മുഖ്യമന്ത്രി

തിരുവനന്തപുരം: ശബരിമലയിലെ സ്ത്രീ പ്രവേശനവുമായി ബന്ധപ്പെട്ട വിഷയത്തില്‍ വിശ്വാസികളെ പരിഗണിച്ചുകൊണ്ടുള്ള സമവായത്തിന്റെ...

அதிமுக – பாஜக கூட்டணியின் தொகுதிப் பங்கீடு விவரம் எப்போது வெளியாகும்? – டெல்லியில் இபிஎஸ் பதில்

தமிழகத்தில் சட்டமன்றத் தேர்தல் நெருங்கிக்கொண்டிருக்கிறது. கட்சிகள், தொகுதிப் பங்கீடு பேச்சுவார்த்தைகளை நடத்தி...

S.S.Thaman: త్రివిక్రమ్ నా గురువు.. వచ్చే సినిమాతో ఆస్కారే లక్ష్యం!

S.S.Thaman: ప్రముఖ సంగీత దర్శకుడు ఎస్.ఎస్.తమన్ తన కెరీర్‌లో ఎందరో దర్శకులతో...

ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರು,ಮಾರ್ಚ್,20,2026 (www.justkannada.in): ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗುವ...