ಕಲಬುರಗಿ,ನವೆಂಬರ್,6,2025 (www.justkannada.in): ‘ಭಾರತದ ರಾಷ್ಟ್ರಗೀತೆಯನ್ನು ಬ್ರಿಟಿಷ್ ಅಧಿಕಾರಿಯನ್ನು ಸ್ವಾಗತಿಸಲು ಬರೆಯಲಾಗಿತ್ತು ಎಂದು ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ದ ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ಕಾಗೇರಿ ವಿಡಿಯೊ ಹಂಚಿಕೊಂಡಿರುವ ಸಚಿವ ಪ್ರಿಯಾಂಕ್, ‘ಮತ್ತೊಂದು ದಿನ, ಮತ್ತೊಂದು ಆರ್.ಎಸ್.ಎಸ್.ವಾಟ್ಸ್ ಆಪ್ ಇತಿಹಾಸ ಪಾಠ! ಸಂಸದ ಕಾಗೇರಿ ಅವರು ನಮ್ಮ ರಾಷ್ಟ್ರಗೀತೆಯು ‘ಬ್ರಿಟಿಷ್’ ಸ್ವಾಗತಗೀತೆ ಎಂದು ಪ್ರತಿಪಾದಿಸಿದ್ದಾರೆ. ಇದು ಶುದ್ಧ ಅಸಂಬದ್ಧ’ ಎಂದು ಕಿಡಿ.
‘ರವೀಂದ್ರನಾಥ ಟ್ಯಾಗೋರ್ ಅವರು 1911ರಲ್ಲಿ ಭರೋತೋ ಭಾಗ್ಯೋ ಬಿಧಾತ ಎಂಬ ಸ್ತುತಿಗೀತೆಯನ್ನು ಬರೆದರು; ಅದರ ಮೊದಲ ಚರಣ ‘ಜನ ಗಣ ಮನ’ವಾಯಿತು. ಇದನ್ನು ಮೊದಲು 1911ರ ಡಿಸೆಂಬರ್ 27ರಂದು ಕೋಲ್ಕತ್ತದಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಲ್ಲಿ ಹಾಡಲಾಯಿತು. ರಾಜಮನೆತನಕ್ಕೆ ಗೌರವವಾಗಿ ಅಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯವರು ಇತಿಹಾಸವನ್ನ ತಿಳಿದಿಲ್ಲ. ಪ್ರತಿಯೊಬ್ಬ ಬಿಜೆಪಿ, ಆರ್‌ಎಸ್‌ಎಸ್ ನಾಯಕರು, ಕಾರ್ಯಕರ್ತರು ಮತ್ತು ‘ಸ್ವಯಂಸೇವಕರು’ Rashtriya Swayamsevak Sangh (RSS) ಮುಖವಾಣಿ ಸಂಘಟನೆಯ ಸಂಪಾದಕೀಯಗಳನ್ನು ಓದುವ ಮೂಲಕ ಇತಿಹಾಸವನ್ನು ಪುನರ್ ವಿಮರ್ಶಿಸಬೇಕು. ಸಂವಿಧಾನ, ತ್ರಿವರ್ಣ ಧ್ವಜ ಹಾಗೂ ರಾಷ್ಟ್ರಗೀತೆಯನ್ನು ಅಗೌರವಿಸುವ ದೊಡ್ಡ ಸಂಪ್ರದಾಯವನ್ನು ಆರ್ ಎಸ್ ಎಸ್ ಹೊಂದಿದೆ ಎಂಬುದನ್ನು ಅರಿತುಕೊಳ್ಳಬೇಕು ‘ಈ viRSS ಅನ್ನು ಗುಣಪಡಿಸಬೇಕಾಗಿದೆ’ ಎಂದು ಪ್ರಿಯಾಂಕ್ ಖರ್ಗೆ ಕುಟುಕಿದ್ದಾರೆ.
Key words: MP Kageri, statement, national anthem, Minister, Priyank Kharge
The post ರಾಷ್ಟ್ರಗೀತೆ ಕುರಿತು ಸಂಸದ ಕಾಗೇರಿ ಹೇಳಿಕೆ : ಸಚಿವ ಪ್ರಿಯಾಂಕ್ ಖರ್ಗೆ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





