ಬೆಂಗಳೂರು,ಫೆಬ್ರವರಿ,13,2026 (www.justkannada.in): ರಾಜ್ಯದಲ್ಲಿ 2.75 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ ಕಳೆದ ಎರಡುವರೆ ವರ್ಷದಿಂದ ಸರಿಯಾಗಿ ಯಾವುದೇ ನೇಮಕಾತಿಗಳನ್ನ ಮಾಡದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗುಡುಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭ ಮಾಡದೇ ಯುವಜನತೆಗೆ ಮೋಸ ಮಾಡಿದೆ ಎಂದು ಕಿಡಿಕಾರಿದರು.
ಉದ್ಯೋಗಾವಕಾಶ ಕೇಳಿದ ಯುವಜನರಿಗೆ ನೀವು ನೀಡಿದ್ದು ಲಾಠಿ ಭಾಗ್ಯ!
ಯುವಜನರಿಗೆ ಉದ್ಯೋಗ ನೀಡುವ ಭರವಸೆ ಮೇಲೆ ಅಧಿಕಾರಕ್ಕೆ ಬಂದ ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ಸರ್ಕಾರ ಈಗಾಗಲೇ ಅರ್ಧ ಅವಧಿ ಮುಗಿಸಿದೆ. ಎಷ್ಟು ಯುವಜನರಿಗೆ ಉದ್ಯೋಗ ನೀಡಿದ್ದೀರಿ? 2.75 ಲಕ್ಷ ಖಾಲಿ ಹುದ್ದೆಗಳ ಭರ್ತಿಗೆ ಏನು ಕ್ರಮ ಕೈಗೊಂಡಿದ್ದೀರಿ? ಉದ್ಯೋಗಾವಕಾಶ ಕೇಳಿದ ಯುವಜನರಿಗೆ ನೀವು ನೀಡಿದ್ದು ಲಾಠಿ ಭಾಗ್ಯ! ಎಲ್ಲದ್ದಕ್ಕೂ ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತೀರಿ, ನಿಮ್ಮ ಸರ್ಕಾರ ಏನು ಮಾಡುತ್ತಿದೆ? ರಾಜ್ಯದ ಯುವಜನತೆಯ ಭವಿಷ್ಯಕ್ಕೆ ಕಲ್ಲು ಹಾಕುವ ಕೆಲಸವನ್ನಷ್ಟೇ ನಿಮ್ಮ ಕಾಂಗ್ರೆಸ್ ಸರ್ಕಾರ ಮಾಡಿದೆ! ಎಂದು ವಾಗ್ದಾಳಿ ನಡೆಸಿದ್ದಾರೆ.
Key words: fill, 2.75 lakh, vacant, posts, state, congress, BY Vijayendra
The post ಯುವಜನತೆ ಭವಿಷ್ಯಕ್ಕೆ ಕಲ್ಲು ಹಾಕುವ ಕೆಲಸ: ರಾಜ್ಯದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಏನು ಕ್ರಮ ಕೈಗೊಂಡ್ರಿ? ಬಿವೈ ವಿಜಯೇಂದ್ರ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





