22
April, 2026

A News 365Times Venture

22
Wednesday
April, 2026

A News 365Times Venture

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾವಣೆಗೆ ಸಿಎಂ ಪತ್ರ: ಶಾಸಕ ಸುನೀಲ್ ಕುಮಾರ್ ಹೊಸ ಬಾಂಬ್

Date:

ಬೆಂಗಳೂರು,ಫೆಬ್ರವರಿ,13,2026 (www.justkannada.in):  ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ  ಅಧಿಕಾರಿಯೊಬ್ಬರನ್ನು ವರ್ಗಾಯಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಈ ಕುರಿತು ಬಿಜೆಪಿ ಶಾಸಕ ಟ್ವಿಟ್ ಮಾಡಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಸುನೀಲ್ ಕುಮಾರ್, ಸಿಎಂ ಸಿದ್ಧರಾಮಯ್ಯ ಅವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ ಎಂದು ದೂರಿದರು.

ಇದು ಅಬಕಾರಿ ಹಾಗೂ ಆರೋಗ್ಯ ಇಲಾಖೆಯ ವೃಂದ ನಿಯಮಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸಿದ್ದರಾಮಯ್ಯನವರೂ “ಇಂದ್ರೀಯ” ವಶವಾಗಿ ಆಡಳಿತದ ಹದ ಕಳೆದುಕೊಂಡಿದ್ದಾರೆ ಎಂಬುದಕ್ಕೆ ಇದು ನಿದರ್ಶನವಾಗಿದೆ.

ಅಬಕಾರಿ ಇಲಾಖೆಯಲ್ಲಿ ನಡೆದಿರುವ 6000 ಕೋಟಿ ರೂ.ಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಕಿಕ್ ಬ್ಯಾಕ್ ದಂಧೆಯ ಹಿಂದೆ ಇಂಥ ಅವೈಜ್ಞಾನಿಕ ಹಾಗೂ ನಿಯಮ ಬಾಹಿರ ವರ್ಗಾವಣೆಯ ಸೂಚನೆಗಳು ಕೆಲಸ ಮಾಡಿರುವ ಸಾಧ್ಯತೆಗಳು ದಟ್ಟವಾಗಿದೆ. ಮುಖ್ಯಮಂತ್ರಿಗಳೇ ಆಯಕಟ್ಟಿನ ಇಲಾಖೆಗೆ ಮಾತ್ರ ನೀವು ಈ ರೀತಿ ಎರವಲು ಸೇವೆಯ ಶಿಫಾರಸು ಮಾಡುತ್ತೀರಾ ? ಎಂದು ಶಾಸಕ ಸುನೀಲ್ ಕುಮಾರ್ ಕುಟುಕಿದ್ದಾರೆ.

ಅಥವಾ ನಿಮ್ಮಿಂದ ಮಾಡಿಸುತ್ತಾರಾ? ಆರೋಗ್ಯ ಇಲಾಖೆಯಲ್ಲಿ ವೈದ್ಯರ ಇಲ್ಲದೆ ಸಾರ್ವಜನಿಕರು ನರಳುತ್ತಿರುವಾಗ ಜಿಲ್ಲಾ ವೈದ್ಯಾಧಿಕಾರಿಯೊಬ್ಬನನ್ನು ಅಬಕಾರಿ ಇಲಾಖೆಗೆ ನಿಯೋಜನೆ ಮಾಡುವಂತೆ ನೀವೇ ನಿರ್ದೇಶನ ನೀಡುತ್ತೀರೆಂದರೆ ಅದೆಂತ ಒತ್ತಡ ಹಾಗೂ ವ್ಯಾಮೋಹ ನಿಮ್ಮನ್ನು ಕಾಡುತ್ತಿರಬಹುದು?ಅಥವಾ ಅಧಿಕಾರ ಹಸ್ತಾಂತರದ ಚಿಂತೆ ನಿಮ್ಮನ್ನು ಆವರಿಸಿದೆಯೋ? ಎಂದು ಶಾಸಕ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.

Key words: CM, letter, transfer, MLA, Sunil Kumar,

The post ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾವಣೆಗೆ ಸಿಎಂ ಪತ್ರ: ಶಾಸಕ ಸುನೀಲ್ ಕುಮಾರ್ ಹೊಸ ಬಾಂಬ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എസ് പടക്കപ്പലുകളെ കാഴ്ചക്കാരാക്കി ഇറാനിയന്‍ ടാങ്കര്‍ ‘സില്ലി സിറ്റി’ തീരത്തെത്തി; നാവിക ഉപരോധം മറികടന്ന് ഇറാന്‍ സൈന്യം

ടെഹ്റാന്‍: അമേരിക്കന്‍ നാവികസേനയുടെ ശക്തമായ ഉപരോധവും ആവര്‍ത്തിച്ചുള്ള മുന്നറിയിപ്പുകളും അവഗണിച്ച് ഇറാനിയന്‍...

BJP: ఉగ్రవాదుల్ని ‘‘గారు’’ అని పిలిచిన చరిత్ర కాంగ్రెస్‌ది…

BJP: ప్రధాని నరేంద్రమోడీని ‘‘ఉగ్రవాది’’ అంటూ కాంగ్రెస్ అధ్యక్షుడు మల్లికార్జున ఖర్గే...

ಚಾಮರಾಜನಗರ: 523 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗೆ ಚಾಲನೆ-ಸಿಎಂ ಸಿದ್ದರಾಮಯ್ಯ

ಚಾಮರಾಜನಗರ,ಏಪ್ರಿಲ್, 21,2026 (www.justkannada.in): ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಯನ್ನು  ಸದಾ...