ಮೈಸೂರು,ಫೆಬ್ರವರಿ,23,2026 (www.justkannada.in): ಸಚಿವ ಹೆಚ್.ಸಿ ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ ಇದೆ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿಕೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಚಿವ ಕೆ.ವೆಂಕಟೇಶ್, ಹೆಚ್ ಸಿ ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ ಇದೆ. ಸಚಿವ ಮಹದೇವಪ್ಪ ನನ್ನ ಆತ್ಮೀಯ ಸ್ನೇಹಿತ. ಹೀಗಾಗಿ ಮಹದೇವಪ್ಪ ಸಿಎಂ ಆಗಲಿ ಎಂದು ಹಾರೈಸುತ್ತೇನೆ ಎಂದರು.
ಸದ್ಯಕ್ಕೆ ಸಿಎಂ ಕುರ್ಚಿ ಖಾಲಿ ಇಲ್ಲ. ದಲಿತ ಸಿಎಂ ಕೂಗು ಪಕ್ಷದಲ್ಲಿ ಇದಿಯೋ ಇಲ್ಲವೋ ಗೊತ್ತಿಲ್ಲ ಎಂದು ಸಚಿವ ಕೆ.ವೆಂಕಟೇಶ್ ತಿಳಿಸಿದರು.
Key words: happy, H.C. Mahadevappa, CM, Minister, K. Venkatesh
The post ಹೆಚ್.ಸಿ ಮಹದೇವಪ್ಪ ಸಿಎಂ ಆದ್ರೆ ನನಗೆ ಖುಷಿ- ಸಚಿವ ಕೆ.ವೆಂಕಟೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





