24
February, 2026

A News 365Times Venture

24
Tuesday
February, 2026

A News 365Times Venture

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ- ಸಿಎಂ ಸಿದ್ದರಾಮಯ್ಯ ಕರೆ

Date:

ಚಿಕ್ಕಬಳ್ಳಾಪುರ, ಫೆಬ್ರವರಿ , 23,2026 (www.justkannada.in): ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿ ರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ದೇಶಾದ್ಯಂತ ‘ಮನರೇಗಾವನ್ನು ಉಳಿಸಿ’ ಅಭಿಯಾನ ಪ್ರಾರಂಭಿಸಲಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಭಾಜಪ ಸರ್ಕಾರ ಮನರೇಗಾವನ್ನು ರದ್ದುಪಡಿಸಿ, ವಿಬಿಜಿ ರಾಮ್ ಜಿ ಕಾಯ್ದೆಯನ್ನು ಜಾರಿ ಮಾಡಿದೆ. ಮನರೇಗಾದ ರದ್ದು ಅಗತ್ಯವಿರಲಿಲ್ಲ. ಕೂಲಿಕಾರರು, ಆದಿವಾಸಿಗಳು, ಸಣ್ಣರೈತರಿಗೆ, ಮಹಿಳೆಯರಿಗೆ ಉದ್ಯೋಗದ ಅನುಕೂಲ ಕಲ್ಪಿಸುವ ದಿಸೆಯಲ್ಲಿ 2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ನಾಯಕಿ ಸೋನಿಯಾ ಗಾಂಧಿಅವರ ನೇತೃತ್ವದಲ್ಲಿ ಈ ಕಾಯ್ದೆ ಜಾರಿಯಾಯಿತು. ಇದೇ ಕಾಯ್ದೆಯಲ್ಲದೇ, ಶಿಕ್ಷಣ, ಆಹಾರ, ಮಾಹಿತಿ ಹಕ್ಕು ಸೇರಿದಂತೆ ಹಲವು ಜನಪರ ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಆದರೆ ಈ ಎಲ್ಲ ಜನಪರ ಕಾಯ್ದೆಗಳನ್ನು ದುರ್ಬಲಗೊಳಿಸುವ ಕೆಲಸವನ್ನು ಮೋದಿಯವರ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದರು.

ಮನರೇಗಾ ಅಡಿ 12.16 ಕೋಟಿ ಜನರಿಗೆ ಉದ್ಯೋಗ:

ಸದನದಲ್ಲಿ ಕೇವಲ 8 ಗಂಟೆಗಳ ಕಾಲ ಚರ್ಚೆ ಮಾಡಿದ ಕೇಂದ್ರ ಸರ್ಕಾರ, ನಂತರ ಹೊಸ ಕಾಯ್ದೆಯನ್ನು ಜಾರಿಗೆ ತಂದರು. ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಅಜೀವಿಕ ಮಿಷನ್ ಗ್ರಾಮೀಣ ಕಾಯ್ದೆ  , 12.16 ಕೋಟಿ ಜನರು ಕೆಲಸ ಪಡೆಯುತ್ತಿದ್ದರು. ಇದರಲ್ಲಿ ಸುಮಾರು 53 % ಉದ್ಯೋಗ ಪಡೆಯುತ್ತಿದ್ದರು. ಅಲ್ಲದೇ ಪರಿಶಿಷ್ಟ ಜಾತಿಯ 17% ಮತ್ತು ಪರಿಶಿಷ್ಟ ವರ್ಗದ  11 %  ಜನರು ಉದ್ಯೋಗ ಪಡೆಯುತ್ತಿದ್ದರು. ಈ ಎಲ್ಲ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ ಎಂದರು.

ಗ್ರಾಮ ಸ್ವರಾಜ್ಯ ಪರಿಕಲ್ಪನೆಗೆ ಶಕ್ತಿ ತುಂಬಿದ್ದ ಮನರೇಗಾ

ಮನರೇಗಾ ಕಾಯ್ದೆಗೆ ಗ್ರಾಮೀಣಾಭಿವೃದ್ಧಿಯ ಕನಸು ಕಂಡಿದ್ದ ಮಹಾತ್ಮಾಗಾಂಧಿಯವರ ಹೆಸರನ್ನು ಇಡಲಾಗಿತ್ತು. ಅವರ ಗ್ರಾಮ ಸ್ವರಾಜ್ಯದ ಕಲ್ಪನೆಗೆ ಮನರೇಗಾ ಶಕ್ತಿ ತುಂಬಿತ್ತು. 100 ದಿನಗಳ  ಉದ್ಯೋಗದ ಖಾತ್ರಿ ನೀಡುತ್ತಿದ್ದ ಮನರೇಗಾ  ಕಾಯ್ದೆಯಡಿ, ಕೂಲಿಕಾರರು ತಮ್ಮ ಸ್ಥಳೀಯ ಮಟ್ಟದಲ್ಲಿಯೇ ಕೆಲಸ ಮಾಡಬಹುದಿತ್ತು. ಗ್ರಾಮಪಂಚಾಯತಿ ಮತ್ತು ಗ್ರಾಮಸಭೆಗಳು ನಿರ್ಧರಿಸುವ ಅಧಿಕಾರವಿತ್ತು. ಆದರೀಗ ಈ ನಿರ್ಧಾರವನ್ನು ಕೇಂದ್ರ ಸರ್ಕಾರವೇ ಕೈಗೊಳ್ಳಲಿದೆ. ಕೇಂದ್ರದ ಅನುದಾನ , ಅನುಮತಿ ಇಲ್ಲದೇ , ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕೆಲಸವಾಗಲು ಸಾಧ್ಯ. ಆದ್ದರಿಂದ ಮನರೇಗಾವನ್ನು ಮುಂದುವರೆಸಬೇಕೆಂಬುದು ಕಾಂಗ್ರೆಸ್ ಸರ್ಕಾರದ ಒತ್ತಾಯವಾಗಿದೆ. ಮನರೇಗಾದಲ್ಲಿ 100 ದಿನ ಭತ್ಯೆಯನ್ನು ತಪ್ಪದೇ ಕೊಡಲಾಗುತ್ತಿತ್ತು. ಹೊಸ ಕಾಯ್ದೆಯಂತೆ ಕೇಂದ್ರ 60% ಅನುದಾನ  ಮತ್ತು ರಾಜ್ಯಗಳು 40% ಅನುದಾನ ಕೊಡಬೇಕಾಗಿದೆ. ರಾಜ್ಯದ ಹಿತವನ್ನು ಕಾಪಾಡುವಲ್ಲಿ ಕೇಂದ್ರ ಸೋತಿದೆ. ಅದ್ದರಿಂದ ವಿಬಿಜಿರಾಮ್ ಜಿ ರದ್ದುಪಡಿಸಿ, ಮನರೇಗಾವನ್ನು ಮರುಸ್ಥಾಪಿಸಲು ದೇಶಾದ್ಯಂತ ಕಾಂಗ್ರೆಸ್ ಪಕ್ಷ ಹೋರಾಟ ಮಾಡುತ್ತಿದೆ ಎಂದರು.

ಬೇಡಿಕೆ ಈಡೇರುವವರೆಗೂ ಹೋರಾಟ

ನಮ್ಮ ಬೇಡಿಕೆಗಳು: ವಿಬಿಜಿರಾಮ್ ಜಿ ಯೋಜನೆಯನ್ನು ಸಂಪೂರ್ಣವಾಗಿ ರದ್ದುಪಡಿಸಿ, ಮನರೇಗಾವನ್ನು ಮರು ಜಾರಿಗೊಳಿಸಬೇಕು.  ಜನರ ಉದ್ಯೋಗದ ಹಕ್ಕನ್ನು ಮರುಸ್ಥಾಪಿಸಬೇಕು. ಪಂಚಾಯತ್ ಸ್ವಯಂ ಆಡಳಿತದ ಹಕ್ಕು ಮರುಸ್ಥಾಪನೆ, ದಿನಕ್ಕೆ 400 ರೂ.ಗಳ ಕನಿಷ್ಠ ವೇತನವನ್ನು ದೇಶಾದ್ಯಂತ ನೀಡಬೇಕು. ಈ ಬೇಡಿಕೆಗಳು ಈಡೇರುವವರೆಗೆ ನಮ್ಮ ಆಂದೋಲನ ನಿಲ್ಲುವುದಿಲ್ಲ ಎಂದರು.

ರೈತವಿರೋಧಿ ಕಾಯ್ದೆಗಳನ್ನು ಹೋರಾಟದ ಫಲವಾಗಿ ರದ್ದುಗೊಳಿಸಲಾಯಿತು. ಅದೇ ರೀತಿಯಲ್ಲಿ ಈ ಹೋರಾಟ ನಿಲ್ಲುವುದಿಲ್ಲ. ಈ ಹೋರಾಟಕ್ಕೆ ರಾಜ್ಯದ ಜನರೆಲ್ಲರೂ ನಮ್ಮ ಜೊತೆಯಾಗಬೇಕು. ಹಳ್ಳಿಗಾಡಿನ ಜನರಿಗೆ ಅನುಕೂಲ ಕಲ್ಪಿಸುವ ಮನರೇಗಾ ಯೋಜನೆಯ ಮರುಸ್ಥಾಪಿಸುವ ಕಾಂಗ್ರೆಸ್ ನ ಸಾರ್ಥಕ ಉದ್ದೇಶಕ್ಕೆ ಜನರು ಬೆಂಬಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

Key words: CM Siddaramaiah, Congress, support, fight, MNREGA

The post ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ- ಸಿಎಂ ಸಿದ್ದರಾಮಯ್ಯ ಕರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പള്ളിയിലേക്കുള്ള പ്രവേശനം തടഞ്ഞ് ലഖ്‌നൗ സര്‍വകലാശാല; സഹപാഠികള്‍ക്ക് നിസ്‌കരിക്കാന്‍ കാവല്‍ നിന്ന് ഹിന്ദു വിദ്യാര്‍ത്ഥികള്‍

ലഖ്‌നൗ: ലക്‌നൗ സര്‍വകലാശാലയിലെ മുസ്‌ലിം സുഹൃത്തുക്കള്‍ക്ക് നിസ്‌കരിക്കാനും നോമ്പ് തുറക്കാനും സഹായിക്കുന്നതിന്...

சென்னை கடற்கரை – செங்கல்பட்டு புறநகர் ரயில் சேவைகள் மீண்டும் குறைப்பு; ரயில் பயணிகளுக்கு அதிர்ச்சி

சென்னை எழும்பூர் ரயில் நிலையத்தில் நடைபெற்று வரும் பராமரிப்பு மற்றும் புனரமைப்புப்...

Adulterated Milk: రాజమండ్రిలో కల్తీ పాలతో నలుగురు మృతి.. వెలుగులోకి సంచలన విషయాలు!

Adulterated Milk: రాజమండ్రిలో చోటు చేసుకున్న కల్తీ పాలు విషాదానికి సంబంధించి...

ಮಿಷನ್ ಪ್ರಕೃತಿ : ರಾಜ್ಯದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ

ಬೆಂಗಳೂರು,ಫೆಬ್ರವರಿ,23,2026 (www.justkannada.in): ಸಮಗ್ರ ಶಿಕ್ಷಣ ಕರ್ನಾಟಕ (SSK) ಹಾಗೂ ಡಬ್ಲ್ಯೂ.ಡಬ್ಲ್ಯೂ.ಎಫ್...