ಧಾರವಾಡ,ಫೆಬ್ರವರಿ,24,2026 (www.justkannada.in): ರಾಜ್ಯದಲ್ಲಿ 2.80 ಲಕ್ಷ ಹುದ್ದೆಗಳು ಖಾಲಿ ಇದ್ದರೂ ನೇಮಕಾತಿಗಳನ್ನ ಪ್ರಾರಂಭಿಸದೇ ವಿಳಂಬ ಧೋರಣೆ ತಾಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಧಾರವಾಡದಲ್ಲಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದು ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.
ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘಟನೆ ವತಿಯಿಂದ ಧಾರವಾಡದಲ್ಲಿ ನಡೆಯುತ್ತಿರುವ ಹೋರಾಟ ತೀವ್ರಗೊಂಡಿದ್ದು ಪ್ರತಿಭಟನೆಗೆ ಬಿಜೆಪಿ ನಾಯಕರು ಸಾಥ್ ನೀಡಿದ್ದಾರೆ. ನಗರದ ಶ್ರೀನಗರ ವೃತ್ತದಿಂದ ಜುಬಿಲಿ ವೃತ್ತಕ್ಕೆ ಜಮಾಯಿಸಿರುವ ಸಾವಿರಾರು ಉದ್ಯೋಗಾಕಾಂಕ್ಷಿಗಳು ಕೂಡಲೇ ನೇಮಕಾತಿಗಳನ್ನ ಆರಂಭಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಶಾಸಕ ಅರವಿಂದ ಬೆಲ್ಲದ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪಾಲ್ಗೊಂಡಿದ್ದಾರೆ. ಯುವಜನತೆ ಹೋರಾಟದ ಕಾವು ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದ್ದು ನೇಮಕಾತಿ ಆರಂಭಿಸುವವರೆಗೂ ಹೋರಾಟ ನಿಲ್ಲಲ್ಲ ಎಂದು ಸರ್ಕಾರಕ್ಕೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಮಧ್ಯಾಹ್ನ ಊಟಕ್ಕೂ ತೆರಳದೆ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ನೀರು ಬಿಸ್ಕೆಟ್ ನೀಡುವ ಮೂಲಕ ಸ್ಥಳೀಯರೂ ಸಾಥ್ ನೀಡಿದ್ದಾರೆ ಎನ್ನಲಾಗಿದೆ
Key words: Protests, demanding, filling ,government vacancies, Dharwad
The post ಸರ್ಕಾರಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ತೀವ್ರಗೊಂಡ ಹೋರಾಟ: ಬಿಜೆಪಿ ನಾಯಕರು ಸಾಥ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





