26
February, 2026

A News 365Times Venture

26
Thursday
February, 2026

A News 365Times Venture

ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಕೇಸ್: ಕೇಂದ್ರ ಗೃಹಸಚಿವರಿಗೆ ಪತ್ರ ಬರೆದ ಶ್ರೀರಾಮುಲು

Date:

ಬಾಗಲಕೋಟೆ, ಫೆಬ್ರವರಿ,26,2026 (www.justkannada.in): ಬಾಗಲಕೋಟೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ಮತ್ತು ಚಪ್ಪಲಿ ತೂರಾಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಜಿ ಸಚಿವ ಶ್ರೀರಾಮುಲು ಪತ್ರ ಬರೆದು ಮನವಿ ಮಾಡಿದ್ದಾರೆ.

ಈ ಸಂಬಂಧ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿರುವ ಶ್ರೀರಾಮುಲು,  ಫೆ. 19 ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದ ವೇಳೆ ಕಿಡಿಗೇಡಿಗಳು ಕಲ್ಲು ಚಪ್ಪಲಿ  ತೂರಾಟ ನಡೆಸಿದ್ದರು. ಈ ಮೂಲಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಇದು ಕೇವಲ ಸ್ಥಳೀಯ ಕಿಡಿಗೇಡಿತನವಲ್ಲ, ಇದರ ಹಿಂದೆ ದೊಡ್ಡ ಸಂಚು ಇರುವ ಸಾಧ್ಯತೆ ಇದೆ. ಹೀಗಾಗಿ ಸತ್ಯಾಸತ್ಯತೆ ಹೊರಬರಲು ಎನ್​ಐಎ ತನಿಖೆ ಅಗತ್ಯ ಎಂದು  ಉಲ್ಲೇಖಿಸಿದ್ದಾರೆ.

ಡಿಜೆ ಹಳ್ಳಿ, ಕೆಜಿ ಹಳ್ಳಿ ಘಟನೆಗಳು ಸೇರಿದಂತೆ ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಮೆರವಣಿಗೆ ಮೇಲೆ ನಡೆಯುತ್ತಿರುವ ದಾಳಿಗಳ ಮಾದರಿಯಲ್ಲೇ ಈ ಘಟನೆಯೂ ನಡೆದಿದೆ. ಇಂತಹ ಕೃತ್ಯಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಶ್ರೀರಾಮುಲು ಒತ್ತಾಯಿಸಿದ್ದಾರೆ.

Key words: Stone pelting, case, Bagalkote, Sriramulu , Union Home Minister

The post ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಕೇಸ್: ಕೇಂದ್ರ ಗೃಹಸಚಿವರಿಗೆ ಪತ್ರ ಬರೆದ ಶ್ರೀರಾಮುಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേന്ദ്ര സര്‍ക്കാരിന്റെ കര്‍ഷകവിരുദ്ധ നയങ്ങള്‍ക്കെതിരെ രാജ്യ വ്യാപക പ്രക്ഷോഭത്തിനൊരുങ്ങി സംയുക്ത കിസാന്‍ സഭ

ന്യൂദല്‍ഹി: ഇന്ത്യ-യു.എസ് വ്യാപാര കരാറിനെതിരെ ശക്തമായ പ്രതിഷേധത്തിനൊരുങ്ങി സംയുക്ത കിസാന്‍ മോര്‍ച്ച...

Dhawan: முதல் மனைவி தொடர்ந்த வழக்கு.! `ஏமாற்றிப் பெற்ற சொத்து' – சட்டப் போராட்டத்தில் தவான் வெற்றி

2010-ல் ஆஸ்திரேலியாவுக்கு எதிரான போட்டியில் அறிமுகமான ஷிகார் தவான், ஆகஸ்ட் 2024-ல்...

ಮೊದಲ ಬಾರಿ ಶಾಸಕರಾದವರಿಗೆ ಮಂತ್ರಿಸ್ಥಾನ ಕೊಡಬಾರದೆಂದು ನಿರ್ಣಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಫೆಬ್ರವರಿ,25,2026 (www.justkannada.in):  ಮೊದಲ ಬಾರಿ ಆಯ್ಕೆಯಾದ ಶಾಸಕರಿಗೆ ಸಚಿವ ಸ್ಥಾನ...