27
February, 2026

A News 365Times Venture

27
Friday
February, 2026

A News 365Times Venture

‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಯಂತ್ರಣಕ್ಕೆ ಚಿಂತನೆ- ಸಚಿವ ಮಧು ಬಂಗಾರಪ್ಪ

Date:

ಬೆಂಗಳೂರು,ಫೆಬ್ರವರಿ,26,2026 (www.justkannada.in): 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು (Social Media) ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಆಲೋಚಿಸುತ್ತಿದ್ದು, ಈ ನಿಟ್ಟಿನಲ್ಲಿ ಮಕ್ಕಳು, ಪೋಷಕರು ಮತ್ತು ತಜ್ಞರ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಗುರುವಾರ ಬೆಂಗಳೂರಿನ ಜವಾಹರಲಾಲ್ ನೆಹರು ತಾರಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸಚಿವ ಮಧು ಬಂಗಾರಪ್ಪ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ಪೋಷಕರು ಮೊದಲು ಎಚ್ಚೆತ್ತುಕೊಳ್ಳಬೇಕು

ಮಕ್ಕಳು ಮೊಬೈಲ್ ಚಟಕ್ಕೆ ಬೀಳುವಲ್ಲಿ ಪೋಷಕರ ಪಾತ್ರದ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಚಿವ ಮಧು ಬಂಗಾರಪ್ಪ, “ಇವತ್ತಿನ ವ್ಯವಸ್ಥೆಯಲ್ಲಿ ಮಗು ಅಳುತ್ತಿದೆ ಅಥವಾ ಸುಮ್ಮನಿರಲಿ ಎಂದು ಪೋಷಕರೇ ತಮ್ಮ ಕೈಯಾರೆ ಮೊಬೈಲ್ ಕೊಡುತ್ತಾರೆ. ಸಮಸ್ಯೆಯ ಮೂಲ ಇರುವುದೇ ಅಲ್ಲಿ. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಿಂದ ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬುದು ಕೇವಲ ನಮ್ಮ ರಾಜ್ಯದ್ದಲ್ಲ, ಇಡೀ ದೇಶದ ಸಮಸ್ಯೆಯಾಗಿದೆ,” ಎಂದರು.

ಸಿಎಂ ಸಿದ್ದರಾಮಯ್ಯ  ಅವರ ಸೂಚನೆಯಂತೆ ‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’ ಎಂಬ ಆಂದೋಲನವನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ ಸಚಿವ ಮಧು ಬಂಗಾರಪ್ಪ ಅವರು, “ಮುಖ್ಯಮಂತ್ರಿಗಳು ಈಗಾಗಲೇ ಎರಡು-ಮೂರು ಬಾರಿ ಈ ಬಗ್ಗೆ ಎಚ್ಚರಿಸಿದ್ದಾರೆ. ಇದನ್ನು ಕೇವಲ ತರಗತಿಗಳಿಗೆ ಸೀಮಿತಗೊಳಿಸದೆ, ಒಂದು ಜವಾಬ್ದಾರಿಯುತ ತೀರ್ಮಾನವಾಗಿ ಜಾರಿಗೆ ತರಬೇಕಿದೆ. ಈ ಕುರಿತು ವಿಸ್ತೃತ ಚರ್ಚೆಯ ಅಗತ್ಯವಿದೆ,” ಎಂದು ಹೇಳಿದರು.

ಅಭಿಪ್ರಾಯ ಸಂಗ್ರಹದ ನಂತರ ತೀರ್ಮಾನ

ಮಕ್ಕಳ ಅಭಿಪ್ರಾಯವನ್ನು ಹೇಗೆ ಪಡೆಯಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ ಯಾವುದೇ ತೀರ್ಮಾನ ತೆಗೆದುಕೊಂಡರೂ ಅದು ಮಕ್ಕಳ ಹಿತದೃಷ್ಟಿಯಿಂದಲೇ ಇರುತ್ತದೆ. ಕೇವಲ ಮಕ್ಕಳಷ್ಟೇ ಅಲ್ಲ, ಶಿಕ್ಷಕರು ಮತ್ತು ಪೋಷಕರ ಜೊತೆಗೂ ಚರ್ಚೆ ಮಾಡಬೇಕಿದೆ.  ಪೋಷಕರು ಈ ವಿಷಯದಲ್ಲಿ ಹೆಚ್ಚಿನ ಜವಾಬ್ದಾರಿ ತೋರಬೇಕು. ಸದ್ಯಕ್ಕೆ ಈ ವಿಚಾರ ಚರ್ಚೆಯ ಹಂತದಲ್ಲಿದ್ದು, ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Key words: Minister, Madhu Bangarappa, social media , children

The post ‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’: ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಯಂತ್ರಣಕ್ಕೆ ಚಿಂತನೆ- ಸಚಿವ ಮಧು ಬಂಗಾರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പ്രകോപനപരമായ മുദ്രാവാക്യം; ചിന്ത ജെറോമിനെതിരെ കേസ്

കൊല്ലം: പ്രകോപനപരമായ മുദ്രാവാക്യം വിളിച്ച് പ്രകടനം നടത്തിയെന്ന പരാതിയില്‍ സി.പി.ഐ.എം നേതാവ്...

எஸ்.ஐ தேர்வு: 'எங்கும் தமிழ்' என்பது வாயளவுக் கொள்கை தானா? – திமுக அரசைச் சாடும் எடப்பாடி பழனிசாமி

அதிமுக பொதுச்செயலாளர் எடப்பாடி பழனிசாமி எஸ்.ஐ., தேர்வு குறித்து திமுக அரசுக்கு...

Telangana Education Commission : ఉపాధ్యాయుల‌కు ఆటోమేటిక్ ప‌దోన్న‌తులు ఉండ‌కూడ‌దు

ఉపాధ్యాయుల‌కు ఆటోమేటిక్ ప‌దోన్న‌తులు ఉండ‌కూడ‌ద‌ని తెలంగాణ విద్యా క‌మిష‌న్ అభిప్రాయ‌ప‌డింది.. వారి...

ಉರ್ದು ಜಾಹೀರಾತು: ವಿಪಕ್ಷದ ನಾಯಕರ ಟೀಕೆಗಳಿಗೆ ಖಡಕ್ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ,26, 2026 (www.justkannada.in): ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತು...