2
March, 2026

A News 365Times Venture

2
Monday
March, 2026

A News 365Times Venture

ಇ-ಸ್ವತ್ತು 2.0 ತಂತ್ರಾಂಶದಡಿ ಈವರೆಗೆ 1,14,907 ಅರ್ಜಿಗಳ ಅನುಮೋದನೆ, ವಿಲೇವಾರಿ- ಸಚಿವ ಪ್ರಿಯಾಂಕ್ ಖರ್ಗೆ

Date:

ಬೆಂಗಳೂರು,ಫೆಬ್ರವರಿ,2,2026 (www.justkannada.in): ಇ-ಸ್ವತ್ತು 2.0 ತಂತ್ರಾಂಶದಡಿ ಈವರೆಗೆ ರಾಜ್ಯದಲ್ಲಿ 1,14,907 ಅರ್ಜಿಗಳನ್ನು ಅನುಮೋದಿಸಿ ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಸಾರ್ವಜನಿಕರಿಂದ ಇದುವರೆಗೆ ಒಟ್ಟು 1,38,470 ಅರ್ಜಿಗಳು ಸ್ವೀಕೃತವಾಗಿದ್ದು, 23,563 ಅರ್ಜಿಗಳು ಅನುಮೋದನೆಗಾಗಿ ಬಾಕಿ ಉಳಿದಿವೆ. ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಮತ್ತು ಅರ್ಜಿಗಳನ್ನು ಅನುಮೋದನೆ ಮಾಡುವ ಸಮಯದಲ್ಲಿ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿತ್ತು. “ಈ ಹಿನ್ನೆಲೆಯಲ್ಲಿ ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಕೆಲವು ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದರು.

ಹೊಸದಾಗಿ ಅನುಮೋದನೆಗೊಂಡ ಆಸ್ತಿಗಳಿಗೆ ತಿದ್ದುಪಡಿ ಮಾಡುವ ಅವಕಾಶವನ್ನು ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರವನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ಸಂಯೋಜನೆ ಮಾಡುವ ಕಾರ್ಯವನ್ನು ಮುಂದಿನ 10 ದಿನದೊಳಗೆ ಕ್ರಮವಹಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

Key words: 1,14,907 applications, disposed, Minister, Priyank Kharge

The post ಇ-ಸ್ವತ್ತು 2.0 ತಂತ್ರಾಂಶದಡಿ ಈವರೆಗೆ 1,14,907 ಅರ್ಜಿಗಳ ಅನುಮೋದನೆ, ವಿಲೇವಾರಿ- ಸಚಿವ ಪ್ರಿಯಾಂಕ್ ಖರ್ಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നെതന്യാഹുവിന്റെ ഓഫീസില്‍ മിസൈല്‍ ആക്രമണം നടത്തിയെന്ന് ഐ.ആര്‍.ജി.സി

ടെഹ്‌റാന്‍: ഇറാനെതിരായ യു.എസ്-ഇസ്രഈല്‍ ആക്രമണത്തിന് മറുപടിയായി ഇസ്രഈല്‍ പ്രധാനമന്ത്രി ബെഞ്ചമിന്‍ നെതന്യാഹുവിന്റെ...

காங்கிரஸ் கட்சிக்கு `கவுண்டவுன் ஸ்டார்ட்' – கழற்றிவிடும் மூடில் தி.மு.க!

“காங்கிரஸ் கட்சிக்காக காத்திருந்தது போதும். நம் வலிமை வைத்து தேர்தலை சந்திக்கலாம்”...

Hyderabad: కాలేజీలో దారుణం.. బీటెక్ విద్యార్థినిపై ఇద్దరు యువకులు అఘాయిత్యం

మహిళా రక్షణ కోసం ప్రభుత్వాలు చర్యాలు తీసుకుంటున్నప్పటికీ దారుణాలకు అడ్డుకట్టపడడం లేదు....

ಬೇಸಿಗೆ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ-ಸಚಿವ ಡಾ: ಹೆಚ್.ಸಿ.ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in): ಬೇಸಿಗೆ ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ...